ಹೆಮ್ಮಾಡಿ( ನ.13): ಇಲ್ಲಿನ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿ ನಲ್ಲಿ “ಕನ್ನಡ ನಾಡು-ನುಡಿ-ಸಂಸ್ಕೃತಿ” ವಿಷಯದ ಕುರಿತು ವಿದ್ಯಾರ್ಥಿ ವಿಚಾರಗೋಷ್ಠಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಶ್ರೀ ಗಣೇಶ ಮೊಗವೀರರವರು ವಹಿಸಿದ್ದರು. ಸರ್ಕಾರಿ ಪ್ರಥಮದರ್ಜೆ ಕಾಲೇಜು ಬೈಂದೂರಿನ ಅತಿಥಿ ಉಪನ್ಯಾಸಕರಾದ ಎಸ್, ಮಣಿಕಂಠರವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಕನ್ನಡ ನಾಡು-ನುಡಿಯ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ನಮ್ಮ ನೆಲ,ಜಲ, ಸಂಸ್ಕೃತಿ,ಸಂಪ್ರದಾಯವನ್ನು ಗೌರವಿಸುವಂತೆ ಕರೆ ನೀಡಿದರು.
ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳಾವರ,ಕಾಲೇಜಿನ ಉಪಪ್ರಾಂಶುಪಾಲರು,ಬೋಧಕ,ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಕ್ಷಿತಾ, ವರ್ಷಾ ರವಿಶಂಕರ್, ಧನ್ಯ,ಭೂಷಣ್,ಶಿಪಾಲಿ,ದರ್ಶನ್,ಹಾಗೂ ವಿಘ್ನೇಶ್ ವಿಚಾರಗೋಷ್ಠಿಯಲ್ಲಿ ವಿಚಾರವನ್ನು ಮಂಡಿಸಿದರು.
ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ರವರು ಅತಿಥಿಗಳನ್ನು ಪರಿಚಯಿಸಿ,ವಿದ್ಯಾರ್ಥಿಗಳು ಪ್ರಾರ್ಥಿಸಿದರು, ವಿದ್ಯಾರ್ಥಿಗಳಾದ ಕೌಶಲ್ ಕಾರ್ಯಕ್ರಮ ನಿರೂಪಿಸಿ,ಶ್ರೀನಿಧಿ ವಂದಿಸಿದರು.