ಕುಂದಾಪುರ(ನ,26) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ಕ್ರಾಸ್ ಘಟಕದ ಜಂಟಿ ಆಶ್ರಯದಲ್ಲಿ ನೆತ್ತರ ನೆರವು ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 23 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದ ವರ್ಗೀಕರಣ ಮಹತ್ವವನ್ನು ಮತ್ತು ರಕ್ತದ ಅನಿವಾರ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಯುವ ರೆಡ್ಕ್ರಾಸ್ ಸಂಯೋಜನಾಧಿಕಾರಿಯಾದ ಶ್ರೀ ಸತ್ಯನಾರಾಯಣ್ ಪುರಾಣಿಕ್ ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳಲ್ಲಿ ಸೇವಾ ಮನೋಭಾವನೆ ಬಹುಮುಖ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸುಭದ್ರ ಸಮಾಜಕ್ಕೆ ಆರೋಗ್ಯಯುತ ಯುವಶಕ್ತಿ ಅವಶ್ಯಕ ಎಂದು ಹೇಳಿದರು. ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಕೋಶಾಧಿಕಾರಿಯಾದ ಶ್ರೀ ಶಿವರಾಮ್ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹ ಸಂಯೋಜಕಿಯಾದ ದೀಪಾ ಪೂಜಾರಿ ಸ್ವಾಗತಿಸಿದರು. ಯುವ ರೆಡ್ಕ್ರಾಸ್ ಘಟಕದ ಸಂಯೋಜಕರಾದ ಶ್ರೀ ಯೋಗೀಶ್ ಶ್ಯಾನುಭೋಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.