ಹೆಮ್ಮಾಡಿ(ಸೆ.21): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿಪೂರ್ವ ಶಿಕಯ ಉಲಾಖೆ ಉಡುಪಿ)ಹಾಗೂ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಸೂರಜ್ ಪೂಜಾರಿ,ಅಕ್ರಮ್ ,ಯತೀಶ್,ರೋನಿತ್ ಪೂಜಾರಿ ,ನವನೀತ್, ಆಕಾಶ್,ಸುಮೀತ್.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಬಿ.ಬಿ. ಹೆಗ್ಡೆ ಕಾಲೇಜು : ಯುವ ರೆಡ್ಕ್ರಾಸ್ ಘಟಕ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ.19): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ವಾರ್ಷಿಕ ಚಟುಟಿಕೆಗಳ ಉದ್ಘಾಟನ ಕಾರ್ಯಕ್ರಮ ಸೆಪ್ಟೆಂಬರ್ 19ರಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಷ್ಟಿçÃಯ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆಗಳ ಕಾರ್ಯವೈಖರಿ ಕುರಿತು ಸಂಕ್ಷೀಪ್ತವಾಗಿ ವಿವರಿಸಿ, ಕಾಲೇಜಿನ ರೆಡ್ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು […]
ಕರಾಟೆಯಲ್ಲಿ ಎಚ್ ಎಮ್ ಎಮ್ ಶಾಲೆಯ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಸೆ.20) : ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 15ನೇ ರಾಜ್ಯಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯನ್ ಶಿಪ್ 2024ರ ಕರಾಟೆ ಸ್ಪರ್ಧೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿರುತ್ತಾರೆ. ವಿದ್ಯಾರ್ಥಿಗಳಾದ ಅರ್ನೋನ್ ಡಿ ಅಲ್ಮೆಡಾ ಕಟಾ – ಕುಮಿಟೆ ಯಲ್ಲಿ ಬೆಳ್ಳಿಯ ಪದಕಗಳನ್ನು, ಅಥರ್ವ ಖಾರ್ವಿ ಕುಮಿಟೆಯಲ್ಲಿ ಬೆಳ್ಳಿ ಪದಕವನ್ನು […]
ಕಾರ್ಕಳ ಜ್ಞಾನಸುಧಾದದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ
ಕಾರ್ಕಳ(ಸೆ,20): ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ ಅದು ಕ್ರೀಡಾ ಕ್ಷೇತ್ರದಲ್ಲಿ ಮಾತ್ರ ಎಂದು ಕುಕ್ಕುಂದೂರಿನ ಕೆ.ಎಂ.ಇ.ಎಸ್. ಪ.ಪೂ.ಕಾಲೇಜಿನ ಪ್ರಾಂಶುಪಾಲ ಶ್ರೀ ರಾಮಚಂದ್ರ ನೆಲ್ಲಿಕಾರು ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.ಪಠ್ಯೇತರ ಚಟುವಟಿಕೆಯು ವಿದ್ಯಾರ್ಥಿಯ ಜೀವನಕ್ಕೆ ರಹದಾರಿ. ಶಿಕ್ಷಣವೆಂದರೆ ಬರಿಯ ಓದಲ್ಲ […]
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ
ಹೆಮ್ಮಾಡಿ(ಸೆ.20): ಇಲ್ಲಿನ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ರೇಬಿಸ್ ದಿನಾಚರಣೆಯ ಅಂಗವಾಗಿ ಪಶು ವೈದ್ಯಕೀಯ ಆಸ್ಪತ್ರೆ ಹೆಮ್ಮಾಡಿಯವರುರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅರುಣ್ ಪಶು ವೈದ್ಯಾಧಿಕಾರಿಗಳು ಹೆಮ್ಮಾಡಿ,ರೇಬಿಸ್ ರೋಗದ ಮನ್ನೆಚ್ಚೆರಿಕೆಯ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಇಲಾಖಾ ಸಿಬ್ಬಂದಿಗಳು,ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : “ಸ್ಕಿಲ್ ಡೆವಲಪ್ಮೆಂಟ್ ಟ್ರೈನಿಂಗ್” ಕಾರ್ಯಕ್ರಮ
ಕುಂದಾಪುರ (ಜೂನ್ 8) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕಾಲೇಜಿನ ಆಡಳಿತ ಸಿಬ್ಬಂದಿಗಳಿಗೆ “ಸ್ಕಿಲ್ ಡೆವಲಪ್ಮೆಂಟ್ ಟ್ರೈನಿಂಗ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿಯವರು ಮಾತನಾಡಿ,ಬದಲಾದ ಕಾಲಮಾನಕ್ಕೆ ನಮ್ಮ ವೃತ್ತಿ ಬದುಕಿನಲ್ಲಿಯೂ ಹೊಸ ಬದಲಾವಣೆಗಳನ್ನು ಮಾಡಿಕೊಂಡಾಗ ಮಾತ್ರ ನಾವು ಇನ್ನಷ್ಟುಬೆಳೆದು ಸುಲಭವಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದರು.ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ […]
ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಸಾಲಿಗ್ರಾಮ ( ಸೆ.19): ರಾ ಫಿಟ್ನೆಸ್ ಸಂಸ್ಥೆ ಸಾಲಿಗ್ರಾಮ ಇವರು ಸೆಪ್ಟೆಂಬರ್ 14 ರಂದು ನೆಡೆಸಿದ ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ( ಪವರ್ ಲಿಫ್ಟಿಂಗ್ )ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ದ್ವಿತೀಯ ವರ್ಷದ ಬಿಸಿಎ ವಿದ್ಯಾರ್ಥಿ ಶ್ರೀ ಹರ್ಷ ಹೆಗ್ಡೆ ಯವರು ಸಬ್ ಜೂನಿಯರ್ 74 ಕೆಜಿ ವಿಭಾಗದಲ್ಲಿ ಭಾಗವಹಿಸಿ ಬೆಳ್ಳಿ ಪದಕ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಯ್ಕೆ ಆಗಿದ್ದಾರೆ. ಇವರು ಅಕ್ಟೋಬರ್ […]
ಬಿ. ಬಿ. ಹೆಗ್ಡೆ ಕಾಲೇಜು : ಫ್ರೆಶರ್ಸ್ ಡೇ
ಕುಂದಾಪುರ (ಸೆ.18): ಪದವಿ ಶಿಕ್ಷಣವು ವಿದ್ಯಾರ್ಥಿಗಳ ಬದುಕಿನ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವನ್ನು ಸೃಷ್ಟಿಸಿಕೊಡಬೇಕು. ಆ ಮೂಲಕ ಪ್ರಜ್ಞಾವಂತ ನಾಗರಿಕರಾಗಿ ಸಮಾಜಮುಖಿಯಾಗಿ ಬದುಕು ರೂಪಿಸಿಕೊಳ್ಳಲು ಈ ಪದವಿಯೊಂದಿಗೆ ಪಡೆಯುವ ಇತರ ಚಟುವಟಿಕೆಗಳು ಪೂರಕ. ಹೀಗಾಗಿ ಪಠ್ಯಪೂರಕವಾದ ಅಂಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಿ ಎಂದು ಕುಂದಾಪುರದ ಎಲೆಕ್ಟ್ರಿಕಲ್ ಗುತ್ತಿಗೆದಾರರಾದ ಶ್ರೀ ಕೆ.ಆರ್. ನಾಯ್ಕ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೂತನ […]
ಪ್ರತಿಭಾ ಕಾರಂಜಿಯಲ್ಲಿ ಮಿಂಚಿದ ಎಚ್ ಎಮ್ ಎಮ್ ಶಾಲೆಯ ಪ್ರತಿಭೆಗಳು
ಕುಂದಾಪುರ ( ಸೆ 18) : ಶ್ರೀ ಬಿ.ಎಮ್ ಸುಕುಮಾರ ಶೆಟ್ಟಿಯವರ ನೇತೃತ್ವದ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ. ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಹಲ್ಸನಾಡು ಮಾದಪ್ಪಯ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಕುಂದಾಪುರ ಇದರ ವತಿಯಿಂದ ಆಯೋಜಿಸಲ್ಪಟ್ಟ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2024-25 ರಲ್ಲಿ ಭಾಗವಹಿಸಿ ಅನೇಕ […]
ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ವೈಷ್ಣವಿ ಖಾರ್ವಿಗೆ ಎರಡು ಬೆಳ್ಳಿ ಪದಕ
ಗಂಗೊಳ್ಳಿ (ಸೆ.19): ರಾ .ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ ಭವನದಲ್ಲಿ ನಡೆದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯ ಕ್ಲಾಸಿಕ್ ಮತ್ತು ಇಕ್ಯುಪ್ಡ್ 69 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಇವರು ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಗಳಿಸುವುದರ ಮೂಲಕ ಬೆಳ್ಳಿಯ ಪದಕಗಳನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ (ರಿ )ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್( ರಿ […]