ಕುಂದಾಪುರ (ನ,24) : ಎಲ್ಲಾ ಭಾಷೆಗಳನ್ನು ಗೌರವಿಸುವುದರೊಂದಿಗೆ ಆ ಭಾಷೆಯ ಅನನ್ಯತೆಯನ್ನು ಅರ್ಥೈಸಿಕೊಳ್ಳಬೇಕು,. ಏಕೆಂದರೆ ಭಾಷೆಯ ಮೂಲಕ ಅಲ್ಲಿನ ಪ್ರಾದೇಶಿಕ ಭಿನ್ನತೆಯನ್ನು ಅರ್ಥೈಸಿಕೊಳ್ಳಲು ಸಾಧ್ಯ ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ನಡೆದ ‘ಇಂಗ್ಲೀಷ್ ಆಸ್ ಎ ಸೆಕೆಂಡ್ ಲಾಂಗ್ವೇಜ್’ ಎಂಬ ವಿಷಯದ ಕುರಿತಾದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಮತಿ ಅನಿತಾ ಜಿ.ವಿ. ಹಾಗೂ ಇ ಸಿ ಆರ್ ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕ ಶ್ರೀ ಮೊಹಮ್ಮದ್ ಯಾಸೀನ್ ಮನ್ನಾ ಅವರು ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ಕಾರ್ಯಾಗಾರ ನಡೆಸಿಕೊಟ್ಟರು.
ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ಸ್ವಾಗತಿಸಿ, ಇಂಗ್ಲೀಷ್ ಉಪನ್ಯಾಸಕ ಸ್ಟಾಲಿನ್ ಡಿ’ಸೋಜ ಅತಿಥಿಗಳನ್ನು ಪರಿಚಯಿಸಿ, ಇಂಗ್ಲೀಷ್ ಸಂಘದ ಸಂಯೋಜಕಿ ಮೋನಿಕಾ ಡಿಸೊಜಾ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕಿ ರವೀನಾ ಸಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.