ಕುಂದಾಪುರ: ನಮ್ಮ ದೇಶ ಸ್ವಾತಂತ್ರ್ಯಗೊಂಡು 73 ವರ್ಷಗಳು ಕಳೆದರೂ ಮಹಿಳೆಯರ ಹಾಗೂ ಹೆಣ್ಣುಮಕ್ಕಳ ಸ್ಥಿತಿಗತಿ ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸಿಲ್ಲ ,ಮಹಿಳೆಯರು ತಮ್ಮ ಹಕ್ಕು ಮತ್ತು ಸ್ವತಂತ್ರ ಗಳನ್ನು ಸಂವಿಧಾನಾತ್ಮಕವಾಗಿ ಪಡೆದುಕೊಳ್ಳಬೇಕು, ಆ ಮೂಲಕ ಮಹಿಳಾ ಸಶಕ್ತಿಕರಣ ಸಾಧ್ಯ ಎಂದು ಕಾಲೇಜಿನ ಉಪನ್ಯಾಸಕ ನಾಗರಾಜ್ ಹೆಮ್ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕೆರಾಡಿ ವರಸಿದ್ದಿವಿನಾಯಕ ಕಾಲೇಜು ಹಾಗೂ ಗ್ರಾಮ ಪಂಚಾಯತ್ ಕೆರಾಡಿ ಇದರ ಜಂಟಿ ಆಶ್ರಯದಲ್ಲಿ ಜನವರಿ 24 ರಂದು ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು .ಗ್ರಾಮ ಪಂಚಾಯತ್ ಅಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ,ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿದರು.ಉಪನ್ಯಾಸಕರಾದ ನೇಹಾ, ಅರುಣ್ ಕುಮಾರ್ ಹಾಗೂ ವಿದ್ಯಾರ್ಥಿನಿ ಸೀಮಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.