ಕುಂದಾಪುರ: (ಡಿ,04) : ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಘಟಕ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್ಕ್ರಾಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಎಚ್.ಐ.ವಿ. ಮತ್ತು ಏಡ್ಸ್ ಕುರಿತು ಅರಿವು ಕಾರ್ಯಕ್ರಮ ನಡೆಯಿತು.
ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀ ಮಹಾಬಲೇಶ್ ಅವರು ಎಚ್.ಐ.ವಿ. ಮತ್ತು ಏಡ್ಸ್ ಹರಡುವ ಬಗೆ, ತಡೆಗಟ್ಟುವ ಕ್ರಮಗಳು ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.
ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಸಭಾಪತಿ ಶ್ರೀ ಜಯಕರ ಶೆಟ್ಟಿ, ಕೋಶಾಧಿಕಾರಿ ಶ್ರೀ ಶಿವರಾಮ ಶೆಟ್ಟಿ, ಸದಸ್ಯರಾದ ಶ್ರೀ ಮುತ್ತಯ್ಯ ಶೆಟ್ಟಿ, ಶ್ರೀ ಗಣೇಶ್ ಆಚಾರ್ ಉಪಸ್ಥಿತರಿದ್ದರು.
ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ವಂದಿಸಿದರು. ಯುವ ರೆಡ್ಕ್ರಾಸ್ ಘಟಕದ ಸಂಯೋಜಕಿ ಶ್ರೀಮತಿ ಅವಿತಾ ಎಮ್. ಕೊರೆಯಾ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್. ಸ್ವಯಂ ಸೇವಕ ಲಕ್ಷ್ಮೀಕಾಂತ್ ಪ್ರಾರ್ಥಿಸಿದರು.