ಕುಂದಾಪುರ (ಮೇ 09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ತೀರ್ಪುಗಾರರಾದ ಕುಂದಾಪುರದ ವಸಂತ ನಾಟ್ಯಲಯದ ನೃತ್ಯ ತರಬೇತುದಾರರಾದ ಶ್ರೀಮತಿ ಪ್ರವಿತಾ ಅಶೋಕ್, ಮಂದರ್ತಿ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಸಂಖ್ಯಾಶಾಸ್ತ್ರ ಉಪನ್ಯಾಸಕ ಶ್ರೀ ಪ್ರಭಾಕರ್ ಶೆಟ್ಟಿಗಾರ್ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಗೀತಾ ಶೆಟ್ಟಿ ಉಪಸ್ಥಿತರಿದ್ದು, ಅನಿಸಿಕೆಯ ಮಾತುಗಳನ್ನಾಡಿದರು. […]
Author: KundaVahini Editor
ವಿ.ಕೆ.ಆರ್. ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ
ಕುಂದಾಪುರ(ಮೇ,10): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಅಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ಎಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಹಾಜರಾದ 106 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 63 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎo. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗೂ ಭೋಧಕ […]
ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ
ಕಾರ್ಕಳ(ಮೇ,11): ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್ ಡಿ.ಕೆ, ವರ್ಷ ಹೆಚ್. ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿಗಳು […]
ಮೂಡಬಿದಿರೆಯಲ್ಲಿ ಮೇ 5 ರಂದು “ಕ್ರಿಯೇಟಿವ್ ಪುಸ್ತಕಮನೆ” ಶುಭಾರಂಭ
ಕಾರ್ಕಳ (ಮೇ,02):ಕ್ರಿಯೇಟಿವ್ ಪುಸ್ತಕ ಮನೆ ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10.00ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರು ಹಾಗೂ ಯುವರಾಜ್ ಜೈನ್, ಅಧ್ಯಕ್ಷರು, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳು, ಕಲ್ಲಬೆಟ್ಟು ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ಕಾರ್ಕಳದಲ್ಲಿ ‘ಪುಸ್ತಕ ಮನೆ’ಯು ಪುಸ್ತಕ ಪ್ರೇಮಿಗಳ, ಸಾಹಿತ್ಯಾಸಕ್ತರ ಮನಗೆದ್ದಿದ್ದು ಕರಾವಳಿಯಲ್ಲಿ ಸುಪ್ರಸಿದ್ಧ ಪುಸ್ತಕ ಮಳಿಗೆಯಾಗಿ ಗುರುತಿಸಿಕೊಂಡಿದೆ. ಪುಸ್ತಕ ಪ್ರಕಾಶನವು ಸೇರಿದಂತೆ ‘ಪುಸ್ತಕ ಸಂತೆ’, […]
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ: ಸಂಭ್ರಮದ ಸಾಂಪ್ರದಾಯಿಕ ದಿನಾಚರಣೆ
ಬ್ರಹ್ಮಾವರ (ಮೇ02): ಇಲ್ಲಿನ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ “ಸಾಂಪ್ರದಾಯಿಕ ದಿನವನ್ನು ಇತ್ತೀಚೆಗೆ ಆಚರಿಸಲಾಯಿತು. ಸದಾಕಾಲ ಶಿಸ್ತಿನಿಂದ ಸಮವಸ್ತ್ರವನ್ನು ಧರಿಸುತ್ತಿದ್ದ ವಿದ್ಯಾರ್ಥಿಗಳು ಸಾಂಪ್ರದಾಯಿಕ ದಿನದಂದು ವಿವಿಧ ಬಗೆಯ ಉಡುಗೆಗಳಿಂದ ಕಂಗೊಳಿಸಿದರು. ವಿದ್ಯಾರ್ಥಿನಿಯರು ಸೀರೆ, ಲಂಗ ದಾವಣಿ ತೊಟ್ಟಿದ್ದರೆ ವಿದ್ಯಾರ್ಥಿಗಳು ಬಿಳಿ ಪಂಚೆ, ಶರ್ಟು ,ಕುರ್ತಾ ಹೆಗಲ ಮೇಲೊಂದು ಶಾಲು ಧರಿಸಿ ಸಂಭ್ರಮದಿಂದ ಓಡಾಡುತ್ತಾ ಗಮನ ಸೆಳೆದರು . ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ತರಗತಿಯನ್ನು ವಿವಿಧ ಆಚರಣೆಯನ್ನು ಪ್ರತಿನಿಧಿಸುವ […]
ಬಿ. ಬಿ. ಹೆಗ್ಡೆ ಕಾಲೇಜು: ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು
ಕುಂದಾಪುರ (ಏಪ್ರಿಲ್ 30): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2ರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಮನಿಷ್ ಆಸ್ಪತ್ರೆಯ ಖ್ಯಾತ ಸ್ತ್ರೀರೋಗ ತಜ್ಞರಾದ ಡಾ| ಪ್ರಮೀಳಾ ನಾಯಕ್ರವರು ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಾಡುವ ಸಮಸ್ಯೆಗಳ ಬಗ್ಗೆ ಮಾತನಾಡಿ […]
43 ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಕುಂದಾಪುರದ ಶಿಕ್ಷಕ ಪ್ರಶಾಂತ್ ಶೆಟ್ಟಿ ಸಾಧನೆ
ಕುಂದಾಪುರ (ಏ,28): ಮಹಾರಾಷ್ಟ್ರದ ಮುಂಬೈ ಸೋಮಯ್ಯ ವಿದ್ಯಾ ವಿಹಾರ್ ವಿಶ್ವವಿದ್ಯಾಲಯದ ಕ್ರೀಡಾ ಸಂಕೀರ್ಣದಲ್ಲಿ ಏಪ್ರಿಲ್ 26 ರಿಂದ 28 ತನಕ ನಡೆದ 43 ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2024ರಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಕುಂದಾಪುರದ ಪ್ರಶಾಂತ್ ಶೆಟ್ಟಿ ಯವರು ಅತ್ಯುತ್ತಮ ಸಾಧನೆಗೈದಿದ್ದಾರೆ. ಪುರುಷರ ವಿಭಾಗದ ಟ್ರಿಪಲ್ ಜಂಪ್ ನಲ್ಲಿ ಬೆಳ್ಳಿ ಪದಕ ಹಾಗೂ ಪುರುಷರ ವಿಭಾಗದ 200ಮೀ ಓಟದಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಪ್ರಶಾಂತ […]
ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಗಳಲ್ಲಿ ಮಕ್ಕಳ ಸಂತೆ
ಕುಂದಾಪುರ (ಎ. 14) : ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ವ್ಯವಹಾರ ಜ್ಞಾನ ಅತಿ ಮುಖ್ಯ. ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಬೇಕಾದರೆ ಮಕ್ಕಳಿಗೆ ಎಲ್ಲರೊಂದಿಗೆ ಬೆರೆಯಲು ಮಾತಿನ ಕೌಶಲ್ಯ, ಲೆಕ್ಕಾಚಾರದ ವಿಚಾರ ತಿಳಿದಿರಬೇಕೆಂದು ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಸಂಸ್ಥೆ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ನ 10ನೇ ದಿನದಲ್ಲಿ ಶಾಲಾ ವಠಾರದಲ್ಲಿ ನಡೆದ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀಯುತ […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಪ್ರಾಚ್ಯ ವಸ್ತುಗಳ ಪ್ರದರ್ಶನ
ಕುಂದಾಪುರ (ಎ. 26): ಪ್ರಾಚ್ಯ ವಸ್ತುಗಳ ಪರಿಚಯ ಮತ್ತು ಅವುಗಳ ಉಪಯೋಗದ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳುವ ಮೂಲಕ ಪ್ರಾಚೀನ ವಸ್ತುಗಳನ್ನು ಸಂಗ್ರಹಿಸುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಪ್ರಾಚ್ಯ ವಸ್ತು ಸಂಗ್ರಹ ಸ್ಪರ್ಧೆಯನ್ನು ಉದ್ದೇಶಿಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹೇಳಿದರು. ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ಪತ್ರಕರ್ತ ಮಂಜುನಾಥ ಕಾಮತ್ ಹಾಗೂ ಶ್ರೀಮತಿ ನಿಮಿತಾ […]
ಬಿ. ಬಿ. ಹೆಗ್ಡೆ ಕಾಲೇಜು: ವಿಶೇಷ ಉಪನ್ಯಾಸ
ಕುಂದಾಪುರ (ಏಪ್ರಿಲ್ 24): ಬದುಕು ಭಾವನೆಗಳಿಂದ ಹೊರತಾದಾಗ ಅದು ಬಂಡೆಗಲ್ಲಿನoತಾಗುತ್ತದೆ ಹಾಗಾಗಿ ಬದುಕಿಗೆ ಭಾವನೆಗಳ ಆವರಣ-ಹೂರಣಗಳಿರಬೇಕು. ಆ ಭಾವನಾತ್ಮಕ ಬಂಧುಗಳಾದ ಹೆತ್ತ ತಾಯಿ, ಜನ್ಮಕೊಟ್ಟ ತಂದೆ, ವಿದ್ಯೆ ನೀಡಿದ ಗುರುವಿನ ನಡುವೆ ಭಾವನೆಗಳು ಬೆಸೆಯುವಂತಾದಾಗ ಜೀವನದ ಮೌಲ್ಯ ತಿಳಿಯುತ್ತದೆ ಎಂದು ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಿಂತಕ ಶ್ರೀ ಎನ್. ಆರ್. ದಾಮೋದರ ಶರ್ಮ ಬಾರ್ಕೂರು ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ […]










