ಕುಂದಾಪುರ (ಆ.01): ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (ರಿ.) ಉಡುಪಿ ಜಿಲ್ಲೆ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯು ಶಿಕ್ಷಕರ ದಿನಾಚರಣೆ ಪ್ರಯುಕ್ತ ಕೊಡಮಾಡುವ 2024-25 ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿ ಇದರ ಸಹ ಶಿಕ್ಷಕ ಶ್ರೀ ಗಣೇಶ್ ಶೆಟ್ಟಿ ಭಾಜನರಾಗಿದ್ದಾರೆ. ಇವರು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶನದಂತೆ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಬಿ. ಬಿ. ಹೆಗ್ಡೆ ಕಾಲೇಜು : ಡೆಂಗ್ಯೂ ಅರಿವು ಕಾರ್ಯಕ್ರಮ
ಕುಂದಾಪುರ (ಸೆ. 25) : ಇಲ್ಲಿನ ಡಾ| ಬಿ ಬಿ ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಕುಂದಾಪುರದ ಜಂಟಿ ಆಶ್ರಯದಲ್ಲಿ ‘ಡೆಂಗ್ಯೂ ಅರಿವು’ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ| ಪ್ರೇಮಾನಂದ ಅವರು ಮಾತನಾಡಿ, ಡೆಂಗ್ಯೂ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ […]
ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ
ಗಣಿತ ನಗರ ( ಸೆ .29): ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ ವಿಭಾಗದ ಗುಣಶ್ರೀ ಆರ್, ಮನಸ್ವಿ.ಎಚ್.ಟಿ, ಪ್ರಥಮ ವಿಜ್ಞಾನ ವಿಭಾಗದ ಪೂರ್ಣಶ್ರೀ.ವಿ.ಎಸ್. ಹಾಗೂ ಬಾಲಕರ ವಿಭಾಗದಲ್ಲಿ ದಿಗಂತ್.ಎಚ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ […]
ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಪ್ರಿ ಪ್ಲೇಸ್ಮೆಂಟ್ ತರಬೇತಿ ಕಾರ್ಯಗಾರ
ಕುಂದಾಪುರ( ಸೆ,29): ಮೂಡ್ಲಕಟ್ಟೆ ಐ ಎಮ್ ಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಿ ಪ್ಲೇಸ್ಮೆಂಟ್ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು . ಈ ತರಬೇತಿ ಕಾರ್ಯಗಾರವನ್ನು ಎಕಾಮ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ (ಯುಎಸ್), ಬೆಂಗಳೂರಿನ ಡೆಪ್ಯುಟಿ ಟೀಮ್ ಲೀಡ್ ರಾದ ಶ್ರೀ ದೇವರಾಜ ರವರು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಎದುರಿಸುವ ಬಗೆ, ವಿವಿಧ ಹಂತ, ಮತ್ತು ಪೂರ್ವ ತಯಾರಿಯ ಕುರಿತು […]
ಹೆಮ್ಮಾಡಿ: ಜನತಾ ಪಿ .ಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ
ಹೆಮ್ಮಾಡಿ(ಸೆ.29): ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟ ಜನತಾ ಕ್ರೀಡಾಂಗಣ ಹೆಮ್ಮಾಡಿಯಲ್ಲಿ ನಡೆಯಿತು.ಅಂತಾರಾಷ್ಟ್ರೀಯ ಕಿವುಡರ ಟಿ-20 ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದ ಭಾರತ ತಂಡದ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಹುಂಚನಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಜನತಾ […]
ಹೆಮ್ಮಾಡಿ: ಜನತಾ ಪಿ. ಯು ಕಾಲೇಜಿನ ಶ್ರುತಿಕಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ:( ಸೆ.29): ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಜಿಲ್ಲಾ ಮಟ್ಟದ ಟೆನ್ನಿಕಾಯ್ಟ್ ನಲ್ಲಿ ಸರಸ್ವತಿ ವಿದ್ಯಾಲಯ ಪ್ರಥಮ
ಗಂಗೊಳ್ಳಿ( ಸೆ,27): ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ಸಹನಾ ಖಾರ್ವಿ,ಮಾನ್ಯ ಖಾರ್ವಿ, ಭೂಮಿಕಾ ಖಾರ್ವಿ, ಮತ್ತು ಅಮೂಲ್ಯ ಖಾರ್ವಿ ತಂಡವನ್ನು ಪ್ರತಿನಿಧಿಸಿದ್ದರು. ಸಹನಾ ಖಾರ್ವಿ ಬೆಸ್ಟ್ […]
ಜಿಲ್ಲಾಮಟ್ಟದ ದಸರಾ ಕ್ರೀಡಾ ಕೂಟ: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ಅನ್ವಿ ಹೆಚ್. ಅಂಚನ್ ರಾಜ್ಯ ಮಟ್ಟಕ್ಕೆ
ಉಡುಪಿ( ಸೆ.27): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2024 ನೇ ಸಾಲಿನ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದ ಮಹಿಳೆಯರ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನ್ವಿ ಹೆಚ್. ಅಂಚನ್ ಆರ್ಟಿಸ್ಟಿಕ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಾರ್ಕಳದ ಶ್ರೀ ಹರೀಶ್ ಹಾಗೂ ಶ್ರೀಮತಿ […]
ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಶ್ರೀ ಆನಂದ್ ಸಿ.ಕುಂದರ್ ಆಯ್ಕೆ
ಕೋಟ(ಸೆ.27): ಗೀತಾನಂದ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಕಾಳಜಿಗೆ ನಿರಂತರವಾಗಿ ಸ್ಪಂದಿಸುತ್ತಿರುವ ಕೊಡುಗೈದಾನಿ ಶ್ರೀ ಆನಂದ್ ಸಿ.ಕುಂದರ ರವರು ಸರಕಾರಿ ಶಾಲಾ ಎಸ್ .ಡಿ .ಎಂ .ಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆ ನೀಡುವ 2024 -25 ಸಾಲಿನ ಉಡುಪಿ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ .29ರಂದು ಬೆಳಗ್ಗೆ 10ಕ್ಕೆ ಆನೆಗುಡ್ಡೆ ಶ್ರೀ ವಿನಾಯಕ ಸಭಾಭವನ […]
ವಿದ್ಯಾರ್ಥಿ- ಶಿಕ್ಷಕರಿಗೆ ಸುಂದರ ಕೈಬರಹ ಎನ್ನುವ ವಿಷಯದ ಕುರಿತು ಕಾರ್ಯಾಗಾರ
ಕುಂದಾಪುರ : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಂ ಹಾಗೂ ವಿಕೆಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ 25.09.2024 ರಂದು ಪ್ರಿಸ್ಕೂಲ್ ವಿದ್ಯಾರ್ಥಿಗಳಿಗೆ ಸುಂದರ ಕೈಬರಹ ಎನ್ನುವ ವಿಷಯದ ಕುರಿತು ಕಾರ್ಯಾಗಾರ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕಿ ಹಾಗೂ ಕೈಬರಹ ಪರಿಣಿತರಾಗಿರುವ ಶ್ರೀಮತಿ ಕವಿತಾ ಪಿ ಅವರು ಶಾಲಾ ಪೂರ್ವ ಮಕ್ಕಳ ಭಾವನಾತ್ಮಕ ಕೈಬರಹದ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. […]