ಕುಂದಾಪುರ(ಜ,20): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ, ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ನ ಪಿ ಎಸ್ ಐ ಆಗಿರುವ ಶ್ರೀ ಪವನ್ ನಾಯಕ್ ಹಾಗೂ ಪಿ ಎಸ್ ಐ ಶ್ರೀ ನೂತನ್ ಡಿ ಇ ಅವರು ಆಗಮಿಸಿದ್ದರು. ಪವನ್ ನಾಯಕ್ ಅವರು ಮಾತನಾಡಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಮೊಗವೀರ ಯುವ ಸಂಘಟನೆ- ಹೆಮ್ಮಾಡಿ ಘಟಕ: ಬಗ್ವಾಡಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ
ಹೆಮ್ಮಾಡಿ (ಜ.20): ಮೊಗವೀರ ಯುವ ಸಂಘಟನೆ(ರಿ),ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವಠಾರದಲ್ಲಿ ಜನವರಿ 19 ರಂದು ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆ(ರಿ.), ಉಡಯಪಿ ಜಿಲ್ಲೆ ಇದರ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಹಿರಿಯಡ್ಕ ಅವರು ಆಗಮಿಸಿ ಹೆಮ್ಮಾಡಿ ಘಟಕದ ಸೇವೆಯನ್ನು ಶ್ಲಾಘಿಸಿದರು. ಈ ಸಂರ್ಭದಲ್ಲಿ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್.ಕುಂದರ್ ಹಾಗೂ ಸಂಘಟನೆಯ ಪದಾಧಿಕಾರಿಗಳು, ಘಟಕದ ಮಾಜಿ […]
ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನೋಂದಾವಣೆ ಅವಧಿ ಜನವರಿ 25 ರ ತನಕ ವಿಸ್ತರಣೆ
ಉಡುಪಿ (ಜ .19): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ-ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆರೋಗ್ಯ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನೋಂದಾವಣೆ ಅಭಿಯಾನದ ಅವಧಿಯನ್ನು ಜನವರಿ 25 ರ ತನಕ ವಿಸ್ತರಿಸಲಾಗಿದೆ. ಹೆಮ್ಮಾಡಿ ಭಾಗದ ಸಾರ್ವಜನಿಕರು ಈ ಆರೋಗ್ಯ ಕಾರ್ಡನ್ನು ಹೆಮ್ಮಾಡಿ ಬಸ್ ನಿಲ್ದಾಣ ದ ಸಮೀಪದ […]
ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆ: ಕರಾಟೆಯಲ್ಲಿ ಉತ್ತಮ ಸಾಧನೆ
ಕುಂದಾಪುರ (ಜ,12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯವಿದ್ಯಾರ್ಥಿಗಳು ಉತ್ತರ ಕನ್ನಡ ಕರಾಟೆ ಟೀಚರ್ಸ್ ಆಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಭಟ್ಕಳದಲ್ಲಿ ನಡೆದ ರಾಜ್ಯಮಟ್ಟದ ಓಪನ್ಕರಾಟೆ ಚಾಂಪಿಯನ್ಶಿಪ್ ಭಟ್ಕಳ 2024 ರಲ್ಲಿ ಭಾಗವಹಿಸಿ, ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ ಕಟಾ – ಕುಮಿಟೆಯಲ್ಲಿ ಪ್ರಥಮ, ಅಥರ್ವ ಕುಮಿಟೆಯಲ್ಲಿ ಪ್ರಥಮ, ಕಟಾ- ದ್ವಿತೀಯ ಹಾಗೂ ಅರ್ನೋನ್ ಡಿ […]
ಎಚ್ ಎಮ್ ಎಮ್ & ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ : ವಾರ್ಷಿಕ ಕ್ರೀಡಾಕೂಟ 2024
ಕುಂದಾಪುರ (ಜ. 17) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟವು ಕುಂದಾಪುರದಗಾಂಧಿ ಮೈದಾನದಲ್ಲಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕರಾದ ಶ್ರೀ ಬಿ. ಎಂ ಸುಕುಮಾರ ಶೆಟ್ಟಿಯವರುಕ್ರೀಡಾರ್ಥಿಗಳಿಗೆ ಶುಭ ಹಾರೈಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಶ್ರೀ ಸೀತಾರಾಮ ನಕ್ಕತ್ತಾಯ […]
ಸರಕಾರಿ ಪಿ.ಯು ಕಾಲೇಜು ಕುಂದಾಪುರ: ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ
ಕುಂದಾಪುರ(ಜ.15): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಹಿರಿಯ ಉಪನ್ಯಾಸಕ ಶ್ರೀ ಭುಜಂಗ ಶೆಟ್ಟಿ ಯವರು ಸ್ವಾಮಿ ವಿವೇಕಾನಂದರ ಕುರಿತಾಗಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ರೂಡಿಸಿಕೊಳ್ಳಬೇಕು, ಭಾರತೀಯ ಸಂಸ್ಕೃತಿಯನ್ನು ಪ್ರತಿನಿಧಿಸುವ ಯುವ ಸಮೂಹದ ಸೃಷ್ಟಿಯಾಗಬೇಕು ಎಂದು […]
ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನೇರಳಕಟ್ಟೆಯ ರಕ್ಷಿತ್ ತೇರ್ಗಡೆ
ಕುಂದಾಪುರ (ಜ,15) : ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯಾ 2023ರ ನವೆಂಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನೇರಳಕಟ್ಟೆಯ ರಕ್ಷಿತ ತೇರ್ಗಡೆ ಹೊಂದಿದ್ದಾರೆ. ನೇರಳಕಟ್ಟೆಯ ನಿವಾಸಿ ಶ್ರೀಮತಿ ಸಾಧು ಹಾಗೂ ಶ್ರೀ ಶಂಕರ ಪೂಜಾರಿಯವರ ಪುತ್ರನಾದ ಇತ ತನ್ನ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಹಿರಿಯ ಪ್ರಾಥಮಿಕ.ಶಾಲೆ, ಕರ್ಕುಂಜೆಯಲ್ಲಿ ಹೈಸ್ಕೂಲ್ ಶಿಕ್ಷಣವನ್ನು ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಳದ ಫ್ರೌಡ ಶಾಲೆ, ಮಾವಿನಕಟ್ಟೆಯಲ್ಲಿ , ಪದವಿ ಪೂರ್ವ […]
ಕ್ರಿಯೇಟಿವ್ ಕಾಲೇಜಿನಲ್ಲಿ ರಾಷ್ಟ್ರ ಚೇತನ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ
ಕಾರ್ಕಳ( ಜ,15): ಸ್ವಾಮಿ ವಿವೇಕಾನಂದರ ಚಿಂತನೆಗಳು ಭಾರತ ಮಾತ್ರವಲ್ಲ ವಿಶ್ವವ್ಯಾಪಿಯಾದುದು. ಯುವಕರು ದೇಶದ ಭವಿಷ್ಯ ಉಜ್ವಲಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಆತ್ಮೋದ್ಧಾರ ಮಾರ್ಗವೇ ಜಗವನ್ನು ಹಾಗೂ ಮನುಷ್ಯರನ್ನು ಅರಿಯಲು ಇರುವ ದಾರಿ. ಯುವಕರ ಕಣ್ಮಣಿಯಾಗಿ, ಸಿಡಿಲ ಸಂತನಾಗಿ ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಮಾಡಿದ ಮಹಾತ್ಮ ಸ್ವಾಮಿ ವಿವೇಕಾನಂದರು. ಎಲ್ಲರಿಗೂ ಸ್ಪೂರ್ತಿಯ ಚಿಲುಮೆ ಎಂದು ಗಣಿತ ಉಪನ್ಯಾಸಕ ಶ್ರೀ ಪ್ರದೀಪ್ ಅಂಚನ್ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ʼಯುವ ಸಪ್ತಾಹʼದ ಅಂಗವಾಗಿ […]
ಸಿ.ಎ. ಪರೀಕ್ಷೆಯಲ್ಲಿ ಡಾI ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಜ.11): ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯಾ 2023ರ ನವೆಂಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ರಕ್ಷಿತ್ (2017-18) ಉತ್ತೀರ್ಣರಾಗಿದ್ದಾರೆ. ಅಂತಿಮ ಬಿ.ಕಾಂ. ಪದವಿಯ ವಿದ್ಯಾರ್ಥಿಗಳಾದ ವೈಷ್ಣವಿ ಶೆಟ್ಟಿ, ಅಮೃತ ಕೆ. ಸಿ.ಎ. ಇಂಟರ್ ಮೀಡಿಯೆಟ್ ಗ್ರೂಪ್ 2 ರ ಪರೀಕ್ಷೆ ಹಾಗೂ ಸುದರ್ಶನ ಉಪಾಧ್ಯ ಗ್ರೂಪ್ 1 ರ ಪರೀಕ್ಷೆಯಲ್ಲಿ […]
ಡಾ.ಗಣೇಶ್ ಗಂಗೊಳ್ಳಿ ಯವರಿಗೆ ‘ಖಿದ್ಮಾ ಸೇವಾರತ್ನ’ ಪ್ರಶಸ್ತಿ ಪ್ರದಾನ
ಕುಂದಾಪುರ ( ಜ.12): ರಾಜ್ಯದ ಪ್ರಸಿದ್ದ ಸುಗಮ ಸಂಗೀತ ಗಾಯಕ ಹಾಗೂ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಯವರ ಸಂಘಟನೆ ಹಾಗೂ ಕನ್ನಡ ನಾಡು ನುಡಿ ಸುಗಮ ಸಂಗೀತದಲ್ಲಿ ಅಪಾರ ಮತ್ತು ಅನುಪಮ ಸಾಧನೆಯನ್ನು ಗುರುತಿಸಿ, “”ಖಿದ್ಮಾ ಸೇವಾರತ್ನ”” ರಾಜ್ಯ ಪ್ರಶಸ್ತಿ ಲಭಿಸಿದೆ. ಖಿದ್ಮಾ ಫೌಂಡೇಶನ್ ಕರ್ನಾಟಕ ಮತ್ತು ವಿಜಯ ಕಾಲೇಜು ಜಯನಗರ, ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಬೆಂಗಳೂರಿನ ವಿಜಯ […]










