ಬೈಂದೂರು(ಸೆ,17): ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಅಂಗವಾಗಿ ನಾಗೂರಿನಲ್ಲಿ ಏರ್ಪಡಿಸಿದ್ದ ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯ ಆರು ಮತ್ತು ಏಳನೇ ತರಗತಿಯ ವಿಭಾಗದಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಮ್ ದೇವಾಡಿಗ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸ್ಯಾಕ್ಸೋಫೋನ್ ಕಲಾವಿದ ಮಾದವ ದೇವಾಡಿಗ ಮತ್ತು ಉಪನ್ಯಾಸಕಿ […]
Author: KundaVahini Editor
ಬಿ. ಬಿ. ಹೆಗ್ಡೆ ಕಾಲೇಜು : ಹಿಂದಿ ದಿವಸ್ ಆಚರಣೆ
ಕುಂದಾಪುರ, (ಸೆ. 14): ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ಪ್ರತೀಕ. ಹಿಂದಿ ಭಾಷೆ ಭಾರತೀಯ ಸಂಸ್ಕೃತಿಯ ಕೊಂಡಿಯಾಗಿದೆ. ಹೀಗಾಗಿ ಭಾಷೆ, ಸಂಸ್ಕೃತಿ- ಸಂಸ್ಕಾರವನ್ನು ಗೌರವಿಸಿ, ಅನುಸರಿಸಿ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಶ್ರೀ ಸಂತೋಷ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ ‘ಹಿಂದಿ ದಿವಸ್’ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಓಣಂ ಸಂಭ್ರಮ
ಕುಂದಾಪುರ (ಸೆ.17): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರೇವತಿ ಡಿ. ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.
ಎಚ್ ಎಮ್ ಎಮ್ & ವಿ ಕೆ ಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗ :ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ (ಸೆ.17): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಹಾಗೂ ವಿ ಕೆ ಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ 14.09.2024 ರಂದು ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ. ಚಿಂತನಾ ರಾಜೇಶ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮಾತಾ ಹಾಸ್ಪಿಟಲ್ ನ ಸೈಕಲಾಜಿಸ್ಟ್ ಆಗಿರುವ ಶ್ರೀಮತಿ ಜಾಹ್ನವಿ ಪ್ರಕಾಶ್ ರವರು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಅವರ ವರ್ತನೆ, ಸಮಸ್ಯೆಗಳು ಹಾಗೂ ಪರಿಹಾರ […]
ತ್ರೋ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ್ರಥಮ
ಗಂಗೊಳ್ಳಿ(ಸೆ,15):ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಕೆಪಿಎಸ್ ಬಿದ್ಕಲ್ ಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಬಿದ್ಕಲ್ ಕಟ್ಟೆಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವೀರೇಶ್ ಖಾರ್ವಿ ಶಮಿತ್ ಖಾರ್ವಿ, ಶರಣ್ ಎಸ್ ಪೂಜಾರಿ, ಯುವರಾಜ್ ಖಾರ್ವಿ, ಪ್ರೀತೇಶ್ ಖಾರ್ವಿ, ಕಾರ್ತಿಕ್ […]
ಭಾಷೆ ಭಾಂದವ್ಯ ಬೆಸೆಯುತ್ತದೆ- ಜಿ . ಎಮ್. ಗೊಂಡ
ಗಂಗೊಳ್ಳಿ ( ಸೆ.15): ಭಾಷೆ ನಮ್ಮ ನಡುವೆ ಭಾಂದವ್ಯ ಬೆಸೆಯುತ್ತದೆ. ದೇಶದ ಜನರ ಮನಸ್ಸುಗಳನ್ನು ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಕುಂದಾಪುರದ ಭಂಡಾರಕರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗೋವಿಂದ ಗೊಂಡ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಯ್ಯಫ್, ಸಂಜನಾ, ಲೇಖಾ, ಪ್ರಥ್ವಿ, ಝುವೈನ ಮತ್ತು ಮೆಹಕ್ […]
ಬಿ. ಬಿ. ಹೆಗ್ಡೆ ಕಾಲೇಜು : ರ್ಯಾಗಿಂಗ್ ಕುರಿತು ಅರಿವು ಕಾರ್ಯಕ್ರಮ
ಕುಂದಾಪುರ (ಸೆಪ್ಟೆಂಬರ್ 2): ರ್ಯಾಗಿಂಗ್ ಗೆ ಐತಿಹಾಸಿಕ ಹಿನ್ನೆಲೆ ಇದೆ. ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಯುದ್ಧದ ಪೂರ್ವ ತಯಾರಿಯ ಸಂದರ್ಭದಲ್ಲಿ ಆರಂಭಗೊAಡ ರ್ಯಾಗಿಂಗ್ ಪ್ರಸ್ತುತ ಶಾಲಾ-ಕಾಲೇಜುಗಳಲ್ಲಿ ವಿವಿಧ ರೂಪದಲ್ಲಿ ಕಾಣಿಸಿಕೊಂಡಿದೆ. ಮಹಿಳಾ ದೌರ್ಜನ್ಯ ಮತ್ತು ರ್ಯಾಗಿಂಗ್ ಬಗ್ಗೆ ಕಾನೂನಿನಲ್ಲಿರುವ ಮಾಹಿತಿಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ದೌರ್ಜನ್ಯ ಆದ ಸಂದರ್ಭದಲ್ಲಿ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿ ಸತೀಶ್ಚಂದ್ರ ಕಾಳವರ್ಕರ್ […]
ಬಿ. ಬಿ. ಹೆಗ್ಡೆ ಕಾಲೇಜು : ರೋಟರಾಕ್ಟ್ ಪದಗ್ರಹಣ
ಕುಂದಾಪುರ (ಸೆ. 12) : ಇಲ್ಲಿನ ಡಾ| ಬಿ ಬಿ ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್ನ 2024-25ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಸೆಪ್ಟಂಬರ್ 12ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ರೋಟರಿ ಕ್ಲಬ್ ಕುಂದಾಪುರ ಹಾಗೂ ಕಾಲೇಜಿನ ರೋಟರಾಕ್ಟ್ ಕ್ಲಬ್ನ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರೋಟರಾಕ್ಟ್ ಸಂಸ್ಥೆಯು ಯುವಕರಿಗಾಗಿ ಸ್ಥಾಪಿಸಿದ ಸಂಸ್ಥೆಯಾಗಿದೆ. ಸದಸ್ಯರು ಸಂಸ್ಥೆಯ ನೀತಿ, ನಿಯಮ, ಉದ್ದೇಶವನ್ನು ತಿಳಿದುಕೊಂಡು ಕಾರ್ಯ ಪ್ರವೃತ್ತರಾಗಬೇಕು, ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ವ್ಯಕ್ತಿತ್ವ […]
ಬಿ.ಬಿ ಹೆಗ್ಡೆ ಕಾಲೇಜು: ವ್ರತ್ತಿ ಮಾರ್ಗದರ್ಶನ ಕಾರ್ಯಕ್ರಮ
ಕುಂದಾಪುರ (ಸೆ.14) : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಆಶ್ರಯದಲ್ಲಿ ದಿನಾಂಕ ಸೆಪ್ಟೆಂಬರ್ 14ರಂದು ಅಂತಿಮ ವರ್ಷದ ಬಿ.ಸಿ.ಎ. ವಿದ್ಯಾರ್ಥಿಗಳಿಗಾಗಿ “ಕರಿಯರ್ ಗೈಡೆನ್ಸ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ವಹಿಸಿಕೊಂಡಿದ್ದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಕಾಲೇಜಿನ ಡೀನ್ (ಅಕಾಡೆಮಿಕ್ಸ್) ಶ್ರೀ ಗಿರಿರಾಜ್ ಭಟ್ರವರು “ನಾವು ಸಂದರ್ಶನಕ್ಕೆ ಹೋದಾಗ ಸಲ್ಲಿಸುವ ರೆಸೂಮ್ ಎನ್ನುವುದು ನಮ್ಮ […]
ಬ್ರಹ್ಮಾವರ: ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಪೋಸ್ಟರ್ ಮೇಕಿಂಗ್ ಸ್ಪರ್ಧೆ
ಬ್ರಹ್ಮಾವರ(ಸೆ.15): :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ “ಪೋಸ್ಟರ್ ಮೇಕಿಂಗ್” ಸ್ಪರ್ಧೆ ಇತ್ತೀಚೆಗೆ ನಡೆಸಲಾಯಿತು. ವಿದ್ಯಾರ್ಥಿಗಳು “ಮಾನವೀಯತೆ” ಎಂಬ ವಿಷಯದ ಕುರಿತು ಪೋಸ್ಟರ್ ಗಳನ್ನು ವಿಭಿನ್ನವಾಗಿ ತಯಾರಿಸಿದರು . ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕ್ಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.










