ಗಂಗೊಳ್ಳಿ(ಜು,23): ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ರೋಟರಿ ಜಿಲ್ಲೆ 31 82ರ ಜಿಲ್ಲಾ ಗವರ್ನರ್ ರೊಟೇರಿಯನ್ ಡಾ. ಜಯಗೌರಿ ಹಾದಿಗಲ್ ರವರ ಮಹತ್ವಕಾಂಕ್ಷೆಯ ಜಿಲ್ಲಾ ಕಾರ್ಯಕ್ರಮ ಮಹಿಳಾ ಸಬಲೀಕರಣದ ಭಾಗವಾಗಿ ಸಮಾಜದ ಆರ್ಥಿಕವಾಗಿ ಹಿಂದುಳಿದ ಆಯ್ದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡುವಲ್ಲಿ ತರಬೇತುಗೊಳಿಸಲು ಆಯೋಜಿತವಾದ ಮೂರು ತಿಂಗಳ ಕಾಲಾವಧಿಯ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಥಬೀದಿ ಗಂಗೊಳ್ಳಿಯಲ್ಲಿ ನೆರವೇರಿತು. ವಲಯ ಒಂದರ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಶಿಕ್ಷಪ್ರಭ ಅಕಾಡೆಮಿ ಕುಂದಾಪುರ:ಸಿಎ ಇಂಟರ್ಮಿಡಿಯೇಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ
ಕುಂದಾಪುರ(ಜು,23): ಸಿಎ ,ಸಿಎಸ್ ಪ್ರೊಫೆಷನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಶಿಕ್ಷಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಂಸ್ಥೆಯ ವಿದ್ಯಾರ್ಥಿಗಳು ಮೇ 2022 ರಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಇಂಟರ್ಮೀಡಿಯಟ್ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕಿರಣ್ ಕಾಮತ್ (273), ಸುಪ್ರೀತಾ (246), ಜಸ್ವಿಟಾ ಡಿಸೋಜಾ (235), ಅಭಿಷೇಕ್ ಶೆಟ್ಟಿ (219), ಮನೋಜ್ […]
ಶಿಕ್ಷಪ್ರಭ ಅಕಾಡೆಮಿ ಕುಂದಾಪುರ:ಸಿ.ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ
ಕುಂದಾಪುರ(ಜು,22): ಸಿಎ ,ಸಿಎಸ್ ಪ್ರೊಫೆಷನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಶಿಕ್ಷಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಂಸ್ಥೆಯ ವಿದ್ಯಾರ್ಥಿಗಳು ಮೇ ಮತ್ತು ಜುಲೈ 2022ರಲ್ಲಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸಿದ ಸಿ ಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕೃತಿಕ್ ಶೆಟ್ಟಿ (163), ಶ್ರವಣ್ ಕಾಮತ್ (161), ಅಜಯ್ (147), ಮಹೇಶ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು :ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ
ಕುoದಾಪುರ 🙁 ಜು,21) : ಕಾಲೇಜಿಗೆ ಸ್ಥಳದಾನ ಮಾಡಿದ ಸಂಸ್ಥೆಯ ಮಹಾಪೋಷಕರಾದ ಡಾ| ಬಿ. ಬಿ. ಹೆಗ್ಡೆಯವರ ಧರ್ಮಪತ್ನಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ-ಪುಷ್ಪಾರ್ಚನೆ ಗೈದು, ಸಂಸ್ಮರಣಾ ನುಡಿಗಳನ್ನಾಡಿದರು. ವಿಭಾಗದ ಮುಖ್ಯಸ್ಥರು ಹಾಗೂ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಪ್ರವೀಣಾ […]
ಎಕ್ಸ್ಲೆಂಟ್ ಪಿಯು ಕಾಲೇಜು, ಕುಂದಾಪುರ ಸಿಎ,ಸಿಎಸ್ ಫೌಂಡೇಶನ್ ತರಗತಿಗಳ ಉದ್ಘಾಟನೆ:
ಕುಂದಾಪುರ (ಜು,21): ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿಯೊಂದಿಗೆ ಅಭ್ಯಸಿಸುವ ಯಾವುದೇ ವಿದ್ಯಾರ್ಥಿಯು ಕೂಡ ಸಿಎ/ಸಿಎಸ್ ಪರೀಕ್ಷೆಯನ್ನು ನಿರಾಂತಕವಾಗಿ ಪೂರ್ಣಗೊಳಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಅಧ್ಯಕ್ಷ, ಚಾರ್ಟೆರೆಡ್ ಅಕೌಟೆಂಟ್ ಶಾಂತರಾಮ್ ಶೆಟ್ಟಿ ಹೇಳಿದರು . ಅವರು ಕುಂದಾಪುರದ ಎಕ್ಸ್ಲೆಂಟ್ ಪಿಯು ಕಾಲೇಜಿನಲ್ಲಿ ಜು16ರಂದು ನಡೆದ ಸಿಎ/ಸಿಎಸ್ ಫೌಂಡೇಶನ್ ತರಗತಿಯನ್ನು ಉದ್ಘಾಟನೆಗೊಳಿಸಿ ಮಾತನಾಡಿದರು.ಪಿಯುಸಿಯಲ್ಲಿ ಒಬ್ಬ ಸಾಮಾನ್ಯ ವಿದ್ಯಾರ್ಥಿಯಾದ ನಾನು ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಪೂರೈಸಿ ಈ ಹಂತಕ್ಕೆ […]
ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಕ್ಸಲೆಂಟ್ ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಜು,21): ಉಡುಪಿ ಜಿಲ್ಲಾ ಪಂಚಾಯತ್ ಆಯೋಜಿಸಿದ ತಾಲ್ಲೂಕು ಮಟ್ಟದ ಚೆಸ್ ಪಂದ್ಯಾಟವು ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ತಾಲ್ಲೂಕು ಮತ್ತು ಕುಂದಾಪುರ ಎಜುಕೇಶನ್ ಸೊಸೈಟಿ ಪವರ್ತಿತ ಹೆಚ್ ಎಂ ಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಚೆಸ್ ಪಂದ್ಯಾಟ ಇತ್ತೀಚಿಗೆ ನಡೆಯಿತು. ಎಕ್ಸಲೆಂಟ್ ಪಿಯು […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕ ಸುರೇಶ್ ಮರಕಾಲರಿಂದ ವಿಶೇಷ ಉಪನ್ಯಾಸ
ಕುಂದಾಪುರ( ಜು,21 ): ಎರಡೂ ಕೈಗಳಿಲ್ಲದ ಜೆಸಿಕಾ ಕಾಕ್ ತನ್ನ ಪದವಿ ಮುಗಿಸಿ, ಕಾಲಿನಿಂದ ಕಂಪ್ಯೂಟರ್ ಆಪರೇಟ್ ಮಾಡ್ತಾಳೆ, ಕರಾಟೆ ಬ್ಲ್ಯಾಕ್ ಬೆಲ್ಟ್, ಸ್ಕೇಟಿಂಗ್, ಕಾರ್ ಡ್ರೈವಿಂಗ್ ಮಾಡ್ತಾಳೆ, ಪೈಲೆಟ್ ಆಗ್ತಾಳೆ ಅಂದಮೇಲೆ ಸಾಧಿಸುವ ಕಿಚ್ಚೊಂದಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಾಲ ಹೇಳಿದರು. ಕುಂದಾಪುರ ಎಜುಕೇಶನ್ ಸೊಸೈಟಿ (ರಿ),ಪ್ರವರ್ತಿತ , ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ […]
ರೋಟರಿ ಕ್ಲಬ್ ಗಂಗೊಳ್ಳಿ : ಪದಪ್ರದಾನ ಸಮಾರಂಭ
ಗಂಗೊಳ್ಳಿ(ಜು,21): ನಾವು ಮಾಡುವ ಸೇವೆ ಅರ್ಹ ವ್ಯಕ್ತಿಗಳಿಗೆ ತಲುಪಬೇಕು. ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡಿದ ಸೇವೆಯಿಂದ ಜೀವನ ಸಾರ್ಥಕ ಗೊಳ್ಳುತ್ತದೆ ಎಂದು ರೋಟರಿ ಕ್ಲಬ್ ನ ವಲಯ ಒಂದರ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಉಮೇಶ್ ಪುತ್ರನ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಗಂಗೊಳ್ಳಿಯ ನೂತನ ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದಲ್ಲಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾಜ ಸೇವಾ […]
ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ
ಕುಂದಾಪುರ(ಜು,19): ನೂತನವಾಗಿ ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೈಂದೂರು ಶಾಸಕರಾದ ಶ್ರೀ ಬಿ.ಎಂ .ಸುಕುಮಾರ ಶೆಟ್ಟಿಯವರು ಧರ್ಮಸ್ಥಳದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ ದೇಶವ್ಯಾಪಿ ಹಲವು ಜನಪರ ಯೋಜನೆಗಳನ್ನು ವಿಸ್ತರಿಸಲು ಇದೀಗ ಅನುವು ಮಾಡಿಕೊಟ್ಟ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಸಿ.ಎ ಪರೀಕ್ಷೆಯಲ್ಲಿ ತನುಷಾ ಡಿ.ರಾವ್ ಉತ್ತೀರ್ಣ
ಕುಂದಾಪುರ (ಜು,15); ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಮೇ 2022ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕೋಟೇಶ್ವರದ ತನುಷಾ ಡಿ.ರಾವ್ ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರದ ಸಿ. ಎ ಎನ್. ಶಾಂತರಾಮ್ & ಕೋ ಇಲ್ಲಿ ತರಬೇತಿ ಪಡೆದಿರುತ್ತಾರೆ. ಇವರು ಕೋಟೇಶ್ವರದ ಕುಂಬ್ರಿ ಯ ದಿನೇಶ್ ಚಂದ್ರ ರಾವ್ ಹಾಗೂ ಮಮತಾ ಎಸ್ ರಾವ್ ದಂಪತಿಯ ಪುತ್ರಿ ಮತ್ತು ಕುಂದಾಪುರದ ಪ್ರತಿಷ್ಠಿತ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಹಳೆವಿದ್ಯಾರ್ಥಿ.










