ಕುಂದಾಪುರ(ಡಿ.31): ತಾಲೂಕು ಅಂಪಾರು ಗ್ರಾಮದ ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ಡಿಸೆಂಬರ್ 26 ರಂದು ವಿಜೃಂಭಣೆಯಿಂದ ನಡೆಯಿತು. ಶ್ರೀ ದೇವರಿಗೆ ಬೆಳಿಗ್ಗೆ ಗುರು ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ನಾಂದಿ, ಸಮಾರಾಧನೆ, ಕೃಚ್ಚಾಚರಣೆ, ಮಹಾಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ಪ್ರಾಯಶ್ಚಿತ್ತ ಅಯುತ ಸಂಖ್ಯಾತಿಲಹೋಮ, ಕೂಷ್ಮಾಂಡ ಹೋಮ, ಪವಮಾನ ಹೋಮ, ತತ್ವ ಕಲಶ ಸ್ಥಾಪನೆ, ತತ್ವಹೋಮ, ಸರ್ಪಸೂಕ್ತ ಹೋಮ, ಸುಬ್ರಹ್ಮಣ್ಯ ಹೋಮ, […]
Author: KundaVahini Editor
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ – ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ
ಕಾರ್ಕಳ(ಡಿ .28): ಜ್ಞಾನಸುಧಾ ಕಾರ್ಕಳದ ಆಸ್ತಿಯಾಗಿದ್ದು, ಸಂಸ್ಕಾರ, ಸದ್ವಿಚಾರದ ಅಡಿಪಾಯವನ್ನು ಶಿಕ್ಷಣದ ಜೊತೆಗೆ ನೀಡುತ್ತಿರುವ ಇಲ್ಲಿನ ಕಾರ್ಯ ಶ್ಲಾಘನೀಯ. ಡಾ.ಸುಧಾಕರ್ ಶೆಟ್ಟಿಯವರ ತಂಡದ ಸಂಘಟಿತ ಪ್ರಯತ್ನ ಪ್ರಶಂಸನೀಯ. ವಿದ್ಯಾರ್ಥಿಗಳು ನವಭಾರತವನ್ನು ನಿರ್ಮಿಸುವುದಕ್ಕಾಗಿ ಸಂಕಲ್ಪತೊಡಬೇಕು ಎಂದು ಕ್ಷೇತ್ರದ ಶಾಸಕರಾದ ಶ್ರೀ.ವಿ.ಸುನಿಲ್ ಕುಮಾರ್ ನುಡಿದರು. ಅವರು ಗಣಿತನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಡಿಸೆಂಬರ್ 22, 2024ರಂದು ನಡೆದ ಜ್ಞಾನಸುಧ ಸಂಸ್ಥಾಪಕರ ಹಾಗೂ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಳಿಗೆ ಗೌರವ […]
ಸಿ.ಎ ಅಂತಿಮ ಪರೀಕ್ಷೆ : ಜ್ಞಾನಸುಧಾ ಹಳೆ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ(ಡಿ.28) : ಐ.ಸಿ.ಎ.ಐ ನಡೆಸಿದ 2024ರ ನವೆಂಬರ್ – ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳಾದ, ಕಾರ್ಕಳ ಕಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಗಳ ಸುಪುತ್ರನಾದ ಸೋಮನಾಥ್ ವಿ. ಶೆಟ್ಟಿ, ಜಾರ್ಕಳದ ಮೋಹನ್ ಕಿಣಿ ಮತ್ತು ಶುಭಾ ಕಿಣಿ ದಂಪತಿಗಳ ಸುಪುತ್ರಿಯಾದ ಸ್ವಾತಿ ಕಿಣಿ ಮತ್ತು ಬೈಲೂರು ರಮೇಶ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ ದಂಪತಿಗಳ ಸುಪುತ್ರಿಯಾದ ರಕ್ಷಾ ಶೆಟ್ಟಿ […]
ಶ್ರೀ ಬಿ.ಅಪ್ಪಣ್ಣ ಹೆಗ್ಡೆಯವರ 90ನೇ ಜನ್ಮದಿನದ ಸಂಭ್ರಮಾಚರಣೆ
ಕುಂದಾಪುರ (ಡಿ.24) : ಶ್ರೀ ಬಿ. ಅಪ್ಪಣ್ಣ ಹೆಗ್ಡೆಯವರ 90ನೇ ಜನ್ಮದಿನದ ಸಲುವಾಗಿ ಡಾ| ಬಸ್ರೂರು ಭುಜಂಗ ಹೆಗ್ಡೆ (ಬಿ.ಬಿ.ಹೆಗ್ಡೆ) ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮತ್ತು ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳಲ್ಲಿ 49ರ ಸಂಭ್ರಮ- ರುಗ್ಮಯಾನ
ಕುಂದಾಪುರ (ಡಿ. 27): ವಿದ್ಯಾರ್ಥಿ ಜೀವನ ಎಂದರೆ ಕೇವಲ ಕಟ್ಟುನಿಟ್ಟಿನ ಜೀವನವಲ್ಲ. ಅಲ್ಲಿ ತಮಾಷೆ, ಸಂತೋಷ, ಗೆಳೆತನದ ಜೊತೆಗೆ ಕಲಿಕೆಯು ಮುಖ್ಯವಾಗಿರುತ್ತದೆ. ನಮಗೆ ಮತ್ತೊಮ್ಮೆ ಶಾಲಾ ಜೀವನ ಸಿಗುವುದಿಲ್ಲ. ನಾವು ಕಲಿತ ಶಾಲೆಗೆ ಮರಳಬೇಕಾದರೆ ಏನಾದರು ಒಂದು ಉತ್ತಮ ಸಾಧನೆ ಮಾಡಿದರೆ ಇಂತಹ ವೇದಿಕೆ ಸಿಗುತ್ತದೆ ಎಂದು ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿಯಾದ, ಸರ್ವೇಯರ್ ಎ.ಡಿ.ಎಲ್.ಆರ್ ಆಫೀಸ್ ಕುಂದಾಪುರ ಶ್ರೀಯುತ ಶಶಾಂಕ್ ಬಿ. ಜೋಗಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ […]
ಹೆಮ್ಮಾಡಿಯ ಜನತಾ ಪಿ ಯು ಕಾಲೇಜಿನ ಸೂರಜ್ ಪೂಜಾರಿ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಕ್ಕೆ ಆಯ್ಕೆ
ಕುಂದಾಪುರ(ಡಿ.28): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸುವ ರಾಷ್ಟ್ರ ಮಟ್ಟದ ವಾಲಿಬಾಲ್ ಸ್ಪರ್ಧೆಗೆ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ಸೂರಜ್ ಪೂಜಾರಿ ರಾಷ್ಟ್ರ ಮಟ್ಟದ ವಾಲಿಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತೆಲಂಗಾಣ ರಾಜ್ಯದಲ್ಲಿಈ ಸ್ಪರ್ಧೆ ನಡೆಯಲಿದ್ದು,ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾನೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆಗಳೂಂದಿಗೆ,ಶುಭ ಹಾರೈಸಿದ್ದಾರೆ.
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ತನ್ವಿತಾ ವಿ. ಡಾ| ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಆಯ್ಕೆ
ಕೋಟ(ಡಿ.28): ಡಾ.ಶಿವರಾಮ ಕಾರಂತ ಪ್ರತಿಷ್ಠಾನ(ರಿ.) ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ,ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ, ಕೋಟದ ಡಾ| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕೊಡಮಾಡುವ ನಾಲ್ಕನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ವಿಶೇಷ ಸಾಧಕರ ವಿಭಾಗದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ತನ್ವಿತಾ ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ತನ್ವಿತಾ ಪ್ರೌಢ ಶಿಕ್ಷಣದ ಸಮಯದಲ್ಲಿ ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ,ಅಂತರಾಷ್ಟ್ರೀಯ ಮಟ್ಟದ […]
ಗ್ರೀನ್ ಮೊಬಿಲಿಟಿ ಪಯಣದ ವರ್ಧನೆ
ಮಂಗಳೂರು (ಡಿ.26): ಪ್ರಮುಖ ಮಾಧ್ಯಮ ಉದ್ಯಮ ನೆಟ್ವರ್ಕ್18 ಇದೀಗ ಗ್ರೀನ್ ಭಾರತ್ ಆರಂಭಿಕ ಆವೃತ್ತಿಯನ್ನು ಪೂರ್ತಿಗೊಳಿಸಿದ್ದು, ದೇಶದ ಅತಿದೊಡ್ಡ ಶುದ್ಧ ಎಲೆಕ್ಟ್ರಿಕ್ ವಾಹನ ಕಂಪನಿಯಾಗಿರುವ ಓಲಾ ಎಲೆಕ್ಟ್ರಿಕ್ ಜೊತೆಗೆ ಸಹಭಾಗಿತ್ವದಲ್ಲಿ ನಡೆದ ವಾರ್ಷಿಕ ಸಮ್ಮೇಳನ ಇದಾಗಿತ್ತು. ಇವಿಗಳನ್ನು ವ್ಯಾಪಕವಾಗಿ ಅಳವಡಿಸಿಕೊಳ್ಳುವಲ್ಲಿ ಇರುವ ಪ್ರಮುಖ ಸವಾಲುಗಳನ್ನು ಎದುರಿಸುವುದರ ಜೊತೆಗೆ ಇವಿಗಳ ಆರ್ಥಿಕ, ಪಾರಿಸರಿಕ ಮತ್ತು ಸಾಮಾಜಿಕ ಪ್ರಯೋಜನಗಳಿಗೆ ಸಂಬಂಧಿಸಿದಂತೆ ಸುಸ್ಥಿರ ಸಂಚಾರಕ್ಕೆ ಭಾರತ ಪರಿವರ್ತನೆಯಾಗುವುದಕ್ಕೆ ವ್ಯಾಖ್ಯಾನವನ್ನು ಬದಲಿಸುವ ಗುರಿಯನ್ನು ಕಾರ್ಯಕ್ರಮ ಹೊಂದಿದೆ.ಈ […]
ನೂರು ಜನ್ಮಕೂ’ ಧಾರಾವಾಹಿ ಆರಂಭ
ಮಂಗಳೂರು(ಡಿ.26): ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿ ಆರಂಭಿಸುತ್ತಿದೆ. ಡಿ.23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಈ ಹೊಸ ಧಾರಾವಾಹಿ’ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ. ಮೊದಲ ನೋಟಕ್ಕೆ’ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕತೆ. ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕಥೆಯಿದು. ಚಿರಂಜೀವಿ ಅತಿಮಾನುಷ […]
ಬ್ಯಾರೀಸ್ ಪಿ.ಯು ಕಾಲೇಜಿನಲ್ಲಿ ಪ್ರೇರಣೆ, ಜ್ಞಾಪಕಶಕ್ತಿ ಮತ್ತು ಅಧ್ಯಯನ ಕೌಶಲ್ಯಗಳ ಕುರಿತು ಕಾರ್ಯಾಗಾರ
ಕೋಡಿ(ಡಿ.24): ಇಲ್ಲಿನ ಬ್ಯಾರೀಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ, ಜ್ಞಾಪಕಶಕ್ತಿ ಮತ್ತು ಅಧ್ಯಯನ ಕೌಶಲ್ಯಗಳ ಕುರಿತು ಕಾರ್ಯಾಗಾರ ಡಿಸೆಂಬರ್ 23 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಸಿಗ್ಮಾ, ಬೆಂಗಳೂರು ಇದರ ಸಿ.ಇ.ಒ ಮತ್ತು ಸಂಸ್ಥಾಪಕರಾದ ಶ್ರೀ. ಅಮೀನ್ .ಇ ಮುದಸ್ಸರ್, ಆಗಮಿಸಿದ್ದರು. ದ್ವಿತೀಯ ಪಿಯುಸಿ ತರಗತಿಗಳಿಗೆ ಬಹುವಿಧದ ಜ್ಞಾಪಕಶಕ್ತಿಯ ತಂತ್ರಗಳನ್ನು ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳು […]










