ಕುಂದಾಪುರ(ಅ,16): ಎಸ್. ಎಸ್. ಎಲ್. ಸಿ ಶಿಕ್ಷಣ ವಿದ್ಯಾರ್ಥಿಗಳ ವೃತ್ತಿಪರ ಬದುಕಿನ ಹಾದಿಗೆ ಮೊದಲ ಮೈಲಿಗಲ್ಲಿನ ಹಂತ. ಇದು ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಹೇಗೆ ಪೂರಕವಾದದ್ದು ಮತ್ತು ಆ ಹಾದಿಯ ವಿವಿಧ ಮಜಲುಗಳು ಹೇಗಿರುತ್ತದೆ ಎನ್ನುವುದನ್ನು ಸವಿಸ್ತಾರವಾಗಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ನಾಗರಾಜ ಕಟೀಲ್ ವಿದ್ಯಾರ್ಥಿಗಳಗೆ ಮಾರ್ಗದರ್ಶನ ನೀಡಿದರು.
ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಅ,15 ರ ಶನಿವಾರಂದು ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ “ವೃತ್ತಿಪರ ಮಾರ್ಗದರ್ಶನ” ಕಾರ್ಯಾಗಾರದಲ್ಲಿ ಖ್ಯಾತ ಸಂಪನ್ಮೂಲ ವ್ಯಕ್ತಿ ಶ್ರೀ ನಾಗರಾಜ್ ಕಟೀಲ್ ರವರು ವಿದ್ಯಾರ್ಥಿಗಳನ್ನುದ್ದೇಶಿಸಿ ವೃತ್ತಿಪರ ಮಾರ್ಗದರ್ಶನದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀಮತಿ ಚಿಂತನಾ ರಾಜೇಶ್ ವಹಿಸಿಕೊಂಡಿದ್ದರು. ಉಪ ಪ್ರಾಂಶುಪಾಲರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್. ಪ್ರಾಸ್ತಾವಿಕ ಮಾತನಾಡಿದರು. ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಶೆಟ್ಚಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಜಗದೀಶ್ ಆಚಾರ್ ಸಾಸ್ತಾನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಗೀತಾ ನಿರೂಪಿಸಿದರು.