ಕುಂದಾಪುರ( ಜೂ30): ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ 111ನೇ ಜನುಮದಿನದ ಸಂಭ್ರಮದ ಅಂಗವಾಗಿ ಶ್ರೀ ಸಿದ್ಧಾರ್ಥ ಎಜುಕೇಷನ್ ಸೊಸೈಟಿ ಹಾಗೂ ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಶನ್ ನೀಡುವ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ 2020ಯನ್ನು ಡಾ. ಗೋವಿಂದ ಬಾಬು ಪೂಜಾರಿ ಅವರಿಗೆ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಶಾಸಕ ರೇಣುಕಾಚಾರ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಡಾ.ಗೋವಿಂದ ಬಾಬು ಪೂಜಾರಿಯವರು ಉದ್ಯಮ,ಸಾಮಾಜ ಸೇವಾ ಕ್ಷೇತ್ರಗಳ ಸೇವೆಯನ್ನು ಗುತುತಿಸಿ ಗುರುತಿಸಿ ಹಲವು ಪ್ರಶಸ್ತಿ ಸನ್ಮಾನಗಳು ಅರಸಿಬಂದಿದೆ.
ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ, ಪ್ರಗ್ಯ್ನಾ ಸಾಗರ್, ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಮೊದಲಾದ ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಇವರು ತಮ್ಮ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಹಲವಾರು ಬಡಕುಟುಂಬಗಳಿಗೆ ಸಹಾಯಹಸ್ತ ಚಾಚಿದ್ದಾರೆ.