ಹೆಮ್ಮಾಡಿ(ಸೆ .11): ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕುಂದಾಪುರದ ಆರ್. ಎನ್ ಶೆಟ್ಟಿ ಪಿಯು ಕಾಲೇಜು ಆಯೋಜಿಸಿದ ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಾನ್ವಿ, ರಿತಿಷಾ, ಅನಘ, ಗ್ರೀಷ್ಮ, ಧೃತಿ , ಐಶು, ಭೂಮಿಕಾ, ದೀಕ್ಷಾ, ಅನಘ, ಸಿಂಚನ, ನಿಶ್ಮಿತಾ ಇವರುಗಳು ಕ್ರೀಡಾ ಸ್ಫೂರ್ತಿ ಮೆರೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಹಾಗೆ […]
Author: KundaVahini Editor
ಯುವ ಬಂಟರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ
ಕುಂದಾಪುರ (ಸೆ, 5) : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆಯ ಸಹ ಶಿಕ್ಷಕರಾದ ಶ್ರೀ ವಸಂತರಾಜ ಶೆಟ್ಟಿ ಅವರನ್ನು ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು ಸನ್ಮಾನಿಸಿ ಗೌರವಿಸುವ ಮೂಲಕ ಆಚರಣೆ ಮಾಡಲಾಯಿತು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶ್ರೀ ವಸಂತರಾಜ ಶೆಟ್ಟಿ ಯುವ ಬಂಟರ ಸಂಘದ ಪ್ರತಿಯೊಂದು ಕಾರ್ಯಕ್ರಮಗಳನ್ನು ಬಹಳ ಹತ್ತಿರದಿಂದ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಶಿಕ್ಷಕರ ದಿನಾಚರಣೆ
ಕುಂದಾಪುರ(ಸೆ,5): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಪ್ಟಂಬರ್ 05 ರಂದು ಸಂಜಯ ಗಾಂಧಿ ಪ್ರೌಢಶಾಲೆಯ ನಿವೃತ್ತ ಸಹ ಶಿಕ್ಷಕರಾದ ಶ್ರೀ ಜಯಂತ ಶೆಟ್ಟಿ ದಂಪತಿಗಳನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಸನ್ಮಾನಿಸಿ ಗೌರವಿಸುವ ಮೂಲಕ ಆಚರಣೆ ಮಾಡಲಾಯಿತು. ಸನ್ಮಾನವನ್ನು ಸ್ವೀಕರಿಸಿದ ಜಯಂತ ಶೆಟ್ಟಿ ಅವರು ಮಾತನಾಡುತ್ತಾ ನಾವು ಕಲಿಸಿದ ವಿದ್ಯಾರ್ಥಿಗಳು ಸಮಾಜದ ಶ್ರೇಷ್ಠ ವ್ಯಕ್ತಿಗಳಾಗಿ ಗುರುತಿಸಿಕೊಂಡಾಗ […]
ಕೋಟ : ಗುರುವಂದನೆ- ಸಾಧಕ ದಂಪತಿಗಳಿಗೆ ಸನ್ಮಾನ
ಕೋಟೇಶ್ವರ( ಸೆ .08):ಕರ್ಣಾಟಕ ಯಕ್ಷಧಾಮ ಮಂಗಳೂರು, ಸಾಲಿಗ್ರಾಮ ಮಕ್ಕಳ ಮೇಳ ಕೋಟ, ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಗುರುವಂದನೆ, ಸಾಧಕ ದಂಪತಿಗಳಿಗೆ ಸನ್ಮಾನ ಮತ್ತು ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಭಾನುವಾರ ಕೋಟ ಶ್ರೀ ಹಂದೆ ಮಹಾಗಣಪತಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಕಲ್ಕೂರ ಪ್ರತಿಷ್ಠಾನದ ಎಸ್. ಪ್ರದೀಪ ಕುಮಾರ ಕಲ್ಕೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಮಕ್ಕಳು ಕಂಪ್ಯೂಟರ್ ಗೊಂಬೆಗಳಾಗಿದ್ದಾರೆ, ಸನಾತನ ಶ್ರದ್ಧೆ, ನಂಬಿಕೆ ದೂರವಾಗಿದೆ. […]
ಗುರುವೇ ನಿನಗೆ ನಮನ
ಏನೆಂದು ಕರೆಯಲಿ ನಿನ್ನ?ನೀ ನನ್ನ ಬಾಳಲಿ ತುಂಬಿದೆ ಬಣ್ಣ.ಆಚಾರ ವಿಚಾರಗಳನ್ನು ತಿಳಿಸಿದ ಆಚಾರ್ಯನೇ?ಅಧ್ಯಯನದ ಕಡೆಗೆ ಧ್ಯಾನ ಹರಿಸಿದ ಅಧ್ಯಾಪಕನೇ?ವಿದ್ಯೆಯನ್ನು ಧಾರೆಯರಿಸಿದ ಉಪಾಧ್ಯಾಯನೇ?ಮನ ಪೀಡಿತರನ್ನು ಪ್ರಜ್ಞೆ – ಪಾಂಡಿತ್ಯದಿಂದ ಪೋಷಿಸಿದ ಪಂಡಿತನೇ?ಶಿಕ್ಷೆ ಇಂದ ಜೀವನವನ್ನು ರೂಪಿಸಿದ ಶಿಕ್ಷಕನೇ?ಶಸ್ತ್ರಾಸ್ತ್ರ – ಶಾಸ್ತ್ರಗಳನ್ನು ಕಲಿಸಿದ ಶಾಸ್ತ್ರಿಯೇ?ಜ್ಞಾನ ಗಂಗೆಯನು ಗೆದ್ದ ಜ್ಞಾನಿಯೇ?ನುಡಿದಂತೆ ನಡೆದ ಮಹನಿಯೇ?ನನ್ನ ಎಳಿಗೆಯ ಮೇಲೆ ಸದಾ ಇರುವುದು ನಿನ್ನ ಗಮನಲಗುವಾಗಿ ಬಾಳನ್ನು ಬೆಳಗಿಸಿದ ಗುರುವೇನಿನಗೆ ಕೋಟಿ ಕೋಟಿ ನಮನ. ಡಾ. ಉಮ್ಮೆ ಸಲ್ಮಾ […]
ಹೆಮ್ಮಾಡಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸಂಪನ್ನ
ಹೆಮ್ಮಾಡಿ (ಸೆ.01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.) ಹೆಮ್ಮಾಡಿ, ಇವರ ಸಹಕಾರದೊಂದಿಗೆ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಅಕ್ಟೋಬರ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ)ದ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ […]
ಶಿಕ್ಷಕರ ದಿನಾಚರಣೆ ಪ್ರಯುಕ್ತ ಶ್ರೀ ಗಣೇಶ್ ಮೊಗವೀರರಿಗೆ ಸನ್ಮಾನ
ಹೆಮ್ಮಾಡಿ (ಸೆ. 05): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.),ಅಂಬಲಪಾಡಿ,ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶ್ರೀ ಗಣೇಶ್ ಮೊಗವೀರ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ […]
ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ : ಕುಂದಾಪುರ ಟ್ರ್ಯಾಕ್ & ಫೀಲ್ಡ್ ನ ದನ್ವೀನ್ ಸಾಧನೆ
ಕುಂದಾಪುರ ( ಸೆ.02): ಸಿ ಬಿ ಎಸ್ ಇ ಬೋರ್ಡ್ ಹಾಗೂ ಪಿ ಎಸ್ ಎಸ್ ಇ ಎಂ ಆರ್ ಶಾಲೆ ದಾವಣಗೆರೆ ಆಯೋಜಿಸಿದ ರಾಜ್ಯಮಟ್ಟದ ಸಿಬಿಎಸ್ಇ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅಥ್ಲೆಟಿಕ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪ್ರಶಾಂತ್ ಶೆಟ್ಟಿಯವರು ವಿಜೇತರಿಗೆ ಅಭಿನಂದನೆ ತಿಳಿಸಿದ್ದಾರೆ.
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಶಟಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಜ್ವಲ್ ಪೈ ರಾಜ್ಯಮಟ್ಟಕ್ಕೆ
ಉಡುಪಿ( ಸೆ .02): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಭಂಡಾರ್ಕರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ 2025ರ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಪೈ ಎಂ ಇವರು ಜಿಲ್ಲಾಮಟ್ಟದಲ್ಲೂ ಅತ್ಯುತ್ತಮ ಪ್ರದರ್ಶನದೊಂದಿಗೆ ರಾಜ್ಯಮಟ್ಟದಲ್ಲಿ ನಡೆಯುವ ಪಂದ್ಯ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, […]
ಹೆಮ್ಮಾಡಿ: ಜನತಾ ಪಿ ಯು ಕಾಲೇಜಿನ ಮರಿಯಾ ವೈಯೊಲ ಬರೆಟ್ಟೋ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ .02): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರಿಯಾ ವೈಯೊಲ ಬರೆಟ್ಟೋ ಜಿಲ್ಲಾ ಮಟ್ಟದಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.










