ಕಾರ್ಕಳ(ಸೆ.11): ಇಲ್ಲಿನ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ 10 ಸೆಪ್ಟೆಂಬರ್ 2024ರಂದು ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಕ್ಯಾಥರೀನ್ ಜೆನ್ನಿಫರ್, ಕ್ಲಿನಿಕಲ್ ಸೈಕಾಲಜಿಸ್ಟ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ ಇವರು ಮಾತನಾಡಿ ‘ ಈ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದಿರಲಿ. ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಬೇಕು’ ಎಂದರು. […]
Author: KundaVahini Editor
ಇಪ್ಪತ್ತರ ಸಂಭ್ರಮದಲ್ಲಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು
ರಾಜ್ಯದ ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜುಗಳಲ್ಲೊಂದಾದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿಗೆ ಈಗ ಇಪ್ಪತ್ತರ ಸಂಭ್ರಮ.ಮಾಜಿ ಸಂಸದ ದಿ. ಐ ಎಮ್ ಜಯರಾಮ ಶೆಟ್ಟರ ಕನಸಿನ ಕೂಸಾಗಿ ಹುಟ್ಟಿದ ಈ ಕಾಲೇಜು ಹಲವು ಕಾರ್ಯವೈಖರಿಗಳಿಂದ ತನ್ನದೇ ಆದ ಛಾಪು ಮೂಡಿಸಿದೆ.2004ರಲ್ಲಿ ಸ್ಥಾಪಿತವಾದ ಈ ಕಾಲೇಜು ಐ. ಎಂ. ಜಯರಾಮ ಶೆಟ್ಟಿ ಅವರ ನೇತೃತ್ವದಲ್ಲಿ ಸ್ಥಾಪನೆಯಾದ ಎಂಎನ್ ಬಿಎಸ್ ಟ್ರಸ್ಟ್ ನ ಅಂಗಸಂಸ್ಥೆಯಾಗಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಪಡೆಯುವ ಭರವಸೆಯ ಸಂಕೇತವಾಗಿ ರೂಪಿತವಾಗಿದೆ. ಪ್ರತಿಭಾನ್ವಿತ […]
ಬಿ. ಬಿ. ಹೆಗ್ಡೆ ಕಾಲೇಜು : ಶಿಕ್ಷಕರ ದಿನಾಚರಣೆ
ಕುಂದಾಪುರ (ಸೆ.05): ಸತತ ಪ್ರಯತ್ನವೇ ಗೆಲುವಿನ ಮೂಲ. ಸೋತರೂ ಕಠಿಣ ಪರಿಶ್ರಮದಿಂದ ಮತ್ತೆ ಪ್ರಯತ್ನಿಸಿ ಗೆದ್ದಾಗ ಆ ಗೆಲುವಿಗೆ ಕಾರಣರಾದ ಶಿಕ್ಷಕರನ್ನು ಮರೆಯದಿರಿ, ನಿಮ್ಮ ಯಶಸ್ಸನ್ನು ಬಯಸುವ ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿ ಎಂದು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಳದ ಪದವಿ ಪೂರ್ವ ಕಾಲೇಜಿನ ಸಂಖ್ಯಾಶಾಸ್ತç ಉಪನ್ಯಾಸಕರಾದ ಶ್ರೀ ಪ್ರಭಾಕರ್ ಶೆಟ್ಟಿಗಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ […]
ತಾಲೂಕು ಮಟ್ಟದ ಕಬಡ್ಡಿಯಲ್ಲಿ ಸರಸ್ವತಿ ವಿದ್ಯಾಲಯಕ್ಕೆ ದ್ವಿತೀಯ ಸ್ಥಾನ
ಹೆಮ್ಮಾಡಿ(ಸೆ.07): ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ಸಂಜನಾ ಖಾರ್ವಿ , ಸಹನಾ ಖಾರ್ವಿ, ಸುನಿಧಿ ಕರ್ಣಿಕ್, ಭೂಮಿಕಾ ಖಾರ್ವಿ , ಪೂಜಾ ಪೂಜಾರಿ, ನವ್ಯಶ್ರೀ ಕೋಟೆಗಾರ್, ಸನ್ನಿಧಿ […]
ಕುಂದಾಪುರ ತಾಲೂಕು ಯುವ ಬಂಟರ ಸಂಘ: ಶಿಕ್ಷಕ ದಂಪತಿಗಳಿಗೆ ಸನ್ಮಾನ
ಕುಂದಾಪುರ (ಸೆ, 5): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಶಿಕ್ಷಕ ದಂಪತಿಗಳಿಗೆ ಸನ್ಮಾನಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕ ದಂಪತಿಗಳಾದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ದಿನಕರ್ ಆರ್ ಶೆಟ್ಟಿ ಮತ್ತು ಅವರ ಪತ್ನಿ ನಿವೃತ್ತ ಶಿಕ್ಷಕಿ ಶ್ರೀಮತಿ ಸವಿತಾ ಶೆಟ್ಟಿ ಅವರನ್ನು ಬಸ್ರೂರಿನ ಅವರ ಸ್ವಗ್ರಹದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ […]
ಅಂಪಾರು:ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ
ಕುಂದಾಪುರ(ಸೆ,5): ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಸಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ ಅಂಗವಾಗಿ ಅಂಪಾರಿನ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಹೇರೂರು ದೊಡ್ಡಮನೆ ಎಚ್ ಬಿ ಬಾಬಯ್ಯ ಶೆಟ್ಟಿ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ವಕ್ವಾಡಿ ಭಾಸ್ಕರ್ ಶೆಟ್ಟಿ ವಹಿಸಿದ್ದರು. ಗೌರವಾಧ್ಯಕ್ಷರಾದ ಶ್ರೀ ವಕ್ವಾಡಿ ದಿನಕರ್ ಶೆಟ್ಟಿ, ಸಂಘದ ಕಾರ್ಯದರ್ಶಿ […]
ಕೋಡಿ ಬ್ಯಾರೀಸ್ ನಲ್ಲಿ ಶಿಕ್ಷಕರ ದಿನಾಚರಣೆ
ಕೋಡಿ ( ಸೆ.06): ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 05 ರಂದು ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ. ಎಂ ಅಬ್ದುಲ್ ರೆಹಮಾನ್ ಶಿಕ್ಷಕರುನ್ನುದ್ದೇಶಿಸಿ “ಮಕ್ಕಳಿಗೆ ಕೊಡಲೇಬೇಕಾದ ಆಸ್ತಿಯೆಂದರೆ ಶಿಕ್ಷಣ, ಈ ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ. ಶಿಕ್ಷಕ ವೃತ್ತಿ ಪವಿತ್ರವಾದುದು. ತಮ್ಮ ವೃತ್ತಿಯ ಮೂಲಕ ದೇಶದ ಸುಂದರ ಭವಿಷ್ಯ ಕಟ್ಟಬೇಕು” ಎಂದು […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ: ಶಿಕ್ಷಕ ದಂಪತಿಗಳಿಗೆ ಸನ್ಮಾನ
ಹೆಮ್ಮಾಡಿ (ಸೆ. 05): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕ ದಂಪತಿಗಳಾದ ಪಡುಕೋಣೆ ಶ್ರೀ ಪಿ.ನರಸಿಂಹಮೂರ್ತಿ ಹಾಗೂ ಶ್ರೀಮತಿ ಜಯಂತಿ ಇವರನ್ನು ಘಟಕದ ವತಿಯಿಂದ ಅವರ ಸ್ವಗ್ರಹಕ್ಕೆ ತೆರಳಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಸಾಹಿತಿ,ನಾಟಕಕಾರ, ಸಮಾಜ ಸೇವಕ ಪ್ರಗತಿಪರ ಕೃಷಿಕ ,ನಿವೃತ್ತ ಶಿಕ್ಷಕ ಶ್ರೀ ಪಿ ನರಸಿಂಹಮೂರ್ತಿ ಮಾತನಾಡಿ […]
ಬಿ. ಬಿ. ಹೆಗ್ಡೆ ಕಾಲೇಜು: ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ
ಕುಂದಾಪುರ (ಸೆ.03): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2ರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಮಾತನಾಡಿ ಆರೋಗ್ಯ ಮತ್ತು ನೈರ್ಮಲ್ಯ ಉತ್ತಮ ಆರೋಗ್ಯದ ತಳಹದಿ, ಆಧುನಿಕತೆಯ ಯಾಂತ್ರಿಕ ಬದುಕಿಗೆ ಒಗ್ಗಿಕೊಂಡಿರುವAತ ವಿದ್ಯಾರ್ಥಿಗಳು ಆರೋಗ್ಯ ಮತ್ತು ಸ್ವಚ್ಛತೆಯ […]
ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ ( ಆ,05): ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಉದ್ಘಾಟಕರಾಗಿ ಆಗಮಿಸಿದ ಉಡುಪಿ ಜಿಲ್ಲಾ ಎನ್ಎಸ್ಎಸ್ ಘಟಕದ ನೋಡಲ್ ಆಫೀಸರ್ ಡಾ. ಜಯಶಂಕರ ಕಂಗನಾರು ಮಾತನಾಡಿ ನಿಸ್ವಾರ್ಥ ಬದುಕು ಪ್ರತಿಯೊಬ್ಬರ ವ್ಯಕ್ತಿತ್ವಕ್ಕೂ ಮೆರುಗನ್ನು ನೀಡಿ ಹೆಚ್ಚಿನ ಸಂತೋಷವನ್ನು ನೀಡುತ್ತದೆ. ಹಾಗಾಗಿ ನಿಸ್ವಾರ್ಥಿಗಳಾಗಿ ಬದುಕಲು ಕಲಿಯಬೇಕು ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಕಳೆದ […]










