ಕುಂದಾಪುರ( ಫೆ.24): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಜನತಾ ಗ್ರೂಪ್, ಕೋಟ ಇದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಎಂ.ಎಸ್. ಕೃಷ್ಣ ಇವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು ಮುಂದಿನ ಎರಡು ವರ್ಷಗಳ ವಿದ್ಯಾರ್ಥಿ ಜೀವನವನ್ನು ಯಾವ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಹಾಗೆಯೇ ಅರ್ಹತೆ, ಸಾಮರ್ಥ್ಯ ಮತ್ತು ಉದ್ಯೋಗಕ್ಕೆ ಬೇಕಾದ ಸೂಕ್ತತೆಗಳನ್ನು ಬೆಳೆಸಿಕೊಳ್ಳಲು […]
Author: KundaVahini Editor
ಶ್ರೀ ಚಂದ್ರಶೇಖರ್ ಬಸ್ರೂರು ರವರಿಗೆ “ಭಾರತ ಸೇವಾ ರತ್ನ ಪ್ರಶಸ್ತಿ”
ಕುಂದಾಪುರ (ಫೆ.24):ಸುದ್ದಿ ಕಿರಣ ಟಿವಿ ವಾಹಿನಿ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕೊಡಮಾಡುವ “ಭಾರತ ಸೇವಾ ರತ್ನ ಪ್ರಶಸ್ತಿ” ಯನ್ನು ಶ್ರೀ ಚಂದ್ರಶೇಖರ ಬಸ್ರೂರು ರವರಿಗೆ ಲಭಿಸಿದೆ. ಫೆ. 20 ರಂದು ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣ ಬೆಂಗಳೂರು ಇಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ರಂಗಭೂಮಿ ಕಲಾವಿದರಾಗಿ,ನಾಟಕ ರಚನೆ ಹಾಗೂ ನಿರ್ದೇಶಕರು,ಸಿನಿಮಾ ನಟ,ನಿರ್ದೇಶಕ,ನಿರ್ಮಾಪಕರಾಗಿ,ಸಾರ್ವಜನಿಕ ಹೋರಾಟದಲ್ಲಿ ಮುಂಚೂಣಿಯಾಗಿ ಇವರು ಸೇವೆ ಸಲ್ಲಿಸಿರುತ್ತಾರೆ.
ಡಾI ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫೆ.28 ಹಾಗೂ ಮಾ.01 ರಂದು ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟ
ಕುಂದಾಪುರ (ಫೆ.23): ಡಾIಬಿ.ಬಿ. ಹೆಗ್ಡೆ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಾಕೂಟವು ಫೆಬ್ರವರಿ 28 ಮತ್ತು ಮಾರ್ಚ್ 01ರಂದು ಕಾಲೇಜಿನ ಬಿ.ಎಮ್.ಎಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕೊಳ್ಕೆಬೈಲು ದಿ. ಚಂದ್ರಶೇಖರ ಶೆಟ್ಟಿಯವರ ಸ್ಮರಣಾರ್ಥದ ಬೆಳ್ಳಿ ಟ್ರೋಫಿಯ ಈ ಪಂದ್ಯಾಟದಲ್ಲಿ 26 ಕಾಲೇಜಿನ ಮಹಿಳಾ ತಂಡಗಳು ಭಾಗವಹಿಸಲಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ. ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್ಎಸ್ ಶಿಬಿರದಲ್ಲಿ ನಡೆದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಸಂಪನ್ನ
ಮಾರಣಕಟ್ಟೆ(ಫೆ.21): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್ಎಸ್ ವಾರ್ಷಿಕ ಶಿಬಿರವು ಫೆ.12ರಿಂದ 18 ರ ತನಕ ಮಾರಣಕಟ್ಟೆಯಲ್ಲಿ ನಡೆದಿದ್ದು, ಕ್ಯಾಂಪನಲ್ಲಿ ಶಿಬಿರಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಉಪಯೋಗವಾಗುವಂತೆ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರವನ್ನು ಫೆ.14 ರಂದುಮಾರಣಕಟ್ಟೆಯ ಮಹಾಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು. ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಮತ್ತು ಕಾಲೇಜು, ಕುತ್ಪಾಡಿ ಉದ್ಯಾವರ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ,ಇನ್ನರ್ ವಿಲ್ ಕ್ಲಬ್ ಕುಂದಾಪುರ ದಕ್ಷಿಣ ,ಧರ್ಮಸ್ಥಳ […]
ಪಡುಗಡಲಿನಿಂದ ಕೃತಿ ಲೋಕಾರ್ಪಣೆ
ಕುಂದಾಪುರ(ಫೆ.21): ಪಡುಗಡಲಿನಿಂದ ಕೃತಿಯಲ್ಲಿ ಕಡಲಿಗೆ ಸಂಬಂಧಿಸಿದಂತೆ ಜನಪದೀಯ ವಿಚಾರ, ವೈಚಾರಿಕ ಚಿಂತನೆ, ಸಂಸ್ಕೃತಿ-ಸಂಪ್ರದಾಯದ ವಿವರಣೆಗಳಿವೆ. ಖಾರ್ವಿಯವರು ಮೀನುಗಾರಿಕೆಯಲ್ಲಿ ಪಡೆದ ನೈಜ ಅನುಭವಗಳ ಮಿಶ್ರಣ ಈ ಕೃತಿಯಲ್ಲಿದೆ. ಮೀನುಗಾರಿಕೆ ಮತ್ತು ಕಡಲಿನ ಕುರಿತು ಇಷ್ಟು ಸಂಖ್ಯೆಯಲ್ಲಿ ಅಂಕಣಗಳನ್ನು ಬರೆದಿದ್ದು ಇದೇ ಮೊದಲು. ಮೀನುಗಾರಿಕಾ ಪದವಿಯಲ್ಲಿ ಪಠ್ಯವಾಗುವಷ್ಟು ಪ್ರಬುದ್ಧ ಮತ್ತು ಸಮೃದ್ಧ ಸಾಹಿತ್ಯ ಇದರಲ್ಲಿದೆ.” ಎಂದು ಹೊಸದಿಗಂತ ಪತ್ರಿಕೆಯ ಅಂಕಣಕಾರರಾದ ಹಕ್ಲಾಡಿ ಸಂದೇಶ್ ಹೆಚ್ ನಾಯ್ಕ್ ರವರು ಹೇಳಿದರು. ಇವರು ಕಿನ್ನಿಗೋಳಿಯ ಯುಗಪುರುಷ […]
ಜಿಲ್ಲಾಧ್ಯಕ್ಷರಾಗಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಆಯ್ಕೆ
ಕುಂದಾಪುರ (ಫೆ.20): ಲಯನ್ಸ್ , ರೊಟ್ರ್ಯಾಕ್ಟ್, ಜೇಸಿ, ಹಳೆ ವಿದ್ಯಾರ್ಥಿ ಸಂಘ, ಯುವ ಬಂಟರ ಸಂಘ, ಉಪನ್ಯಾಸಕರ ಸಂಘ ಸೇರಿದಂತೆ ಹತ್ತು ಹಲವು ಸಂಘಟನೆಗಳಲ್ಲಿ ಅಧ್ಯಕ್ಷ ಗಾದಿಯೂ ಸೇರಿದಂತೆ ವಿವಿಧ ಹುದ್ದೆಗಳನ್ನು ನಿರ್ವಹಿಸಿರುವ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಸಾಹಿತ್ಯಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ, ಲಯನ್ಸ್ ಇಂಟರ್ನ್ಯಾಷನಲ್ ಲೀಡರ್ ಶಿಪ್ ಅವಾರ್ಡ್, ಮಲ್ಟಿಪಲ್ ಯಂಗ್ ಲಯನ್ ಅವಾರ್ಡ್ ,ರಾಷ್ಟ ಪ್ರಶಸ್ತಿ ಪುರಸ್ಕೃತ ನಿರೂಪಕ ಅಕ್ಷಯ ಹೆಗ್ಡೆ ಮೊಳಹಳ್ಳಿ ಯವರು ಅಖಿಲ […]
ಕವನ ಸ್ಪರ್ಧೆ – ನರೇಂದ್ರ ಎಸ್. ಗಂಗೊಳ್ಳಿ ದ್ವಿತೀಯ ಸ್ಥಾನ
ಗಂಗೊಳ್ಳಿ (ಫೆ. 13) : ಕುಂದ ಸಿರಿ ಬಳಗ ತನ್ನ ಜಾಲತಾಣಗಳ ಮೂಲಕ ಆಯೋಜಿಸಿದ್ದ ಕನ್ನಡದಲ್ಲಿ ಕವನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ರಚಿಸಿದ “ಮೃತ್ಯು” ಕವನವು ಬಹುಮಾನಕ್ಕೆ ಭಾಜನವಾಗಿದ್ದು 1000 ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಸಿ. ಎ. ಪರೀಕ್ಷೆಯಲ್ಲಿ ವಿದ್ಯಾಶ್ರೀ ಮಧ್ಯಸ್ಥ ಉತ್ತೀರ್ಣ
ಕುಂದಾಪುರ (ಫೆ. 13) : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಡಿಸೆಂಬರ್ 2021ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ತ್ರಾಸಿಯ ವಿದ್ಯಾಶ್ರೀ ಮಧ್ಯಸ್ಥ ಉತ್ತೀರ್ಣರಾಗಿದ್ದಾರೆ. ಇವರು ತ್ರಾಸಿಯ ಅನಂತ ಮಧ್ಯಸ್ಥ ಮತ್ತು ಪೂರ್ಣಿಮಾ ಮಧ್ಯಸ್ಥ ಇವರ ಪುತ್ರಿ. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ.
ಪಡುಗಡಲಿನಿಂದ ಕೃತಿ ಲೋಕಾರ್ಪಣೆ
ಕುಂದಾಪುರ (ಫೆ. 13) : ಪಡುಗಡಲಿನಿಂದ ಕೃತಿಯಲ್ಲಿ ಕಡಲಿಗೆ ಸಂಬಂಧಿಸಿದಂತೆ ಜನಪದೀಯ ವಿಚಾರ, ವೈಚಾರಿಕ ಚಿಂತನೆ, ಸಂಸ್ಕೃತಿ-ಸಂಪ್ರದಾಯದ ವಿವರಣೆಗಳಿವೆ. ಖಾರ್ವಿಯವರು ಮೀನುಗಾರಿಕೆಯಲ್ಲಿ ಪಡೆದ ನೈಜ ಅನುಭವಗಳ ಮಿಶ್ರಣ ಈ ಕೃತಿಯಲ್ಲಿದೆ. ಮೀನುಗಾರಿಕೆ ಮತ್ತು ಕಡಲಿನ ಕುರಿತು ಇಷ್ಟು ಸಂಖ್ಯೆಯಲ್ಲಿ ಅಂಕಣಗಳನ್ನು ಬರೆದಿದ್ದು ಇದೇ ಮೊದಲು. ಮೀನುಗಾರಿಕಾ ಪದವಿಯಲ್ಲಿ ಪಠ್ಯವಾಗುವಷ್ಟು ಪ್ರಬುದ್ಧ ಮತ್ತು ಸಮೃದ್ಧ ಸಾಹಿತ್ಯ ಇದರಲ್ಲಿದೆ ಎಂದು ಹೊಸದಿಗಂತ ಪತ್ರಿಕೆಯ ಅಂಕಣಕಾರರಾದ ಹಕ್ಲಾಡಿ ಸಂದೇಶ್ ಹೆಚ್ ನಾಯ್ಕ್ ಅವರು ಹೇಳಿದರು. […]
ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಮಾರಣಕಟ್ಟೆ, (ಫೆಬ್ರವರಿ 13) : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ 2021- 22 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಫೆ.12ರಂದು ಶ್ರೀ ಕ್ಷೇತ್ರ ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಜರಗಿತು. ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಮಾರಣಕಟ್ಟೆ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಸದಾಶಿವ ಶೆಟ್ಟಿ ಯವರು ದೀಪ ಪ್ರಜ್ವಲಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು […]










