ಕುಂದಾಪುರ(ಮೇ.19): ಇಲ್ಲಿನ ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆಯು ವಿದ್ಯಾರ್ಥಿಗಳು 2021–22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರಿದ್ದು ಸಂಸ್ಥೆಯ ವಿದ್ಯಾರ್ಥಿಯಾದ ಸಾಗರ್ – 622 ಅಂಕ ಪಡೆಯುವುದರ ಮೂಲಕ ಅತ್ಯುತ್ತಮ ಸಾಧನೆ ತೋರಿದ್ದಾರೆ.
ಪರೀಕ್ಷೆ ಬರೆದ 45 ವಿದ್ಯಾರ್ಥಿಗಳಲ್ಲಿ ಕಾರ್ತಿಕ್ ಶೆಟ್ಟಿ 619 ಅದ್ವಿತಾ ಡಿ ಶೆಟ್ಟಿ – 618 ,ಈಶಾನ್ಯ – 617 ಸ್ಪೂರ್ತಿ –616, ಸಂಜನ್ ಕೆ –611, ಶೇರು ಬಹದ್ದೂರ್ – 610, ಬಿ. ಅರ್. ರಶ್ಮಿ – 609, ಅಭಿಷೇಕ್ – 607, ಅನೀಶ್ ಶೆಟ್ಟಿ – 600 ಅಂಕಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
2323 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ ಉಳಿದ 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡ 100 ಫಲಿತಾಂಶ ಪಡೆದು ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾರೆ. ಸಂಸ್ಥೆಯ ಈ ಸಾಧನೆಗೆ ವಿದ್ಯಾರ್ಥಿಗಳನ್ನು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್, ಕುಂದಾಪುರ (ರಿ) ಇದರ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಮತ್ತು ಖಜಾಂಚಿ ಭರತ್ ಶೆಟ್ಟಿ ಅವರು ಅಭಿನಂದಿಸಿದ್ದಾರೆ.