ಕುಂದಾಪುರ (ಫೆ.10): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ಇದೇ ಫೆ.12 ರಿಂದ 18 ರ ತನಕ ಶ್ರೀ ಕ್ಷೇತ್ರ ಮಾರಣಕಟ್ಟೆಯಲ್ಲಿ ನಡೆಯಲಿದೆ.

ಫೆ.12 ರ ಬೆಳಿಗ್ಗೆ 11:00 ಕ್ಕೆ ಮಾರಣಕಟ್ಟೆಯ ಮಹಾಲಿಂಗೇಶ್ವರ ಸಭಾ ಭವನದಲ್ಲಿ ಶಿಬಿರದ ಉದ್ಘಾಟನೆ ನಡೆಯಲಿದ್ದು ,ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಕುಂದಾಪುರ ಇದರ ಅಧ್ಯಕ್ಷರು ಹಾಗೂ ಬೈಂದೂರಿನ ಶಾಸಕ ಶ್ರೀ. ಬಿ.ಎಮ್ .ಸುಕುಮಾರ ಶೆಟ್ಟಿಯವರು ಶಿಬಿರವನ್ನು ಉದ್ಘಾಟಿಸಲಿದ್ದು, ಅದೇ ದಿನ ಸಂಜೆ 6:30ಕ್ಕೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಂದ ಗೀತ ಗಾಯನ, ಕುಣಿತ ಭಜನೆ, ಯಕ್ಷರೂಪಕ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ.










