ಕಾರ್ಕಳ( ಏ,26): ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ […]
Author: KundaVahini Editor
ಜೆ.ಇ.ಇ ಮೈನ್ ಫಲಿತಾಂಶ ಪ್ರಕಟ – ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ
ಕಾರ್ಕಳ (ಏ,26): ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ದುರ್ಗಾಶ್ರೀ ಎಮ್ 99.1312779, ನೇಹಾ ಕೆ ಉದಪುಡಿ 98.9485981, ಪ್ರಣವ್ ಟಿ ಎಮ್ 98.6313992, ಆದಿತ್ಯ ಅಲಗೌಡ ಪಾಟೀಲ್ 98.5573008, ಯುವರಾಜ್ ಬಿ ಕೆ 98.287914, ಅಕುಲ್ ಕೃಷ್ಣ ಎಮ್ ಎಸ್ 98.0229479, […]
ಕಾರ್ಕಳದ ಪುಸ್ತಕ ಮನೆಯಲ್ಲಿ ಪುಸ್ತಕ ಸಂತೆ
ಕಾರ್ಕಳ(ಏ.23): ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 29 ರವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಲಾಗಿದೆ. ದಿನಾಂಕ 23 ರ ಬೆಳಿಗ್ಗೆ 11 .೦೦ ಗಂಟೆಗೆ ಖ್ಯಾತ ವಾಗ್ಮಿ, ಸಾಹಿತಿ ಪ್ರಭಾಕರ ಕೊಂಡಳ್ಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ಪುಸ್ತಕಗಳಿಗೂ ೧೦ ರಿಂದ ೫೦ ಶೇಕಡಾ ವಿಶೇಷ ರಿಯಾಯಿತಿಯನ್ನು […]
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ: ಅಪರಂಜಿ ಬೇಸಿಗೆ ಶಿಬಿರ ಸಂಪನ್ನ
ಕಿರಿಮಂಜೇಶ್ವರ( ಎ,20): ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಕಿರಿಮಂಜೇಶ್ವರದಲ್ಲಿಏಪ್ರಿಲ್ 15 ರಿಂದ 19ರ ವರೆಗೆ ಐದು ದಿನಗಳ ಕಾಲ ನಡೆದ ಚಿಣ್ಣರ ಬೇಸಿಗೆ ಶಿಬಿರ ‘ಅಪರಂಜಿ’ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರವರು ಮಾತನಾಡಿ ಬೇಸಿಗೆ ಶಿಬಿರದ ಮೂಲಕ ವಿದ್ಯಾರ್ಥಿಗಳಲ್ಲಿ ಬಾಂಧವ್ಯ ವೃದ್ಧಿಯಾಗುತ್ತದೆ, ವಿದ್ಯಾರ್ಥಿಗಳೇ […]
ಬಿದ್ಕಲ್ ಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ : ಮತದಾರರ ಜಾಗೃತ ಕಾರ್ಯಕ್ರಮ
ಕುಂದಾಪುರ(ಎ,20): ತಾಲೂಕಿನ ಬಿದ್ಕಲ್ ಕಟ್ಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಸರ್ಕಾರಿ ಪದವಿ ಪೂರ್ವಕಾಲೇಜು ಬಿದ್ಕಲ್ ಕಟ್ಟೆ ಮತ್ತು ಬಿದ್ಕಲ್ ಕಟ್ಟೆ ಗ್ರಾಮಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಬಿದ್ಕಲ್ ಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಏಪ್ರಿಲ್ 19 ರಂದು ಮತದಾರರ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅದ್ಯಕ್ಷತೆಯನ್ನು .ಐ.ಟಿ.ಐ.ಸಂಸ್ಥೆಯ ಪ್ರಾಂಶುಪಾಲರಾದ ಗಂಗಾಧರಪ್ಪ ರವರು ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರ್ಕಾರಿ ಪದವಿ ಪೂರ್ವಕಾಲೇಜು ಬಿದ್ಕಲ್ಕಟ್ಟೆ ಇದರ ರಾಜ್ಯ ಶಾಸ್ತ್ರ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: CA,CS,CMA ಕೋರ್ಸ್ ಗಳ ಆರಂಭ
ಕುಂದಾಪುರ( ಏ.18): ವಾಣಿಜ್ಯ ವಿಭಾಗದ ಉನ್ನತ ಶ್ರೇಣಿ ಪದವಿಗಳಾದ CA,CS,CMA ಕೋರ್ಸುಗಳನ್ನು ಮಾಡಲು ಸುವರ್ಣ ಅವಕಾಶವನ್ನು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ನೀಡುತ್ತಿದೆ. ಇಲ್ಲಿನ ಪ್ರೊಫೆಷನಲ್ ಕೋರ್ಸ್ ವಿಭಾಗವು ದಿನಾಂಕ 02 ಮೇ 2024 ರಿಂದ ತಮ್ಮ ನೂತನ ಬ್ಯಾಚ್ಗಳನ್ನು ಪ್ರಾರಂಭಿಸಿ, ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸ್ ಬಗೆಗಿನ ವಿಶೇಷ ತರಬೇತಿಗಳನ್ನು ನಿರಂತರವಾಗಿ ಕೊಡಲು ನಿರ್ಧರಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿ ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ. […]
ಎಚ್.ಎಮ್.ಎಮ್ ಮತ್ತು ವಿ. ಕೆ. ಆರ್ ಶಾಲೆಗಳ ಸಮ್ಮರ್ ಕ್ಯಾಂಪ್ ಸಂಪನ್ನ
ಕುಂದಾಪುರ (ಎ. 16) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಎನ್ನುವುದು ಒಂದು ವಿಶೇಷ, ವಿನೂತನ ಕಾರ್ಯಕ್ರಮ.ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಬೇಸಿಗೆ ಶಿಬಿರವು ಒಂದು ಅದ್ಬುತ ವೇದಿಕೆ. ಮಕ್ಕಳು ಶಿಬಿರದಲ್ಲಿ ಕಲಿತಿರುವ ಉತ್ತಮ ಅಂಶಗಳನ್ನು ತಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೋಟೇಶ್ವರದ ಪ್ರಸಿದ್ಧ ಉದ್ಯಮಿ ಬೆಂಗಳೂರು ಅಯ್ಯಂಗಾರ್ ಬೇಕರಿ ಮಾಲೀಕರಾದ ಶ್ರೀ. ಬಿ. ಎಸ್. ವಿಶ್ವನಾಥ್ ರವರು ಹೇಳಿದರು. ಅವರು ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ […]
ಲಯನ್ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಯವರಿಗೆ ಸನ್ಮಾನ
ಉಡುಪಿ (ಏ,13): ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ಏಪ್ರಿಲ್ 13 ರಂದು ನಡೆದ ಅಂತರಾಷ್ಟ್ರೀಯ ಲಯನ್ ಸಂಸ್ಥೆ 317 ಸಿ ಜಿಲ್ಲೆಯ 21 ನೆಯ ಜಿಲ್ಲಾ ಸಮ್ಮೇಳನದ ಕಾರ್ಯಕ್ರಮದಲ್ಲಿ ಯುವ ಸಂಘಟಕ, ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಇವರನ್ನು ಜಿಲ್ಲೆಯ ವತಿಯಿಂದ ಜಿಲ್ಲಾ ಗವರ್ನರ್ ಡಾ ನೇರಿ ಕರ್ನೆಲಿಯೂ ಸನ್ಮಾನಿಸಿ ಗೌರವಿಸಿದರು. ಜಿಲ್ಲಾ ಗವರ್ನರ್ ನೇರಿ ಕರ್ನೆಲಿಯೋ ಮಾತನಾಡಿ ಕಳೆದ ಹತ್ತು ವರ್ಷಗಳಿಂದ ನಾನು ಮಿಲಾಗ್ರಿಸ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದಾಗಿನಿಂದಲೂ […]
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ದಾಖಲೆಯ ಮೂರನೇ ವರ್ಷವೂ ಶೇ. 100 ಫಲಿತಾಂಶ
ಕಾರ್ಕಳ (ಏ.11): 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆ ಬರೆದ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್. ಹೆಚ್ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ್ಯಾಂಕ್ , ಹಂಸಿನಿ ವಿ 591 […]
ಏ.14 ರಂದು ಬಗ್ವಾಡಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ (ಏ.10): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ(ರಿ),ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ರಕ್ತನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದೊಂದಿಗೆ ,ಮಹಿಷಮರ್ದಿನಿ ಯುವಕ ಮಂಡಲ(ರಿ ). ಬಗ್ವಾಡಿ ಹಾಗೂ ಬಗ್ವಾಡಿ ಫ್ರೆಂಡ್ಸ್ ಬಗ್ವಾಡಿ ಇವರ ಸಹಾಭಾಗಿತ್ವದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏ.14 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ -ಬಗ್ವಾಡಿಯಲ್ಲಿ ನಡೆಯಲಿದೆ. ಒಂದು ಅಮೂಲ್ಯ ಜೀವ ಉಳಿಸುವ […]










