ಕುಂದಾಪುರ (ಮಾ. 31) : ಮಣಿಪಾಲ ಸ್ಕೂಲ್ ಆಫ್ ಇನ್ಫಾರ್ಮಶನ್ ಸೈನ್ಸಸ್ ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರಥ್ವಿರಾಜ್ ಎನ್ ರವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪಿ.ಹೆಚ್.ಡಿ. ಪದವಿ ನೀಡಿದೆ. ಇವರು ಡಾ. ಸಂತೋಷ್ ದೇಶಪಾಂಡೆಯವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಓಪ್ಟಿಮೈಜ್ಡ್ ಅಲ್ಗಾರಿತಮ್ ಫಾರ್ ಮಲ್ಟಿ-ಕಾಂಸ್ಟ್ರೈನ್ಡ್ QoS ರೂಟಿಂಗ್ ಇನ್ MANET’ ಪ್ರಬಂಧಕ್ಕೆ ಪಿ.ಹೆಚ್.ಡಿ ಪದವಿ ಲಭಿಸಿರುತ್ತದೆ.ಇವರು ಅಂಪಾರು ಸಂಜಯ ಗಾಂಧಿ ಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ. ನಾಗರಾಜ […]
Author: KundaVahini Editor
ಕುಂದವಾಹಿನಿಗೆ ಶುಭ ಹಾರೈಸಿದ ಇಶಾ ಫೌಂಡೇಶನ್ ಸ್ವಯಂ ಸೇವಕ ಪ್ರಖ್ಯಾತ್
ಕಿರು ಅವಧಿಯಲ್ಲಿಯೇ ಕುಂದಾಪುರದಲ್ಲಿ ಜನಮನ್ನಣೆ ಪಡೆದಿರುವ ಕುಂದಾಪುರದ ನೂತನ ಅಂತರ್ಜಾಲ ಸುದ್ದಿತಾಣ ಕುಂದವಾಹಿನಿ ಗೆ ಜಗದ್ವಿಖ್ಯಾತ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ರವರ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್ ನ ಸ್ವಯಂಸೇವಕ ಪ್ರಖ್ಯಾತ್ ಇಶಾ ಫೌಂಡೇಶನ್ ನ ಕ್ಯಾಂಪಸ್ ನಿಂದಲೇ ಶುಭ ಹಾರೈಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ – ಸಿ.ಎ. ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ವಿಶೇಷ ಸಾಧನೆ
ಕುಂದಾಪುರ (ಮಾ. 31): ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಿ.ಎ., ಸಿ.ಎಸ್. ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಾದ ರೋಶನಿ ನಿಕೋಲಾ ಅವರು ಅಖಿಲ ಭಾರತ ಮಟ್ಟದ ಸಿ.ಎ. ಇಂಟರ್ ಮಿಡಿಯೇಟ್ ಪರೀಕ್ಷೆಯಲ್ಲಿ ಮತ್ತು ಸುಪ್ರಭ ಅವರು ಭಾರತ ಮಟ್ಟದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಇನ್ ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ […]
ಕರ್ನಾಟಕ ಕರಾವಳಿಯ ಮೀನುಗಾರರ ಕ್ರಿಯಾ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಜಯ. ಸಿ. ಕೋಟ್ಯಾನ್ ಆಯ್ಕೆ
ಉಡುಪಿ (ಮಾ. 29): ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ ಇದರ ಅಧ್ಯಕ್ಷರಾದ ಜಯಾ.ಸಿ. ಕೋಟ್ಯಾನ್ ರವರು ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು ಇದೀಗ ಕರ್ನಾಟಕ ಕರಾವಳಿಯ ಮೀನುಗಾರರ ಕ್ರಿಯಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ( BSF) ಆಯ್ಕೆಗೊಂಡ ಕ್ರೀಡಾ ಪ್ರತಿಭೆ ವಿದ್ಯಾಗೌಡ
ಕುಂದಾಪುರ ( ಮಾ. 31): ಕೊಲ್ಲೂರು ಶ್ರೀಮೂಕಾಂಬಿಕಾ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ, ಉತ್ತಮ ಕ್ರೀಡಾಪಟು ,ಬೈಂದೂರು ತಾಲೂಕಿನ ಎಳಜಿತ್ ಗ್ರಾಮದ ಯುವತಿ ವಿದ್ಯಾಗೌಡ ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ( BSF) ಆಯ್ಕೆಗೊಂಡಿದ್ದಾರೆ. ಶಿಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದಿರುವ ವಿದ್ಯಾ ಗೌಡ ಸತತ ಪರಿಶ್ರಮದಿಂದ ಭಾರತೀಯ ಸೇನೆ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿರುವುದು ಹೆತ್ತವರಿಗೆ ಕುಟುಂಬಸ್ಥರಿಗೆ ಹಾಗೂ ಊರ ಜನತೆಗೆ ಸಂತಸ ತಂದಿದೆ.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಮಂಗಳೂರು ವಿ.ವಿ. ಅಂತರ್ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಸಂಪನ್ನ
ಕುಂದಾಪುರ (ಮಾ. 30) : ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಅಂತರ್ ಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟದ ಸಮಾರೋಪ ಸಮಾರಂಭ ಮಾರ್ಚ್ 30ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಿತು. ಕುಂದಾಪುರ ಎಜುಕೇಶನ್ ಸೊಸೈಟಿ(ರಿ) ಕುಂದಾಪುರ ಇದರ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತ್ತಾಯ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುಂದಾಪುರದ ಪ್ರತಿಷ್ಠಿತ ಚಕ್ರವರ್ತಿ ಸ್ಫೋರ್ಟ್ಸ್ ಕ್ಲಬ್ ನ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಮಂಗಳೂರು ವಿ. ವಿ. ಅಂತರ್ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಉದ್ಘಾಟನೆ
ಕುಂದಾಪುರ (ಮಾ. 30): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಅಂತರಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಮಾರ್ಚ್ 30ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಉದ್ಘಾಟನೆಗೊಂಡಿತು. ಕುಂದಾಪುರದ ಪ್ರಸಿದ್ಧ ಟೋರ್ಪಡೋಸ್ ಕ್ರಿಕೆಟ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಗೌತಮ್ ಶೆಟ್ಟಿ ಪಂದ್ಯ ಕೂಟವನ್ನು ಉದ್ಘಾಟಿಸಿ ಶುಭಹಾರೈಸಿದರು.ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಬಾಲಪ್ರತಿಭೆಗಳಾದ ಪ್ರಜ್ಞಾನ್ ಪಿ. ಶೆಟ್ಟಿ ಹಾಗೂ ಅನಿಕೇತ್ ಆರ್. ರಾಜ್ಯಮಟ್ಟದಲ್ಲಿ ಪ್ರಥಮ
ಕುಂದಾಪುರ (ಮಾ. 31): ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ, ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ದೂರದರ್ಶನ ಕೇಂದ್ರ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ 2019- 20 ನೇ ಸಾಲಿನ ರಾಜ್ಯಮಟ್ಟದ ಸರ್. ಸಿ. ವಿ. ರಾಮನ್ ವಿಜ್ಞಾನ ರಸಪ್ರಶ್ನೆ “ಥಟ್ ಅಂತ ಹೇಳಿ” ಸ್ಪರ್ಧೆಯಲ್ಲಿ ಪ್ರಜ್ಞಾನ್. ಪಿ. ಶೆಟ್ಟಿ ಮತ್ತು ಅನಿಕೇತ್ […]
ಅಮ್ಮನ ಸೆರಗು
ಇಂದಿನ ಮಕ್ಕಳಿಗೆ ಅಮ್ಮನ ಸೆರಗಂಚಿನ ಅನುಭವ ಕಡಿಮೆ. ಏಕೆಂದರೆ ಅಮ್ಮ ಸೀರೆ ಉಡುವುದೇ ಕಡಿಮೆ. ಹಬ್ಬಕ್ಕೆ ಹಾಗೂ ಇನ್ನಿತರ ಸಭಾ ಸಮಾರಂಭಕ್ಕೆ ಉಡುವ ಸೀರೆಯ ಸೆರಗು ಇದಲ್ಲ. ಅದು ಬಲು ನಾಜೂಕು. ಇದರ ಮಹಿಮೆಯೇ ಬೇರೆ. ಉಪಯೋಗವಂತೂ ಒಂದಕ್ಕಿಂತ ಒಂದು.ಬಾಲ್ಯದಲ್ಲಿ ನಮ್ಮ ಅಮ್ಮನ ಸೇರಗೆಂದರೆ ಅದೊಂದು ಖಜಾನೆ ಇದ್ದಂತೆ, ನಾವೆಲ್ಲಿಯಾದರೂ ಸಪ್ಪೆ ಮೊರೆ ಹಾಕಿದ್ದೇವೆಂದರೆ ಅಮ್ಮ ತನ್ನ ಸೀರೆಯ ಸೆರಗಿನ ತುದಿಯಲ್ಲಿದ್ದ ಆ ಖಜಾನೆ ಗಂಟನ್ನು ಬಿಡಿಸಿ ಒಂದೆರಡು ಚಿಲ್ಲರೆ […]
ಆ ಹಿತನುಡಿ
ಆ ಹಿತನುಡಿ ಮಿತವಾಗಿದ್ದೇ ಮಿಗಿಲು ಹಿತವಾದದ್ದೇ ಹಿರಿದು ಎಂದೆನಿಸುತ್ತಿತ್ತು ಆ ಹಿತನುಡಿ ಶತಸಂವತ್ಸರ ಯೋಜನೆಯ ಈ ಬಾಳ ಪುಸ್ತಕಕೆ ನೀ ಬರೆದೆ ಮುನ್ನುಡಿ ನೀನೇ ರಚಿಸಿದ ಜೀವನ ಕೃತಿಗೆ ನಿನ್ನದೇ ಸಂಯೋಜಿತ ಪರಿವಿಡಿ ಸ್ವ ಬಿಂಬವ ಕಂಡಾಗೆಲ್ಲಾ ಹೇಳಿತು #ನಾನಲ್ಲ_ನೀನೆ ಎನ್ನುವ ಕನ್ನಡಿ #ಏನೇ_ಹೇಳಿ. #ನಾನು ಸಮಾಜಕ್ಕೆ ಸಲ್ಲಬೇಕೆಂದರೆ ಸ್ವಲ್ಪವಾದರೂ ಕೊಟ್ಟುಬಿಡಿ.