ಶಿರ್ವ(ಜ.29): ಸಂತ ಮೇರಿ ಮಹಾವಿದ್ಯಾಲಯದ 73ನೆ ಗಣರಾಜ್ಯೋತ್ಸವ ದಿನಾಚರಣೆ ಕಾಲೇಜಿನ ಎನ್.ಸಿ.ಸಿಯ ಭೂಯುವ ಸೇನಾದಳ ನೇತೃತ್ವದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪ್ರೌಢಶಾಲೆಯ ಮುಖೋಪಾಧ್ಯಾಯರಾದ ಶ್ರೀ ಗಿಲ್ಬರ್ಟ್ ಪಿಂಟೋರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇಂದು ಈ ಗಣರಾಜ್ಯೋತ್ಸವ ದಿನಾಚರಣೆಯನ್ನು 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ಸರ್ಕಾರದ ಆದೇಶದಂತೆ ಶಾಲಾ-ಕಾಲೇಜಿನಲ್ಲಿ ಕೋವಿಡ್ 19 ರ ಮಾರ್ಗಸೂಚಿ ಅನ್ವಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರದೊಂದಿಗೆ ಆಚರಿಸುತ್ತಿದ್ದೇವೆ. ಇಂದು ನಮ್ಮ ರಾಷ್ಟ್ರ […]
Author: KundaVahini Editor
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಸ್ವಚ್ಛತಾ ಅಭಿಯಾನ
ಶಿರ್ವ(ಜ.29):73 ನೇ ಗಣರಾಜ್ಯೋತ್ಸವ ದಿನದಂದು ಶಿರ್ವ-ಮಂಚಕಲ್ ಲಯನ್ಸ್ ಕ್ಲಬ್ ಹಾಗೂ ಶಿರ್ವ ಸಂತ ಮೇರಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ರೆಂಜರ್ಸ್ ಮತ್ತು ರೋವರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ ಶಿರ್ವದ ಪ್ರವಾಸಿ ಮಂದಿರ ವಠಾರವನ್ನು ಸ್ವಚ್ಛಗೊಳಿಸುವ “ಶ್ರಮದಾನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಾ.ಹೆರಾಲ್ಡ್ ಐವನ್ ಮೋನಿಸ್,ಅಲ್ಲದೆ ಪ್ರಾದ್ಯಾಪಕರುಗಳಾದ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ಕುಮಾರ್,ಎನ್ ಎಸ್ ಎಸ್ ಯೋಜನಾಧಿಕಾರಿ ಶ್ರೀ ಪ್ರೇಮನಾಥ್, […]
ಕಟ್ ಬೆಲ್ತೂರು: ರಾಷ್ಟ್ರೀಯ ಮತದಾರರ ದಿನಾಚರಣೆ
ಕಟ್ಟ್ ಬೆಲ್ತೂರು(ಜ.29): ಇಲ್ಲಿನ ಸುಳ್ಸೆ ಗ್ರಾಮದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ, ಹೊಸ ಮತದಾರರಿಗೆ ಗುರುತಿನ ಚೀಟಿ ನೀಡಿ ಮತದಾರರ ಆದ್ಯ ಕರ್ತವ್ಯ ಮತ್ತು ರೀತಿ ನೀತಿ ನಿಯಮಗಳನ್ನು ಪ್ರತಿಜ್ಞಾ ವಿಧಿಯನ್ನು ಭೋಧಿಸುವ ಮೂಲಕ ತಿಳಿಸಲಾಯಿತು. ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: 73 ನೇ ಗಣರಾಜ್ಯೋತ್ಸವ (ಧ್ವಜಾರೋಹಣ, ಎನ್ಸಿಸಿ ಪೆರೇಡ್, ಸೈನಿಕರಿಗೆ ಸಮ್ಮಾನ)
ಕುಂದಾಪುರ ( ಜ26) : ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ 73 ನೇ ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲ್ಪಟ್ಟಿತು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈಂದೂರು ಶಾಸಕರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿಯವರು ಧ್ವಜಾರೋಹಣ ನೆರವೇಸಿದರು. ನಂತರ ಮಾತನಾಡಿದ ಅವರು, ನಾವು ಸಮಾನತೆಯಿಂದ ಶಿಕ್ಷಣ ಕಲಿಯುತ್ತಿರುವುದೇ ಸಂವಿಧಾನ ಜಾರಿಗೆ ಬಂದದ್ದರಿಂದ. ಭಾರತ ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ಮೇಲೆಯೇ ಈ ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳಾದ ಸಮಾನತೆ, ಸ್ವತಂತ್ರ, ಧರ್ಮ, […]
ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ: ವಾರ್ಷಿಕ ಮಹಾಸಭೆ
ಉಡುಪಿ(ಜ.26): ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ 16ನೇ ವಾರ್ಷಿಕ ಮಹಾಸಭೆ ಜ. 26 ರಂದು ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ಜರುಗಿತು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್’ನ ಪ್ರವರ್ತಕರಾದ ನಾಡೋಜ ಡಾ. ಜಿ ಶಂಕರ್ ರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮೊಗವೀರ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶಿವರಾಮ ಕೆ.ಎಂ. ಅವರು ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಹಿರಿಯಡ್ಕ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ […]
ಮೂಡ್ಲಕಟ್ಟೆ ಎಂ ಐ ಟಿ: ರಾಷ್ಟ್ರೀಯ ಮತದಾರರ ದಿನಾಚರಣೆ- ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ
ಮೂಡ್ಲಕಟ್ಟೆ( ಜ.26): ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸುವ ಹಾಗೂ ಹೊಸ ಮತದಾರರನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಜ .25 ರಂದು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾಲೇಜಿನ ಎಲ್ಲಾ ವಿಭಾಗದ ವಿಧ್ಯಾರ್ಥಿಗಳಿಗೆ ಆಯಾ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಪ್ರತಿಜ್ಞಾ ವಿಧಿ ಬೋಧಿಸಿದರು.
ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ : ನೂತನ ಅಧ್ಯಕ್ಷರಾಗಿ ರಾಜೇಂದ್ರ ಸುವರ್ಣ ಹಿರಿಯಡ್ಕ ಆಯ್ಕೆ
ಉಡುಪಿ (ಜ.26): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ನೂತನ ಅಧ್ಯಕ್ಷರಾಗಿ ರಾಜೇಂದ್ರ ಸುವರ್ಣ ಹಿರಿಯಡ್ಕ ಆಯ್ಕೆಯಾಗಿದ್ದಾರೆ. ಜನವರಿ26 ರಂದು ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ನಡೆದ ಸಂಘಟನೆಯ16 ನೇ ವಾರ್ಷಿಕ ಸಭೆಯಲ್ಲಿ 2022-24 ರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಾಡೋಜ ಡಾ. ಜಿ ಶಂಕರ್ ಯವರ ಉಪಸ್ಥಿತಿಯಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಶ್ರೀಮತಿ ಗುಲಾಬಿ ,ಪ್ರಧಾನ ಕಾರ್ಯದರ್ಶಿಯಾಗಿ ರವೀಶ ತೆಕ್ಕೆಟ್ಟೆ, ಕೋಶಾಧಿಕಾರಿಯಾಗಿ ರವಿರಾಜ ಕಳವಾಡಿ ಆಯ್ಕೆಯಾಗಿದ್ದಾರೆ.ಈ […]
ಹಟ್ಟಿಯಂಗಡಿ: ಜ.25 ,26 ರಂದು ಶ್ರೀ ಅರ್ಭಕ್ಕ ದಾರಕ ನಂದಿಕೇಶ್ವರ ಸಹಪರಿವಾರ ದೈವ ಸ್ಥಾನ ದ ವಾರ್ಷಿಕ ಜಾತ್ರೆ
ತಲ್ಲೂರು(ಜ.24): ಅರ್ಭಕ್ಕ ದಾರಕ ನಂದಿಕೇಶ್ವರ ಸಹಪರಿವಾರ ಧೈವಸ್ಥಾನ ತಾಯ್ಕಲ್ ಬೆಟ್ಟ್, ಹಟ್ಟಿಯಂಗಡಿ ಇದರ ಪ್ರಥಮ ವರ್ಷದ ವಾರ್ಷಿಕ ಗೆಂಡಸೇವೆಯು ಇದೇ ಜನವರಿ 25 ಹಾಗೂ 26 ರಂದು ನಡೆಯಲಿದ್ದು ,ಆ ಪ್ರಯುಕ್ತ ವಿಶೇಷ ಪೂಜೆ, ಹಾಲುಹಬ್ಬ ಮತ್ತು ಅನ್ನ ಸಂತರ್ಪಣೆ ನೆಡಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ವಾರಾಹಿ ಕಾಲುವೆ ಯೋಜನೆಯ ಅವೈಜ್ಞಾನಿಕ ಕಾಮಗಾರಿಗೆ ದಂಡ ತೆತ್ತ ಅಮಾಯಕ ಯುವಕ
ವಕ್ವಾಡಿ(ಜ.24): ವಕ್ವಾಡಿಯಲ್ಲಿ ನಡೆಯುತ್ತಿರುವ ವಾರಾಹಿ ಕಾಲುವೆ ಯೋಜನೆ, ಆರಂಭದಿಂದಲೂ ಒಂದಿಲ್ಲೊಂದು ಸಮಸ್ಯೆ ತಂದೊಡ್ಡುತ್ತಲೇ ಇದೆ. ಈ ಎಲ್ಲ ಸಮಸ್ಯೆಗಳನ ಕುರಿತು, ಸ್ಥಳಿಯರು, ಗ್ರಾಮ ಪಂಚಾಯತ್ ನೊಂದಿಗೆ ಸೇರಿ ಅನೇಕ ಬಾರಿ ಕಂಪೆನಿ ಯೊಂದಿಗೆ ಸಭೆ ನಡೆಸಿ, ಸಮಸ್ಯೆ ಗಳ ಶೀಘ್ರ ಪರಿಹಾರ ಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರೂ ಯಾವುದೇ ಪ್ರಯೋಜನ ಆಗಲಿಲ್ಲ. ಇದೀಗ ಈ ಕಾಮಗಾರಿ ನಡೆಸುತ್ತಿರುವ ಕಂಪೆನಿ ಯ ಔದಾಸಿನ್ಯಕ್ಕೆ ಹಿಡಿದು ಕೈಗನ್ನಡಿಯಂತೆ, ಬೇಕು ಬೇಕಾದಲ್ಲಿ ಹೊಂಡ ತೆರೆದು, […]
ಗೋಪಾಡಿ: ಜ.25 ,26 ರಂದು ಶ್ರೀ ಮಲಸಾವರಿ ಪಂಜುರ್ಲಿ ಪರಿವಾರ ದೈವಸ್ಥಾನದ ವಾರ್ಷಿಕ ವರ್ಧಂತ್ಯುತ್ಸವ
ಗೋಪಾಡಿ(ಜ.23): ಕುಂದಾಪುರ ತಾಲೂಕು ಗೋಪಾಡಿ (ಪಡು) ಗ್ರಾಮದ ಶ್ರೀ ಮಲಸಾವರಿ ಪಂಜುರ್ಲಿ ಹಾಗೂ ಪರಿವಾರ ದೈವಸ್ಥಾನದ 8ನೇ ವರ್ಷದ ವರ್ಧಂತ್ಯುತ್ಸವ ಜನವರಿ 25ರ ಮಂಗಳವಾರ ಹಾಗೂ 26 ರ ಬುಧವಾರದಂದು ನಡೆಯಲಿದೆ. ಕೋಟ ವೇದಮೂರ್ತಿ ಶ್ರೀಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನ ಸಂತರ್ಪಣೆ ನಡೆಯಲಿದ್ದು ,ಶ್ರೀ ರಾಮ ಮಹಿಳಾ ಭಜನಾ ಮಂಡಳಿ ಯವರಿಂದ ಭಜನಾ ಕಾರ್ಯಕ್ರಮ ಹಾಗೂ ಸವಿನಯ ಚಂಡೆ ಬಳಗ ಗೋಪಾಡಿ (ಪಡು) ಇವರಿಂದ 2 […]










