ಗಂಗೊಳ್ಳಿ(ನ,7): ಕಾರ್ಕಳ ತಾಲೂಕು ಅಜೆಕಾರುವಿನ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಪ್ರಶಸ್ತಿಗೆ ಕುಂದಾಪುರದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಮ್ ದೇವಾಡಿಗ ಇವರು ಆಯ್ಕೆಯಾಗಿರುತ್ತಾರೆ. ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಸಂಜಿತ್ ಎಮ್ ದೇವಾಡಿಗ ಗಂಗೊಳ್ಳಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಚಿತ್ರಕಲಾ ಶಿಕ್ಷಕ […]
Category: ನಮ್ಮ ಕುಂದಾಪುರ
ನಮ್ಮ ಕುಂದಾಪುರ
ಉಡುಪಿ: ನ ,08 ರಂದು ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮ
ಉಡುಪಿ (ನ,06): ಕನ್ನಡ ಜಾನಪದ ಪರಿಷತ್ ಬೆಂಗಳೂರು,ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಉಡುಪಿ ಜಿಲ್ಲೆ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮವು ನ,8 ರಂದು ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ.ಎಸ್ ಬಾಲಾಜಿಯವರು ನೆರವೇರಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರೇಗೌಡ ರವರು […]
ದೀಪಾವಳಿಯ ನೆನಪಿನಂಗಳ
ದೀಪಾವಳಿ ……ದೀಪಾವಳಿ…………. ಗೋವಿಂದ ಲೀಲಾವಳಿ.. ಅಳಿಯ ಮಗನಾ…….. ” ಹರಿಯಾ ಆ ಟೇಪ್ ಸೌಂಡ್ ಒಂಚೂರ್ ಕಮ್ಮಿ ಮಾಡ್.. ಕೆಮಿ ಕೆಪ್ಪ್ ಆಯ್ತಾ ನಿಮ್ದ್?”… ಗಡಾ ಹೋಯ್ ಕಮ್ಮಿ ಮಾಡ್, ಇಲ್ದಿರ್ ಅಪ್ಪ ಪಟಾಕಿಗ್ ದುಡ್ದ್ ಕೊಡುದಿಲ್ಲ.. ಹ್ಮಾಂ.. ಸರಿ; ಗಳಿನ್ ಒಟ್ಟಿಯಂಗ್ ದುಡ್ಡ್ ಇಟ್ಟದ್ ತೆಗುವಾ? ಪಟಾಕಿಗ್ ಆತ್ತ್…. ಉದ್ದ ತೆಮಿಗ್ ಕಟ್ಟದ್, ಬಿದ್ರಂಗ್ ಮಾಡದ್ ಗೂಡ್ ದೀಪ ಗಾಳಿಗ್ ಬಾಲ ಬೀಸ್ತಾ ಇತ್ತು…ಬಿಸ್ಲ್ ನೆತ್ತಿಗ್ ಏರುಕ್ ಹತ್ತಿತ್…. ಸೆಗ್ಣಿ […]
ರಾಷ್ಟಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕ ನಾಗರಾಜ ಖಾರ್ವಿ ಆಯ್ಕೆ
ಕುಂದಾಪುರ (ಅ,23): ದಾವಣಗೆರೆಯ ಹರಿಹರದಲ್ಲಿ ನಡೆದ ರಾಜ್ಯಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶಿಕ್ಷಕ ನಾಗರಾಜ ಖಾರ್ವಿ ಬ್ರೆಸ್ಟ್ ಸ್ಟ್ರೋಕ್ 50 ಮೀ ಚಿನ್ನಬ್ರೆಸ್ಟ್ ಸ್ಟ್ರೋಕ್ 100 ಮೀ ಚಿನ್ನಬ್ರೆಸ್ಟ್ ಸ್ಟ್ರೋಕ್ 200 ಮೀ ಬೆಳ್ಳಿ50×4 ಮೆಡ್ಲೆ ರಿಲೇ ಕಂಚು100X4 ಫ್ರೀ ಸ್ಟೈಲ್ ರಿಲೇ ಕಂಚು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರುಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿಯಾಗಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ […]
ಕರಾವಳಿಯ ಹೆಮ್ಮೆ,ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ
ಮಂಗಳೂರು (ಅ,23): ಮಂಗಳೂರು ಬೀದಿಯಲ್ಲಿ ಬುಟ್ಟಿಯಲ್ಲಿ ಕಿತ್ತಾಳೆ ಹಣ್ಣು ಮಾರಾಟ ಮಾಡಿ ಬಂದ ಲಾಭದ ಹಣವನ್ನು ಗ್ರಾಮೀಣ ಪ್ರದೇಶವಾದ ಹರೇಕಳ ನ್ಯೂಪಡ್ಪುವಿನಲ್ಲಿ ಸರಕಾರಿ ಶಾಲೆ ಆರಂಭಿಸಲು ಶ್ರಮವಹಿಸಿದ ಹರೇಕಳ ಹಾಜಬ್ಬ ನವರ ಶೈಕ್ಷಣಿಕ ಕಾಳಜಿಯನ್ನು ಗುರುತಿಸಿ ಕೇಂದ್ರ ಸರಕಾರ 2020ರ ಸಾಲಿನಲ್ಲಿ ಪ್ರಕಟಿಸಿದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ನ.8ರಂದು ದೆಹಲಿಗೆ ಆಗಮಿಸುವಂತೆ ಕೇಂದ್ರ ಗೃಹಸಚಿವಾಲಯದಿಂದ ಅಧಿಕೃತ ಅಹ್ವಾನ ಬಂದಿದೆ. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದಿರುವ ಸರಳ ಸಜ್ಜನಿಕೆಯ […]
ಡಾ.ಗೋವಿಂದ ಬಾಬು ಪೂಜಾರಿ ಯವರಿಗೆ ಕರಾವಳಿ ಕಾಮಧೇನು ಪ್ರಶಸ್ತಿ ಪುರಸ್ಕಾರ
ಕುಂದಾಪುರ (ಅ,18): ಶ್ರಿ ನಾರಾಯಣ ಗುರು ಯುವಕ ಮಂಡಲ (ರಿ) ಕುಂದಾಪುರ ಆಯೋಜನೆಯ ಅದ್ದೂರಿ ಕುಂದಾಪುರ ದಸರಾ-2021 ರ ಸಂದರ್ಭದಲ್ಲಿ ಉದ್ಯಮಿ ಕೊಡುಗೈದಾನಿ ಡಾ. ಗೋವಿಂದ ಬಾಬು ಪೂಜಾರಿ ಯವರಿಗೆ ಕರಾವಳಿ ಕಾಮಧೇನು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಲ್ಲವ ಸಮಾಜಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ,ಶ್ರೀ ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಶ್ರಿನಾಥ ಕಡ್ಗಿಮನೆ, ನಾರಾಯಣ ಗುರು ಟ್ರಸ್ಟ್ ನ ಕಾರ್ಯದರ್ಶಿ ಭಾಸ್ಕರ ವಿಟಲವಾಡಿ,ಬಿಲ್ಲವ […]
ಕಡಲ ತಡಿಯ ಆಪದ್ಬಾಂಧವ, ಜನಸೇವಕ, ಮತ್ಸ್ಯೋದ್ಯಮಿ ಜಗನ್ನಾಥ ಉಪ್ಪುಂದ
ಮಾನವೀಯತೆ ಎಂದರೆ ಮಾನವ ಸ್ಥಿತಿಯಿಂದ ಉದ್ಭವಿಸಿದ ಪರ ಹಿತ ಚಿಂತನೆಯ ಮೂಲಭೂತ ನೀತಿತತ್ವ. ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಾಣವಕ್ಕು”ಎಂದು ಸರ್ವಜ್ಞನ ಮಾತಿನಂತೆ, ತನ್ನಂತೆಯೇ ಇನ್ನೊಂದು ಜೀವಕ್ಕೂ ನೋವಾಗುತ್ತದೆ ಆದು ಗೊತ್ತಿದ್ದು ಇನ್ನೊಂದು ಜೀವವನ್ನು ತಾನು ನೋಯಿಸಬಾರದು ಎಂಬ ವಿವೇಕ ನಮ್ಮಲ್ಲಿ ಜಾಗೃತ ವಾದರೆ ಮಾನವೀಯತೆ ಮತ್ತು ಮನುಷ್ಯತ್ವಕ್ಕೆ ಒಂದು ಅರ್ಥ ಬರುತ್ತದೆ. ಮಾನವೀಯತೆ ಪ್ರತಿ ಮನುಷ್ಯನ ಹೃದಯದಲ್ಲಿ ಮನೆ ಮಾಡಬೇಕು.ಮಾನವೀಯತೆ ಏಕೆ ಮಾನವನಿಗೆ ಮಹತ್ವದಾಗಿದೆ ಎಂಬ ಕಲ್ಪನೆ ಮತ್ತು […]
ಗಂಗೊಳ್ಳಿ ಶಾರದೋತ್ಸವದಲ್ಲಿ ಸಂಜಿತ್ ಸ್ಯಾಕ್ಸೋಫೋನ್ ವಾದನ ಸೇವೆ
ಗಂಗೊಳ್ಳಿ(ಅ,12): ಸೇವಾ ಸಂಘ(ರಿ.) ಗಂಗೊಳ್ಳಿಯ 47 ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಎರಡನೇ ದಿನವಾದ ಮಂಗಳವಾರದಂದು ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಹುಮುಖ ಬಾಲ ಪ್ರತಿಭೆ ಸಂಜಿತ್ ಎಮ್ ದೇವಾಡಿಗ ತಮ್ಮ ತಂಡದೊಂದಿಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ಸಲ್ಲಿಸಿದರು. ಗಣನಾಯಕಾಯ, ನಮ್ಮಮ್ಮ ಶಾರದೆ, ಎಂತ ಅಂದ ಎಂತ ಚೆಂದ, ಶಾರದೆ ದಯೆ ತೋರಿದೆ, ಬ್ರಹ್ಮ ಮುಕುಟೆ, ಭಾಗ್ಯದ ಲಕ್ಷ್ಮಿ ಬಾರಮ್ಮ, ತಂಬೂರಿ ಮೀಟಿದವ ಮೊದಲಾದ ಗೀತೆಗಳನ್ನು ಸಾಕ್ಸೋಫೋನ್ ವಾದನದ ಮೂಲಕ […]
ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಈಶ್ವರ್ ಮಲ್ಪೆ ಆಯ್ಕೆ
ಕೋಟ (ಅ, 12) : ಪ್ರತಿವರ್ಷದಂತೆ ಶ್ರೀ ಅಘೋರೇಶ್ವರ ಕಲಾರಂಗದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕೊಡಮಾಡುತ್ತಿರುವ ಶ್ರೀಅಘೋರಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಈ ಸಮಾಜ ಸೇವಕ, ಮುಳುಗು ತಜ್ಞ, ಜೀವರಕ್ಷಕ, ಆಪದ್ಬಾಂಧವ. ಈಶ್ವರ ಮಲ್ಪೆ ಯವರನ್ನು ಆಯ್ಕೆಗೊಳಿಸಲಾಗಿದ್ದು ನವಂಬರ್ 13ರಂದು ಸಂಜೆ ಸಂಜೆ ಸಾಲಿಗ್ರಾಮದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ನೀಡಲಿದೆ ಎಂದು ಶ್ರೀ ಅಘೋರೇಶ್ವರ ಕಲಾರಂಗದ ಕಾರ್ಯದರ್ಶಿ ನಾಗರಾಜ್ ಐತಾಳ್ ಪತ್ರಿಕಾ […]
ಶೆಫ್ ಟಾಕ್ ಸಂಸ್ಥೆಯ ಗುಣಮಟ್ಟದ ಸೇವೆಗೆ ಕ್ಯಾಟರಿಂಗ್ ಕಂಪೆನಿ ಆಫ್ ದಿ ಅವಾರ್ಡ್ – 2021 ಪ್ರಶಸ್ತಿ
ಬೈಂದೂರು (ಅ, 12) :ದೇಶದ ವಿವಿಧ ರಾಜ್ಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಯ ಜೊತೆಗೆ ಉತ್ತಮ ಆದರಾತಿಥ್ಯಕ್ಕೆ ಹೆಸರುವಾಸಿಯಾದ ಡಾ. ಗೋವಿಂದ ಬಾಬು ಪೂಜಾರಿಯವರ ಮಾಲೀಕತ್ವದ ಶೆಫ್ಟಾಕ್ ಸಂಸ್ಥೆಗೆ ಆಲ್ ಇಂಡಿಯಾ ಬಿಸಿನೆಸ್ ಡೆವೆಲಪ್ಮೆಂಟ್ ಅಸೋಸಿಯೇಷನ್ ಕ್ಯಾಟರಿಂಗ್ ಕಂಪೆನಿ ಆಫ್ ದಿ ಅವಾರ್ಡ್ -2021 ನೀಡಿ ಗೌರವಿಸಿದೆ. ನವದೆಹಲಿಯಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ.ಗೋವಿಂದ ಬಾಬು ಪೂಜಾರಿಯವರು ಪ್ರಶಸ್ತಿಯನ್ನು ಸ್ವೀಕರಿಸಿದರು.










