ಕುಂದಾಪುರ (ಜು.23): ಶಿಕ್ಷಣದ ಗುಣಮಟ್ಟ ವ್ಯಕ್ತಿತ್ವದ ನಿರ್ಮಾಣಕ್ಕೆ ಸಹಾಯಕವಾಗಬೇಕು. ಅಂತಹ ಶಿಕ್ಷಣ ಆಂತರ್ಯದ ಶಕ್ತಿಯನ್ನು ಉದ್ದೀಪನಗೊಳಿಸಿ ಜ್ಞಾನ ಸಂಪಾದಿಸುವAತಾಗಬೇಕಾದರೆ ಪಠ್ಯದೊಂದಿಗೆ ಪಠ್ಯಪೂರಕ ಚಟುವಟಿಕೆಗಳು ಮುಖ್ಯ. ಅವುಗಳಿಂದ ಶಿಕ್ಷಣ ಪರಿಪೂರ್ಣವಾಗಲು ಸಾಧ್ಯ ಈ ರೀತಿಯ ಚಟುವಟಿಕೆಗಳು ವರ್ತಮಾನದ ತುರ್ತು ಎಂದು ಉಡುಪಿಯ ಎಮ್ಜಿಎಮ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಕೆ. ಸುರೇಂದ್ರನಾಥ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ […]
Author: KundaVahini Editor
ಕ್ರಿಯೇಟಿವ್ ಪಿ.ಯು.ಕಾಲೇಜು : ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ
ಕಾರ್ಕಳ(ಜು ,18) : ಇಲ್ಲಿನ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 6/8 ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕ ಇತ್ತೀಚೆಗೆ ಉದ್ಘಾಟನೆ ಗೊಂಡಿತು. ಉದ್ಘಾಟಕರಾಗಿ ಆಗಮಿಸಿದ 6 ಕರ್ನಾಟಕ ಎನ್.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ರವರು ಮಾತನಾಡಿ ಎನ್.ಸಿ.ಸಿ ಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ […]
ಎಚ್ಎಮ್ಎಮ್ ಮತ್ತು ವಿ ಕೆ ಆರ್ ಶಾಲೆ: ಪೋಷಕತ್ವದ ಕುರಿತಾದ ಕಾರ್ಯಗಾರ
ಕುಂದಾಪುರ(ಜುಲೈ 18) : ಕುಂದಾಪುರ ಎಜುಕೇಶನ್ ಸೊಸೈಟಿ ( ರಿ. )ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳು, ಈಶಾನ್ಯ ಇಂಡಿಯನ್ ಫೌಂಡೇಶನ್ ಬೆಂಗಳೂರು ಮತ್ತು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕರಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಮನೆಯು ಕಲಿಕೆಗೆ ಪೂರಕವಾದ ವಾತಾವರಣವಾಗಿರಬೇಕು. ಪೋಷಕರು ಮಗುವಿನ ಭಾವನೆಗಳಿಗೆ ಸ್ಪಂದಿಸಿ ಅವರಿಗೆ ಬೆನ್ನೆಲುಬಾಗಿ ಪ್ರತಿಯೊಂದು ಚಟುವಟಿಕೆಯಲ್ಲಿ ಸಹಕರಿಸಬೇಕು ಎಂದು ಡಾ. […]
ಬಿ. ಬಿ. ಹೆಗ್ಡೆ ಕಾಲೇಜು: 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಉದ್ಘಾಟನೆ
ಕುಂದಾಪುರ (ಜು.21): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಿದ 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರವನ್ನು ಕೆನರಾ ಬ್ಯಾಂಕ್ ಕುಂದಾಪುರ ಶಾಖೆಯ ಮುಖ್ಯ ಪ್ರಬಂಧಕರಾದ ಶ್ರೀ ರಾಜು ಕೆ. ಉದ್ಘಾಟಿಸಿ, ಕಾಲೇಜು ನೀಡುತ್ತಿರುವ ಈ ತರಬೇತಿಯನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಮ್ಯೂಚುಯಲ್ ಫಂಡ್ ಹೂಡಿಕೆ ಮತ್ತು ಉಳಿತಾಯ ಮಾಹಿತಿ ಕಾರ್ಯಕ್ರಮ
ಗಂಗೊಳ್ಳಿ(ಜು.23): ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು, ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಇಂಟೆಗ್ರೇಟೆಡ್ ಎಂಟರ್ಪ್ರೈಸಸ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಮ್ಯೂಚುಯಲ್ ಫಂಡ್ ಹೂಡಿಕೆ ಮತ್ತು ಉಳಿತಾಯದ ಕುರಿತಾದ ಮಾಹಿತಿ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಎಚ್ ಡಿ ಎಫ್ ಸಿ ಮ್ಯೂಚುಯಲ್ ಫಂಡ್ ರಿಲೇಷನ್ಶಿಪ್ ಮ್ಯಾನೇಜರ್ ಸುದೀಪ್ […]
ಕುಂದಾಪುರ : ಜ್ಯೂನಿಯರ್ ರೆಡ್ಕ್ರಾಸ್ ಉದ್ಘಾಟನೆ
ಕುಂದಾಪುರ(ಜು ,22): ಕುಂದಾಪುರ ರೆಡ್ಕ್ರಾಸ್ ಘಟಕದ ಅಂಗಸಂಸ್ಥೆಯಾದ ಸರಕಾರಿ ಪದವಿ ಪೂರ್ವ ಕಾಲೇಜಿನ ಜ್ಯೂನಿಯರ್ ರೆಡ್ಕ್ರಾಸ್ ಘಟಕವನ್ನು ಕುಂದಾಪುರ ರೆಡ್ಕ್ರಾಸ್ ಘಟಕದ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಸಂಚಾಲಕರಾದ ಶ್ರೀ ದಿನಕರ ಶೆಟ್ಟಿ ರೆಡ್ಕ್ರಾಸ್ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಜ್ಯೂನಿಯರ್ ರೆಡ್ಕ್ರಾಸ್ 2025-26 ನೇ ಸಾಲಿನ ಅಧ್ಯಕ್ಷರಾದ ದ್ವಿತೀಯ ಪಿಯುಸಿ ಅಮೂಲ್ಯ, ಕಾರ್ಯದರ್ಶಿ ಪ್ರಥಮ ಪಿಯುಸಿ […]
ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ಕಾರ್ಯಗಾರ
ಹೆಮ್ಮಾಡಿ( ಜು ,21): ಸಂಖ್ಯಾಶಾಸ್ತ್ರವು ಬಹುತೇಕ ಉದ್ಯೋಗಗಳಲ್ಲಿ ಅಗತ್ಯವಿದೆ. ವ್ಯವಹಾರ, ಆರೋಗ್ಯ, ತಂತ್ರಜ್ಞಾನ, ಸರ್ಕಾರ, ಶಿಕ್ಷಣ,ದತ್ತಾಂಶ ವಿಶ್ಲೇಷಣೆ, ಮಾರುಕಟ್ಟೆ ವಿಶ್ಲೇಷಣೆ, ಹಣಕಾಸು ಊಹೆ ಮುಂತಾದ ಕ್ಷೇತ್ರಗಳಲ್ಲಿ ಇದು ಉಪಯೋಗಿಯಾಗುತ್ತದೆ. ದಿನನಿತ್ಯದ ಸಮೀಕ್ಷೆಗಳು, ಸುದ್ದಿಗಳಲ್ಲಿನ ಅಂಕಿಅಂಶಗಳು ಮತ್ತು ವಿಜ್ಞಾನ ವರದಿಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಸಂಖ್ಯಾಶಾಸ್ತ್ರ ಸಹಾಯವಾಗುತ್ತದೆ. ಆದರೆ ಇಂದು ಇಂತಹ ಅಮೂಲ್ಯ ವಿಷಯವನ್ನು ವಿದ್ಯಾರ್ಥಿಗಳು ಆಸೆ ಪಟ್ಟು ಓದದೇ, ಇರುವುದರಿಂದ ಮತ್ತು ಸಮಾಜದಲ್ಲಿ ಒಲವು ಕೂಡ ಕಡಿಮೆಯಾಗುತ್ತಿರುವುದು ಸಂಖ್ಯಾಶಾಸ್ತ್ರ ಮೈನರ್ ವಿಷಯ […]
ಮೂಡುಬಗೆ :ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಿರ್ಮಾಣ ಶಿಲನ್ಯಾಸ ಕಾರ್ಯಕ್ರಮ
ಅoಪಾರು(ಜು,19): ಸೇವಾ ಚೇತನ ಟ್ರಸ್ಟ್ (ರಿ) ಮೂಡುಬಗೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಬಾಳ್ಕಟ್ಟು ಮೂಡುಬಗೆ ಇವರ ಮುತುವರ್ಜಿಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶಿಲನ್ಯಾಸ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಸಾವಿರಾರು ವರ್ಷಗಳ ಇತಿಹಾಸವುಳ್ಳ ದೇವಾಲಯ ಶಿಥಿಲಾವಸ್ಥೆಯಿಂದ ಜೀರ್ಣೋದ್ದಾರಕ್ಕೆ ಸಿದ್ದವಾಗಿದೆ. ಲಯಕಾರಕನಾದ ಮಹಾದೇವನ ಮಂದಿರ ಮರಳಿ ಲಯಕ್ಕೆ ಬರುತ್ತಿದೆ. ದೇವಾಲಯಕ್ಕೊಂದು ಕಲೆ ಕೊಡುವುದೆಂದರೆ ಇಡೀ ಊರಿಗೆ ಚೈತನ್ಯ ಕೊಟ್ಟ ಹಾಗೆ .ಸಮಗ್ರ ಗ್ರಾಮದ ಅಬ್ಯುದಯದ ಆಕಾಂಕ್ಷೆಯಿಂದ ಕುಂದಾಪುರ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್: ಅಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ತಂಡದ ಪದಗ್ರಹಣ
ಕುಂದಾಪುರ(ಜು,10) : ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಂಟರೆ ಯಾನೆ ನಾಡವರ ಸಂಕೀರ್ಣದ ಆರ್ ಎನ್ ಶೆಟ್ಟಿ ಸಭಾಭವನದ ಎಸ್ ಎಸ್ ಹಾಲ್ ನಲ್ಲಿ ಜುಲೈ 10 ರಂದು ನಡೆಯಿತು. 317 ಸಿಯ ಮಾಜಿ ಜಿಲ್ಲಾ ಗವರ್ನರ್ ಎಂ.ಜೆ.ಎಫ್ ದಿವಾಕರ ಶೆಟ್ಟಿ ಭದ್ರಾವತಿ ಪದಗ್ರಹಣ ನೆರವೇರಿಸಿದರು. ಲ. ಡಾ. ಅಂಪಾರು ನಿತ್ಯಾನಂದ ಶೆಟ್ಟಿ ನೂತನ ಅಧ್ಯಕ್ಷರಾಗಿ, ಲ. ಭುಜಂಗ […]
ಸಿ ಎ ಪರೀಕ್ಷೆಯಲ್ಲಿ ಉನ್ನತ ಸಾಧನೆಗೈದ ಡಾl ಬಿ ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ(ಜು. 06): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್ ಹಾಗೂ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಪ್ರೇಕ್ಷಿತ ಶೆಟ್ಟಿ, ಪನ್ನಗ, ಯಶಸ್ ಇವರು ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರೆ, ಶಾಂತಿ, ಸಹನಾ ಹಾಗೂ ಸುವಿಧ ಆಚಾರ್ಯ ಇವರು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ ಬಿ ಹೆಗ್ಡೆ […]