ಕುಂದಾಪುರ (ಜ,26) : ದೇಶದ ಅಭಿವೃದ್ಧಿ ಜನರ ಏಕತೆ ಮತ್ತು ದೇಶಾಭಿಮಾನದಿಂದ ಸಾಧ್ಯ. ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮ ಬೆಳೆಸಿಕೊಳ್ಳಬೇಕು ಆ ಮೂಲಕ ಬಲಿಷ್ಟ ರಾಷ್ಟ್ರ ನಿರ್ಮಾಣವಾಗಬೇಕು ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಫಥ ಸಂಚಲನದ ಗೌರವವನ್ನು ಸ್ವೀಕರಿಸಿ, ಧ್ವಜಾರೋಹಣ ಮಾಡಿ ಮಾತನಾಡಿದರು. ಈ […]
Author: KundaVahini Editor
ಸರಕಾರಿ ಪ್ರೌಢಶಾಲೆ ಆಲೂರು: ರಸಪ್ರಶ್ನೆಯಲ್ಲಿ ರಾಜ್ಯಕ್ಕೆ ಪ್ರಥಮ -ಘನತೆವೆತ್ತ ರಾಜ್ಯಪಾಲರಿಂದ ಗೌರವ
ಕುಂದಾಪುರ ( ಜ,28): ಮುಖ್ಯ ಚುನಾವಣಾಧಿಕಾರಿಗಳ ಕಛೇರಿ, ಬೆಂಗಳೂರು ಮತ್ತು ಚಂದನ ದೂರದರ್ಶನ(ಡಾ.ನಾ.ಸೋಮೇಶ್ವರ ನೆಡೆಸುವ ಥಟ್ ಅಂತ ಹೇಳಿ) ಜಂಟಿಯಾಗಿ ನೆಡೆಸಿದ ಚುನಾವಣಾ ರಸಪ್ರಶ್ನೆಯಲ್ಲಿ ಭಾಗವಹಿಸಿದ 33 ಜಿಲ್ಲೆಗಳ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆ ಆಲೂರು ಇದರ ವಿಧ್ಯಾರ್ಥಿಗಳಾದ ಗ್ರೀಷ್ಮ ಮತ್ತು ಪ್ರಜ್ಞಾ ಇವರನ್ನು ಬೆಂಗಳೂರು ಪುರಭವನದಲ್ಲಿ ನೆಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಗೌರವಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಚುನಾವಣಾ ಆಯುಕ್ತರಾದ ಮನೋಜ್ ಕುಮಾರ ಮೀನಾ […]
ಕುಂದಾಪುರ: ವಿ.ಕೆ.ಆರ್.ಶಾಲೆಯ ಗಾರ್ಗಿ ದೇವಿ ಪರೀಕ್ಷಾ ಪೆ ಚರ್ಚಾ 2024 ಕ್ಕೆ ಆಯ್ಕೆ
ಕುಂದಾಪುರ( ಜ,28): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ ಇವಳು ಪರೀಕ್ಷಾ ಪೆ ಚರ್ಚಾ 2024 ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದು ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ಜೊತೆ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾಳೆ. ಈಕೆ ದೇವಲ್ಕುಂದದ ಅಶೋಕ್ ಸುವರ್ಣ ಮತ್ತು ನಾಟ್ಯ ವಿದುಷಿ ಪ್ರವಿತಾ […]
ರಾಷ್ಟ್ರಮಟ್ಟದ ಕಂಚಿನ ಪದಕ ವಿಜೇತೆ ಗಾರ್ಗಿದೇವಿಗೆ ಸನ್ಮಾನ
ಕುಂದಾಪುರ (ಜ.23): ಶಿಕ್ಷಣ ಮಂತ್ರಾಲಯ, ಭಾರತ ಸರಕಾರವು ನಡೆಸಿದ ರಾಷ್ಟ್ರ ಮಟ್ಟದ 2023-24ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿಯನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗಾರ್ಗಿ ದೇವಿಯ ಪೋಷಕರಾದ ಶ್ರೀ […]
ಗಣರಾಜ್ಯೋತ್ಸವದ ಪೆರೆಡ್ಗೆ ಕರ್ನಾಟಕದ ಪ್ರತಿನಿಧಿಯಾಗಿ ಕುಂದಾಪುರದ ವಿ.ಕೆ.ಆರ್. ಶಾಲೆಯ ಗಾರ್ಗಿ ದೇವಿ ಆಯ್ಕೆ
ಕುಂದಾಪುರ (ಜ.23): ಶಿಕ್ಷಣ ಮಂತ್ರ್ರಾಲಯ, ಭಾರತ ಸರಕಾರವು ನಡೆಸಿದ ರಾಷ್ಟ್ರ ಮಟ್ಟದ 2023-24ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ ಇವಳು ನವದೆಹಲಿಯಲ್ಲಿ ನಡೆಯುವ 75ನೇ ಗಣರಾಜ್ಯೋತ್ಸವ ಪೆರೆಡ್ಗೆ ಆಯ್ಕೆಯಾಗಿ ಕರ್ನಾಟಕ […]
ಡಾIಬಿ. ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಗಣರಾಜ್ಯೋತ್ಸವ ಪೆರೇಡ್ ಗೆ ಆಯ್ಕೆ
ಕುಂದಾಪುರ (22): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಕಿರಣ್ ಕುಮಾರ್ ಎನ್., ದ್ವಿತೀಯ ಬಿ.ಬಿ.ಎ. ಇವರು ಬೆಂಗಳೂರಿನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸರಕಾರಿ ಪ್ರೌಢಶಾಲೆ ಆಲೂರಿನ ವಿಧ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಂದಾಪುರ (ಜ,22): ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಗಳ ಕಛೇರಿ ಹಾಗೂ ಡಿಡಿ ಚಂದನ (ದೂರದರ್ಶನ) ದ ಸಂಯುಕ್ತ ಆಶ್ರಯದಲ್ಲಿ ನೆಡೆದ ರಾಜ್ಯಮಟ್ಟದ ಚುನಾವಣಾ ಸಾಕ್ಷರತಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಅತ್ಯಂತ ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮ ಶಾಲೆಯಾದ ಕುಂದಾಪುರ ತಾಲೂಕಿನ ಅಲೂರು ಸರಕಾರಿ ಪ್ರೌಢಶಾಲೆಯ ಹೆಮ್ಮೆಯ ವಿಧ್ಯಾರ್ಥಿಗಳಾದ ಗ್ರೀಷ್ಮ ಮತ್ತು ಪ್ರಜ್ಞಾ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸ್ಪರ್ಧೆಯಲ್ಲಿ 34 ಶೈಕ್ಷಣಿಕ ತಾಲೂಕಿನ ವಿಧ್ಯಾರ್ಥಿಗಳ […]
ಮೊಗವೀರ ಯುವ ಸಂಘಟನೆ- ಹೆಮ್ಮಾಡಿ ಘಟಕದ ನೂತನ ಅಧ್ಯಕ್ಷರಾಗಿ ದಿನೇಶ್ ಕಾಂಚನ್ ಬಾಳಿಕೆರೆ ಆಯ್ಕೆ
ಹೆಮ್ಮಾಡಿ (ಜ.20): ಮೊಗವೀರ ಯುವ ಸಂಘಟನೆ(ರಿ),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇದರ 2024-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ದಿನೇಶ್ ಕಾಂಚನ್ ಬಾಳಿಕೆರೆ, ಕಾರ್ಯದರ್ಶಿಯಾಗಿ ಜಗದೀಶ ನೆಂಪು ಹಾಗೂ ಕೋಶಾಧಿಕಾರಿಯಾಗಿ ವಿಜಯ ಕಾಂಚನ್ ನಾಡ ಆಯ್ಕೆಯಾಗಿದ್ದಾರೆ. ಬಗ್ವಾಡಿಯ ಶ್ರೀ ಮಹಿಷಾಸುರ ಮರ್ದಿನಿ ಸಭಾ ಭವನ ದಲ್ಲಿ ಜನವರಿ 20 ರಂದು ನಡೆದ 2022- 24ನೇ ಸಾಲಿನ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಹೆಮ್ಮಾಡಿ ಘಟಕದ ಹಾಲಿ ಅಧ್ಯಕ್ಷರಾದ ಲೋಹಿತಾಶ್ವ ಆರ್.ಕುಂದರ್ ಕಾರ್ಯಕ್ರಮದ […]
ಸಾಲಿಗ್ರಾಮ: ಟೀಮ್ ಯಕ್ಷ ಬ್ರಹ್ಮ ಶ್ರೀ ವತಿಯಿಂದ ವೈಧ್ಯಕೀಯ ನೆರವು- ಧನ ಸಹಾಯ ಹಸ್ತಾಂತರ
ಸಾಲಿಗ್ರಾಮ (ಜ.20): ಇಲ್ಲಿನ ಟೀಮ್ ಯಕ್ಷ ಬ್ರಹ್ಮ ಶ್ರೀ ಸ್ವಯಂ ಸೇವಾ ಸಂಘಟನೆಯ ವತಿಯಿಂದ ಅನಾರೋಗ್ಯ ಪೀಡಿತ ಶ್ರೀ ಸುರೇಶ್ ಮೊಗವೀರ ರವರ ಚಿಕಿತ್ಸಾ ವೆಚ್ಚ ಬರಿಸಲು ಸಾಲಿಗ್ರಾಮ ಜಾತ್ರೆಯ ಪ್ರಯುಕ್ತ ಜನವರಿ 18 ರಂದು ಸಾಲಿಗ್ರಾಮ ಮೇಳದ ಯಕ್ಷಗಾನವನ್ನು ಆಯೋಜಿಸಿ ಸಂಗ್ರಹಿಸಿದ ಹಣವನ್ನು ಧನ ಸಹಾಯದ ರೂಪದಲ್ಲಿ ಶ್ರೀ ಸುರೇಶ್ ಮೊಗವೀರರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ,ಮೇಳದ ಯಜಮಾನರಾದ ಶ್ರೀ ಕಿಶನ್ […]
ಮೂಡ್ಲಕಟ್ಟೆ ಎಂ ಐ ಟಿ : ಅಪರಾಧ ತಡೆ ಮಾಸಾಚರಣೆ
ಕುಂದಾಪುರ(ಜ,20): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ, ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ನ ಪಿ ಎಸ್ ಐ ಆಗಿರುವ ಶ್ರೀ ಪವನ್ ನಾಯಕ್ ಹಾಗೂ ಪಿ ಎಸ್ ಐ ಶ್ರೀ ನೂತನ್ ಡಿ ಇ ಅವರು ಆಗಮಿಸಿದ್ದರು. ಪವನ್ ನಾಯಕ್ ಅವರು ಮಾತನಾಡಿ […]










