ಹೆಮ್ಮಾಡಿ(ನ,1): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವವ ನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಹಿಸಿ ಕನ್ನಡ ಅಭಿಮಾನದ ಬಗ್ಗೆ ಮಹತ್ವ ಸಾರುವ ಸಂದೇಶವನ್ನು ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಜನತಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ನಂದಿ ಇವರು ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ರಾಜ್ಯೋತ್ಸವದ ಶುಭ ಸಂದೇಶವನ್ನು ನೀಡಿದರು.ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಉದಯ್ ನಾಯ್ಕ್ ರವರು ಕನ್ನಡ ನಾಡು-ನುಡಿ-ಸಂಸ್ಕ್ರತಿಯ ಕುರಿತು ಮಾತನಾಡಿದರು.ವಿದ್ಯಾರ್ಥಿಗಳ ಕನ್ನಡ ಗೀತಗಾಯನ ಕಾರ್ಯಕ್ರಮಕ್ಕೆ ಮೆರಗು ನೀಡಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರು,ಬೋಧಕ,ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಪ್ರಾರ್ಥಿಸಿದರು,ವಿದ್ಯಾರ್ಥಿಗಳಾದ ಶ್ರೇಯಸ್.ಎಸ್ ಸ್ವಾಗತಿಸಿ, ಪ್ರತೀಕ್ಷಾ ಹಾಗೂ ಲಾವಣ್ಯ ಕಾರ್ಯಕ್ರಮ ನಿರೂಪಿಸಿ ವಿಘ್ನೇಶ್ ವಂದಿಸಿದರು.