ಕುಂದಾಪುರ ( ನ,18): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ವಾರ್ಷಿಕ ಚಟುಟಿಕೆಗಳ ಉದ್ಘಾಟನೆ ನವೆಂಬರ್ 17 ರಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಯುವ ರೆಡ್ಕ್ರಾಸ್ ಕಾರ್ಯವೈಖರಿಯಲ್ಲಿ ಸ್ವಯಂ ಸೇವಕರ ಪಾತ್ರ ಹಾಗೂ ಇಂದಿನ ಯುವ ಪೀಳಿಗೆ ಹೇಗೆ ತಮ್ಮನ್ನು ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಯುವ ರೆಡ್ಕ್ರಾಸ್ ಸಂಯೋಜನಾಧಿಕಾರಿಯಾದ ಶ್ರೀ ಸತ್ಯನಾರಾಯಣ್ ಪುರಾಣಿಕ್ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸಮಾಜದ ಶ್ರೇಯೋಭಿವೃದ್ದಿಯಲ್ಲಿ ಸೇವಾ ಭಾವನೆ ಯುವ ರೆಡ್ಕ್ರಾಸ್ ಮೂಲಕ ಮೂಡಬೇಕು ಎಂದು ಹೇಳಿದರು.
ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ್ ಶೆಟ್ಟಿ, ಕೋಶಾಧಿಕಾರಿಯಾದ ಶ್ರೀ ಶಿವರಾಮ್ ಶೆಟ್ಟಿ, ಸದಸ್ಯರಾದ ಶ್ರೀ ಗಣೇಶ್ ಆಚಾರ್, ಶ್ರೀ ಸದಾನಂದ ಶೆಟ್ಟಿ, ಆಯುಷ್ಮಾನ್ ಆಸ್ಪತ್ರೆ ಕುಂದಾಪುರದ ವೈದ್ಯಕೀಯ ಅಧೀಕ್ಷಕರಾದ ಡಾ| ಸೋನಿ ಡಿ’ಕೋಸ್ಟ ಉಪಸ್ಥಿತರಿದ್ದರು.
ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ಯುವ ರೆಡ್ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ಸ್ವಾಗತಿಸಿದರು, ಸಹ ಸಂಯೋಜಕಿಯಾದ ಶ್ರೀಮತಿ ಅವಿತಾ ಎಮ್. ಕೊರೆಯಾ ವಂದಿಸಿದರು. ವಿದ್ಯಾರ್ಥಿನಿ ಸೌಭಾಗ್ಯ ಕಿಣಿ ಕಾರ್ಯಕ್ರಮ ನಿರೂಪಿಸಿದರು.