ಕುಂದಾಪುರ(ಜ.10): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 2ನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು, ಉಡುಪಿಯ ವತಿಯಿಂದ ಕಾಪುವಿನಲ್ಲಿ ನಡೆದ 25ನೇ ಶ್ರೀ ನಾರಾಯಣ ಗುರು ಟ್ರೋಫಿ- ಓಪನ್ ಆಂಡ್ ಯೇಜ್ ಕ್ಯಾಟಗರಿ ರ್ಯಾಪಿಡ್ ಚೆಸ್ ಟೂರ್ನಮೆಂಟ್-2025, 9ರ ವಯೋಮಾನದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ 6 ರೌಂಡ್ಸ್ ಗಳಲ್ಲಿ […]
Author: KundaVahini Editor
ತಾಲೂಕು ಮಟ್ಟದ ಗಣಿತ ಪ್ರತಿಭಾ ಪರೀಕ್ಷೆ : ಆಯುಷ್ ಎ.ಮೊಗವೀರ ಪ್ರಥಮ ರ್ಯಾಂಕ್
ಕುಂದಾಪುರ(ಜ,9) : ತಾಲೂಕು ಮಟ್ಟದ ಅಂತರ್ ಶಾಲಾ ಮಟ್ಟದ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ ಕಿರಿಮುಂಜೇಶ್ವರದ ಜನತಾ ಪ್ರಾಥಮಿಕ ಶಾಲೆಯ ಆಯುಷ್ ಎ.ಮೊಗವೀರ ಪ್ರಥಮ ರ್ಯಾಂಕ್ ಪಡೆದಿದ್ದಾನೆ. ಈತ ನಾವುಂದ ಬಾಡಿ ಮನೆ ವೇದಾವತಿ ಮತ್ತು ಅಣ್ಣಪ್ಪ ದಂಪತಿಗಳ ಪುತ್ರ. ವರದಿ: ಈಶ್ವರ ನಾವುoದ
ರಾಷ್ಟ್ರಮಟ್ಟದ ಯೋಗಾ ಸ್ಪರ್ಧೆ: ಕರ್ನಾಟಕ ತಂಡ ಪ್ರತಿನಿಧಿಸುತ್ತಿರುವ ಲಾಸ್ಯ ಮಧ್ಯಸ್ಥ
ಕುಂದಾಪುರ ( ಜ.09): ಹೈದರಾಬಾದಿನಲ್ಲಿ ನಡೆಯಲಿರುವ 68ನೇ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಮ್ಮ ಕರಾವಳಿ ಭಾಗದ ಹೆಮ್ಮೆಯ ಯೋಗಪಟು ಲಾಸ್ಯ ಮಧ್ಯಸ್ಥ ಕರ್ನಾಟಕ ತಂಡವನ್ನು ಪ್ರತಿನಿಧಿಲಾಸಲಿದ್ದಾರೆ. ಈಕೆ ಕುಂದಾಪುರದ ಹೋಲಿ ರೋಜರಿ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ . ವರದಿ: ಈಶ್ವರ ನಾವುoದ
ಗುಜ್ಜಾಡಿ : ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ- ಮುಹೂರ್ತ, ದರ್ಶನ ಸೇವೆ
ಕುಂದಾಪುರ( ಜ.10): ತಾಲೂಕಿನ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ಮಾರ್ಚ್ 30 ಹಾಗೂ 31 ರಂದು ನಾಗ ಮಂಡಲೋತ್ಸವದ ಸುವರ್ಣ ಮಹೋತ್ಸವ ಪ್ರಯುಕ್ತ ನಡೆಯಲಿರುವ ಜೀರ್ಣಾಷ್ಟಬಂಧ ಪುರಸ್ಸರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗ ಮಂಡಲೋತ್ಸವ ಪೂರ್ವಭಾವಿಯಾಗಿ ಮುಹೂರ್ತ, ದರ್ಶನ ಸೇವೆ ಜನವರಿ 08 ರಂದು ಜರುಗಿತು. ಮಾರ್ಚ್ 30 ಹಾಗೂ 31 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವದ ಪೂರ್ವಭಾವಿಯಾಗಿ ಈ […]
ಬಿ.ಬಿ. ಹೆಗ್ಡೆಕಾಲೇಜಿನ ಸಚಿನ್ ಆಚಾರ್ ಕುಂಭಾಶಿ ರಾಜ್ಯ ಗಣರಾಜ್ಯೋತ್ಸವ ಪೆರೇಡ್ಗೆ ಆಯ್ಕೆ
ಕುಂದಾಪುರ (ಜ.07): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಕುಂಭಾಶಿಯ ಶ್ರೀಧರ್ ಆಚಾರ್ ಮತ್ತು ಹೇಮಲತಾ ಅವರ ಪುತ್ರನಾದ ಸಚಿನ್ ಆಚಾರ್, ದ್ವಿತೀಯ ಬಿ.ಸಿ.ಎ. (ಬಿ) ಇವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ […]
ಬೈಂದೂರು : ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅಮೈರಾ ಸಾಧನೆ
ಬೈಂದೂರು(ಜ. 07): ಬೈಂದೂರಿನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ -2025 ನಲ್ಲಿ ಅಮೈರಾ ರವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾರೆ. ಈಕೆ ಕುಂದಾಪುರದ ಓಕ್ ವುಡ್ ಇಂಡಿಯನ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿ ಹಾಗೂ ಕುಂದಾಪುರದ ಕೆ.ಡಿ.ಎಫ್. ಕರಾಟೆ ಶಾಲೆಯ ಕಿಯೋಷಿ ಕಿರಣ್ ಕುಂದಾಪುರ, ಶಿಹಾನ್ ಸಂದೀಪ್ ವಿ.ಕೆ., ಶಿಹಾನ್ ಕೀರ್ತಿ ಜಿ.ಕೆ., ಸೇನ್ ಸಾಯಿ […]
ಬೈಂದೂರು ಚಂದ್ರಶೇಖರ ನಾವಡರ ‘ ಕಂಟೋನ್ಮೆಂಟ್ ಕಥೆಗಳು’ ಲೋಕಾರ್ಪಣೆ
ನಾಗೂರು( ಜ.6): ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡುವ ಸೈನಿಕರಿಂದಾಗಿ ನಾವು ನೆಮ್ಮದಿಯಿಂದ ಬದುಕುತ್ತಿದ್ದೇವೆ. ಭಾರತೀಯ ಸೇನೆ ಯುವಕರಲ್ಲಿ ದೇಶಭಕ್ತಿಯ ಭಾವವನ್ನು ಮೂಡಿಸುವ ಭರಪೂರ ಪ್ರಯತ್ನ ಮಾಡುತ್ತದೆ.ಅಂತಹ ಅತ್ಯುತ್ತಮ ತರಬೇತಿ ವ್ಯವಸ್ಥೆ ನಮ್ಮ ಸೇನೆಯಲ್ಲಿದೆ. ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶ್ರೀ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ನಾಗೂರು ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ಭಾನುವಾರ ನಡೆದ ಲೇಖಕ, ಮಾಜಿ ಸೈನಿಕ ಬೈಂದೂರು ಚಂದ್ರಶೇಖರ ನಾವಡರ ಸೈನಿಕರ ನಿತ್ಯ ಬದುಕಿನ […]
ಬ್ರಹ್ಮಾವರ ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ : ಸಂಭ್ರಮದ ಹೊಸ ವರ್ಷ ಆಚರಣೆ
ಬ್ರಹ್ಮಾವರ(ಜ,06): ಸಂಸ್ಕೃತಿ, ಆಚರಣೆಯ ಕುರಿತು ಅಭಿಮಾನವನ್ನು ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಸಂಭ್ರಮದಿಂದ ಹೊಸ ವರ್ಷವನ್ನು ಆಚರಿಸಲಾಯಿತು. ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಆಚರಣೆಯನ್ನು ದೀಪ ಬೆಳಗಿಸುವುದರ ಮೂಲಕ ಆರಂಭಿಸಿ ಎಲ್ಲರ ಜೀವನದಲ್ಲೂ ಹೊಸತನ, ಹೊಸ ಹುಮ್ಮಸ್ಸು ತುಂಬಲಿ ಎಂದು ಎಲ್ಲರಿಗೂ ಹೊಸ ವರ್ಷದ ಶುಭಾಶಯ ಕೋರಿದರು ,ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಡಾ ಸೀಮಾ.ಜಿ ಭಟ್, ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ , ಸಾಂಸ್ಕೃತಿಕ […]
ಪ್ರತಿಭಾ ಕಾರಂಜಿ: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ
ಕಾರ್ಕಳ (ಜ.6): ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಉಪ ನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬ್ರಹ್ಮಾವರ ತಾಲೂಕು ಸಹಭಾಗಿತ್ವದಲ್ಲಿ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೈದೆಬೆಟ್ಟು – ಕೊಕ್ಕರ್ಣೆ ಇವರ ಸಂಘಟನಾ ಸಾರಥ್ಯದೊಂದಿಗೆ ನಡೆದ ೨೦೨೪-೨೫ನೇ ಸಾಲಿನ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯ […]
ಬಾಲ ಸಂಸ್ಕಾರ ಮಕ್ಕಳಿಂದ ರಾಮಕೃಷ್ಣಾಶ್ರಮಕ್ಕೆ ಭೇಟಿ
ಬೈಲೂರು(ಜ,6) : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಬೈಲೂರಿನ ಶ್ರೀ ರಾಮಕೃಷ್ಣಾಶ್ರಮಕ್ಕೆ ಮಕ್ಕಳು ಭೇಟಿ ನೀಡಿದರು. ಆಶ್ರಮದ ಪೂಜ್ಯ ಯತಿ ಸ್ವಾಮಿ ವಿನಾಯಕಾನಂದ ಮಹಾರಾಜ್ರವರು ಆಶೀರ್ವಚನ ನೀಡಿ, ವ್ಯಕ್ತಿಯ ಸಮಗ್ರ ಬೇಳವಣಿಗೆಯಲ್ಲಿ ದೈಹಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ ಹಾಗೂ ಆದ್ಯಾತ್ಮಿಕ ಅಂಶಗಳು ಮುಖ್ಯ. ಈ ನಿಟ್ಟಿನಲ್ಲಿ ಜ್ಞಾನಭಾರತ್ ತಂಡವು ಮಕ್ಕಳ ಶ್ರೇಯೋಭಿವೃದ್ದಿಗಾಗಿ ಇಂತಹ ಕಾರ್ಯವನ್ನು ಕೈಗೊಂಡಿರುವುದು ಪ್ರಶಂಸನೀಯ […]










