ಗಂಗೊಳ್ಳಿ ( ಸೆ.19): ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಎಸ್.ಎನ್.ವಿ. ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಕಾರ್ಕಳದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದ 52 ಕೆಜಿ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಧುರ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.\ ಈಕೆ ಸುರೇಶ್ ಎಂ ತಾಂಡೇಲ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಹೆಮ್ಮಾಡಿಯ ಜನತಾ ಪಿ.ಯು ಕಾಲೇಜಿನ ಶ್ರುತಿಕಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ.19): ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿ. ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಭಾಗವಹಿಸಿ,ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ […]
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ 31 ಪ್ರಶಸ್ತಿಗಳನ್ನು ಪಡೆದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು
ಕಿರಿಮಂಜೇಶ್ವರ( ಸೆ,18): ಕರ್ನಾಟಕ ಸರ್ಕಾರ ,ಶಾಲಾ ಶಿಕ್ಷಣ ಇಲಾಖೆ ಕೇಂದ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ,ಇವರ ಸಹಭಾಗಿತ್ವದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ,ಕಿರಿಮoಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳಲ್ಲಿ ಒಟ್ಟು 31 ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಮ್ಮ ವಿದ್ಯಾರ್ಥಿಗಳು […]
ಕಾರ್ಕಳ ಜ್ಞಾನಸುಧಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಉಡುಪಿ( ಸೆ.18): ಶಾಲಾ ಶಿಕ್ಷಣ ಇಲಾಖೆ ಮತ್ತು ಉಡುಪಿಯ ಎಂ.ಜಿ.ಎಂ ಕಾಲೇಜಿನಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿಶ್ವ ವಿನಾಯಕ ಹಾಗೂ ಅನನ್ಯ ವಿ. ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು, ಸಿ.ಇ.ಒ ಮತ್ತು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರುರವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಹೆಮ್ಮಾಡಿಯ ಜನತಾ ಪಿ ಯು ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ.17): ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಸಂಜಿತ್ ಎಂ ದೇವಾಡಿಗ ಪ್ರಥಮ
ಬೈಂದೂರು(ಸೆ,17): ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಅಂಗವಾಗಿ ನಾಗೂರಿನಲ್ಲಿ ಏರ್ಪಡಿಸಿದ್ದ ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯ ಆರು ಮತ್ತು ಏಳನೇ ತರಗತಿಯ ವಿಭಾಗದಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಮ್ ದೇವಾಡಿಗ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸ್ಯಾಕ್ಸೋಫೋನ್ ಕಲಾವಿದ ಮಾದವ ದೇವಾಡಿಗ ಮತ್ತು ಉಪನ್ಯಾಸಕಿ […]
ಬಿ. ಬಿ. ಹೆಗ್ಡೆ ಕಾಲೇಜು : ಹಿಂದಿ ದಿವಸ್ ಆಚರಣೆ
ಕುಂದಾಪುರ, (ಸೆ. 14): ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ಪ್ರತೀಕ. ಹಿಂದಿ ಭಾಷೆ ಭಾರತೀಯ ಸಂಸ್ಕೃತಿಯ ಕೊಂಡಿಯಾಗಿದೆ. ಹೀಗಾಗಿ ಭಾಷೆ, ಸಂಸ್ಕೃತಿ- ಸಂಸ್ಕಾರವನ್ನು ಗೌರವಿಸಿ, ಅನುಸರಿಸಿ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಶ್ರೀ ಸಂತೋಷ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ ‘ಹಿಂದಿ ದಿವಸ್’ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಓಣಂ ಸಂಭ್ರಮ
ಕುಂದಾಪುರ (ಸೆ.17): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರೇವತಿ ಡಿ. ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.
ಎಚ್ ಎಮ್ ಎಮ್ & ವಿ ಕೆ ಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗ :ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ (ಸೆ.17): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಹಾಗೂ ವಿ ಕೆ ಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ 14.09.2024 ರಂದು ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ. ಚಿಂತನಾ ರಾಜೇಶ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮಾತಾ ಹಾಸ್ಪಿಟಲ್ ನ ಸೈಕಲಾಜಿಸ್ಟ್ ಆಗಿರುವ ಶ್ರೀಮತಿ ಜಾಹ್ನವಿ ಪ್ರಕಾಶ್ ರವರು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಅವರ ವರ್ತನೆ, ಸಮಸ್ಯೆಗಳು ಹಾಗೂ ಪರಿಹಾರ […]
ತ್ರೋ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ್ರಥಮ
ಗಂಗೊಳ್ಳಿ(ಸೆ,15):ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಕೆಪಿಎಸ್ ಬಿದ್ಕಲ್ ಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಬಿದ್ಕಲ್ ಕಟ್ಟೆಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವೀರೇಶ್ ಖಾರ್ವಿ ಶಮಿತ್ ಖಾರ್ವಿ, ಶರಣ್ ಎಸ್ ಪೂಜಾರಿ, ಯುವರಾಜ್ ಖಾರ್ವಿ, ಪ್ರೀತೇಶ್ ಖಾರ್ವಿ, ಕಾರ್ತಿಕ್ […]