ಕುಂದಾಪುರ (ಜು,25): ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಕಾಲೇಜು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಹಾಗೂ ಸಾಮಾಜಿಕ ವಲಯದಲ್ಲಿ ಗಮನ ಸೆಳೆದಿದೆ. ಈ ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿರುವುದು ಹಾಗೂ 4೦೦ ಕ್ಕೂ ಮಿಕ್ಕಿ ವಿವಿಧ ಬಗೆಯ ಖಾದ್ಯಗಳನ್ನು ವಿದ್ಯಾರ್ಥಿಗಳು ಸೀಮಿತ ಅವಧಿಯಲ್ಲಿ ತಯಾರಿಸಿರುವುದು ಶ್ಲಾಘನೀಯ ಎಂದು ಬಸ್ರೂರಿನ ಪ್ರತಿಭಾ ಟುಟೋರಿಯಲ್ ನ ಸಂಚಾಲಕ ಸುಬ್ರಹ್ಮಣ್ಯ ಭಟ್ ಹೇಳಿದರು.
ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಹಮ್ಮಿಕೊಂಡ “ಬೆಂಕಿ ರಹಿತ ಅಡುಗೆ ಸ್ಪರ್ಧೆ – ಫುಡ್ ಅರ್ಟ್ 2K22” ನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿನ ಉಪಪ್ರಾಂಶಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಚೈತ್ರ ಕುಂದರ್, ಕಾರ್ಯಕ್ರಮದ ಸಂಯೋಜಕರಾದ ಯೋಗೀಶ ಶಾನುಭೋಗ್, ಸತೀಶ್ ಕಾಂಚನ್, ದೀಕ್ಷಿತಾ ಯು.ಜಿ ಹಾಗೂ ತೀರ್ಪುಗಾರರಾದ ರಕ್ಷಿತ್ ರಾವ್, ನಂದಾ ರೈ, ತ್ರಿವರ್ಣ ಕಂಡ್ಲೂರ್ ಉಪಸ್ಥಿತರಿದ್ದರು. ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಅವಿತಾ ಕೊರಿಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.