ಕುಂದಾಪುರ (ನ,18): ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆಯ ಅಗತ್ಯವಿಲ್ಲದಿರಬಹುದು ಆದರೆ ಇಂಗ್ಲೀಷ್ ಭಾಷೆಯ ಬಳಕೆ ಇಂದಿನ ತುರ್ತು. ಹಾಗಾಗಿ ಯಾವುದೇ ಹಿಂಜರಿಕೆ, ಕೀಳರಿಮೆ ಇಲ್ಲದೆ ಮಾತನಾಡುವ ಮೂಲಕ ಸಂವಹನ ಸ್ಪಷ್ಟತೆಯನ್ನು ಮತ್ತು ಭಾಷೆಯ ತೊಡಕುಗಳನ್ನು ನಿವಾರಿಸಿಕೊಳ್ಳಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಶ್ರೀ ಪಿ.ಎ. ಥೋಮಸ್ ಹೇಳಿದರು.
ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ವಹಿಸಿದ್ದರು.ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ಉಪಸ್ಥಿತರಿದ್ದರು.
ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಇಂಗ್ಲೀಷ್ ಸಂಘದ ಸಂಯೋಜಕಿ ಮೋನಿಕಾ ಡಿಸೋಜಾ ಸ್ವಾಗತಿಸಿದರು. ಇಂಗ್ಲೀಷ್ ಉಪನ್ಯಾಸಕ ಸ್ಟಾಲಿನ್ ಡಿ’ಸೋಜ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪ್ರತಿನಿಧಿ ಪ್ರೀತಿ ದ್ವಿತೀಯ ಬಿ.ಕಾಂ. ‘ಸಿ’ ವಂದಿಸಿದರು.