ಕುಂದಾಪುರ(ಜು,27): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಕ್ಷಕ – ಶಿಕ್ಷಕ ಸಂಘದ ಸದಸ್ಯರಿಗೆ ನ್ಯಾಕ್ ಪೂರ್ವಭಾವಿ ಸಭೆ ಜು,26 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ‘
ಈ ಕಾರ್ಯಕ್ರಮದಲ್ಲಿ ನ್ಯಾಕ್ ಟೀಮ್ ಭೇಟಿಯ ಕುರಿತು ಚರ್ಚಿಸಲಾಯಿತು.ಸಭೆಯ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಪ್ರೊ.ಕೆ. ಉಮೇಶ್ ಶೆಟ್ಟಿ ಮಾತನಾಡಿ, ಶೀಘ್ರವೇ ಕಾಲೇಜಿಗೆ ನ್ಯಾಕ್ ಟೀಮ್ ಭೇಟಿ ನೀಡಲಿದ್ದು .ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು, ಪೂರ್ವ ವಿದ್ಯಾರ್ಥಿಗಳು, ಹಾಗೂ ಪ್ರಸಕ್ತ ವಿದ್ಯಾರ್ಥಿಗಳ ಜೊತೆ ರಕ್ಷಕ-ಶಿಕ್ಷಕ ಸಂಘವೂ ಸಹ ಕೈ ಜೋಡಿಸಬೇಕೆಂದು ಹೇಳಿದರು.
ಸಭೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಕೆ. ರಾಜಾರಾಮ್ ಶೆಟ್ಟಿ , ಜೊತೆ ಕಾರ್ಯದರ್ಶಿ ಲಕ್ಷ್ಮೀ ಸಿ. ನಾಯ್ಕ್ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕಿ ಶ್ರೀಮತಿ ಅವಿತಾ ಎಮ್. ಕೊರೆಯಾ ನ್ಯಾಕ್ ಭೇಟಿಯ ಕುರಿತು ಮಾತನಾಡಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀ ಸುಧಾಕರ್ ಪಿ. ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪಸ್ಯಾಸಕ ಶ್ರೀ ರಕ್ಷಿತ್ ರಾವ್ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಸತೀಶ್ ಶೆಟ್ಟಿ ನಿರೂಪಿಸಿದರು.