ಹೆಮ್ಮಾಡಿ(ನ,6): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ,ವಕೀಲರ ಸಂಘ(ರಿ)ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ,ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ ಈ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಹಿಸಿದ್ದರು.ಸಮಾರಂಭವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ರಾಜು ಎನ್.ಇವರು ಉದ್ಘಾಟಿಸಿ ಶುಭ ಕೋರಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಇವರು “ಸಾಮಾನ್ಯ ಕಾನೂನು” ಕುರಿತು ಉಪನ್ಯಾಸ ನೀಡಿದರು.ಸಮಾರಂಭದಲ್ಲಿ ಗೌರವಾನ್ವಿತ ಪ್ರಧಾನ ಸಿವಿಲ್ ಮತ್ತು JMFC ನ್ಯಾಯಾಧೀಶರು ಹಾಗೂ ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಯಾಗಿರುವ ಶ್ರೀ ಧನೇಶ್ ಮುಗಳಿ,ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಜೆ.ಶ್ರೀನಾಥ್ ರಾವ್,ಕಂಡ್ಲೂರು ಠಾಣೆಯ ಠಾಣಾಧಿಕಾರಿ ಶ್ರೀ ಪವನ್ ನಾಯಕ್, ಕಾಲೇಜಿನ ಉಪಪ್ರಾಂಶುಪಾಲರು,ಬೋಧಕ,ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಾಣಿಜ್ಯ ಉಪನ್ಯಾಸಕರಾದ ಹರ್ಷ ಶೆಟ್ಟಿ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು . ವಾಣಿಜ್ಯ ಉಪನ್ಯಾಸಕ ಅಭಿಜಿತ್ ವಂದಿಸಿದರು.