ಬೈಂದೂರು (ಡಿ,17): ಯುವಜನತೆಯಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರೀಯತೆ ಹಾಗೂ ರಾಷ್ಟ್ರ ಸೇವಾ ಮನೋಭಾವ ಹೆಚ್ಚಿಸಲು ಹಾಗೂ ಉಡುಪಿ- ಕುಂದಾಪುರ ,ಬೈಂದೂರು ಭಾಗದ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುವಂತಾಗಬೇಕು ಎನ್ನುವ ಆಶಯದೊಂದಿಗೆ ಹುಟ್ಟಿಕೊಂಡ ನೇಶನ್ ಲವರ್ಸ್ ಬೈಂದೂರು ಇವರ ವತಿಯಿಂದ ಬೈಂದೂರು ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಭಾರತೀಯ ಸೇನಾ ಪಡೆಗಳಲ್ಲಿ ಉದ್ಯೋಗವಕಾಶದ ಕುರಿತು ಮಾಹಿತಿ ಕಾರ್ಯಾಗಾರವನ್ನು ಡಿಸೆಂಬರ್ 24 ರ ಶುಕ್ರವಾರ ಬೆಳಿಗ್ಗೆ ಗಂಟೆ 9-15ಕ್ಕೆ ಬೈಂದೂರಿನ ರೋಟರಿ ಭವನದಲ್ಲಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಸರ್ಕಾರಿ ಪದವಿಪೂರ್ವ ಕಾಲೇಜು ಬಿದ್ಕಲ್ ಕಟ್ಟೆ: ಎನ್.ಎಸ್.ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಬಿದ್ಕಲ್ಕಟ್ಟೆ:ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ 2021-22ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಇತ್ತೀಚಿಗೆ ಜರುಗಿತು.ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಶ್ರೀಕಾಂತ್ ರವರು ಉದ್ಘಾಟಕರಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಎಸ್ ಎಸ್ ಎಸ್ ಪೂರಕವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಶುಪಾಲರಾದ ಶ್ರೀ ವಿಘ್ನೇಶ್ವರ ಭಟ್ ವಹಿಸಿದ್ದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ,ರಾಜ್ಯಶಾಸ್ತ್ರ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು: ಎನ್.ಸಿ .ಸಿ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ(ಡಿಸೆಂಬರ್ 15) : ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಸಿ .ಸಿ ಘಟಕದ 2021-22 ನೇ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ಭಾರತೀಯ ಸೇನಾಪಡೆಯ ಯೋಧ ಪ್ರಶಾಂತ್ ದೇವಾಡಿಗ ಡಿ.15 ರಂದು ಉದ್ಘಾಟಿಸಿ ಶುಭಹಾರೈಸಿದರು .ಹಾಗೆಯೇ ಯುವ ಸಮುದಾಯಕ್ಕೆ ದೇಶ ಸೇವೆಗೈಯಲು ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಸೈನ್ಯ ಸೇರಲು ಯುವಕರು ಮಂದಾಗಬೇಕು. ನಮ್ಮ ಉಡುಪಿ- ಕುಂದಾಪುರ ಭಾಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುವಂತಾಗಬೇಕು ಎಂದು ಅವರು ಹೇಳಿದರು. ತನ್ನ […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಯೋಧರಿಗೆ ನಮನ
ಕುಂದಾಪುರ ( ಡಿಸೆಂಬರ್ 15): ತಮಿಳುನಾಡಿನ ಕೂನ್ನೂರು ಬಳಿ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಪಡೆ ಮುಖ್ಯಸ್ಥ(CDS) ಜ.ಬಿಪಿನ್ ರಾವತ್ ದಂಪತಿ ಸೇರಿದಂತೆ, ಹುತಾತ್ಮರಾದ ಎಲ್ಲಾ ವೀರ ಯೋಧರಿಗೆ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಡಿಸೆಂಬರ್ 15ರಂದು ದೀಪ ನಮನ ಸಲ್ಲಿಸಲಾಯಿತು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಬೋಧಕೇತರರು ಕೈಯಲ್ಲಿ ಮೇಣದ ದೀಪ ಬೆಳಗಿಸಿ, ದೇಶಭಕ್ತಿ ಗೀತೆ ಹಾಡುವುದರ ಮೂಲಕ ಹುತಾತ್ಮರ ಆತ್ಮಕ್ಕೆ ದೀಪ ಪ್ರಜ್ವಲನದ ಶ್ರದ್ಧಾಂಜಲಿ ಸಲ್ಲಿಸಿದ್ದರು. ಈ […]
ಗಂಗೊಳ್ಳಿ: ಡಾ. ಬಿ.ಆರ್ ಅಂಬೇಡ್ಕರ್ ರ ವರ ಪರಿನಿರ್ವಾಣ ದಿನಾಚರಣೆ
ಗಂಗೊಳ್ಳಿ(ಡಿ.13) : ಡಾ. ಅಂಬೇಡ್ಕರ್ ಯುವಕ ಮಂಡಲ (ರಿ) ಅಮೃತ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಳಿ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ಬಿ.ಆರ್ ಅಂಬೇಡ್ಕರ್ ರ ವರ 65ನೇ ವರುಷದ ಪರಿನಿರ್ವಾಣ ದಿನಾಚರಣೆ ನಡೆಯಿತು. ಯುವಕ ಮಂಡಲದ ಉಪಾಧ್ಯಕ್ಷ ಕಿರಣ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಸಂಸ್ಥೆಯ ಗೌರವ ಅಧ್ಯಕ್ಷರಾದ ಭಾಸ್ಕರ್ ಹೆಚ್. ಜಿ ಮಾತನಾಡಿ ಅಂಬೇಡ್ಕರ್ ಅವರ ಜೀವನ ಶೈಲಿ […]
ಮೂಡ್ಲಕಟ್ಟೆ ಎಂ ಐ ಟಿ: ಅಪರಾಧ ತಡೆ ಮಾಸಾಚರಣೆ -2021 ಕಾರ್ಯಕ್ರಮ
ಕುಂದಾಪುರ(ಡಿ.13): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮದ ಪ್ರಯುಕ್ತ ಕುಂದಾಪುರ ಗ್ರಾಮಾಂತರ ಪೋಲಿಸ್ ಠಾಣೆ ಕಂಡ್ಲೂರು ಇದರ ಸಹಯೋಗದೊಂದಿಗೆ ಅಪರಾಧ ತಡೆ ಮಾಸಾಚರಣೆ 2021 ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕಂಡ್ಲೂರು ಪೋಲಿಸ್ ಸಬ್ ಇನ್ಸ್ಪೆಕ್ಟರ್ ಶ್ರೀ ನಿರಂಜನ್ ಗೌಡ ಬಿ ಎಸ್ ಆಗಮಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. “ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾದದ್ದು, ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು […]
ವಕ್ವಾಡಿ: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮ ಫಲಕ ಅಳವಡಿಕೆ
ಕುಂದಾಪುರ(ಡಿ, 12): ಕುಂಭಾಶಿ ಸಮೀಪದ ವಕ್ವಾಡಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೃಷ್ಣ ಐತಾಳ್ ರವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎಂಬ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಸ್ವರಾಜ್ಯ 75 ತಂಡ ಹಾಗೂ ವಿವಿಧ ಸಂಸ್ಥೆಗಳ ವತಿಯಿಂದ ಹಮ್ಮಿಕೊಳ್ಳಲಾಯಿತು. ಶ್ರೀ ಪ್ರೇಮಾನಂದ ಶೆಟ್ಟಿ ಕಟ್ಕೇರಿ ಯವರು ನಾಮಫಲಕ ಅನಾವರಣಗೊಳಿಸಿ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ದೇಶಪ್ರೇಮ ನಾವು ಪ್ರತಿದಿನ ಸ್ಮರಿಸಬೇಕು ಹಾಗೂ ಸರಕಾರ ಸ್ವಾತಂತ್ರ್ಯ ಹೋರಾಟಗಾರರ ಮನೆಯ ಬಗ್ಗೆ ಕಳಕಳಿಯನ್ನು […]
ಸಮುದಾಯ ಆರೋಗ್ಯ ಕೇಂದ್ರ ಬೈಂದೂರು:ಅಂಬ್ಯುಲೆನ್ಸ್ ಸೇವೆಗೆ ಸಹಾಯ ಹಸ್ತ ಚಾಚಿದ ಡಾ. ಗೋವಿಂದ ಬಾಬು ಪೂಜಾರಿ
ಬೈಂದೂರು(ಡಿ.11); ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಗೋವಿಂದ ಬಾಬು ಪೂಜಾರಿ ಯವರು ಬಹುಬಗೆಯ ಸಮಾಜಸೇವೆ ಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು , ಅದಕ್ಕೆ ಪೂರಕವಾಗಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ವಾಹನ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸರಕಾರದಿಂದ ಸಿಬ್ಬಂದಿ ನೇಮಕವಾಗುವ ತನಕ ತಾತ್ಕಾಲಿಕವಾಗಿ ಅಂಬ್ಯುಲೆನ್ಸ್ ನ ಓರ್ವ ಚಾಲಕನಿಗೆ ಮಾಸಿಕ ಸಂಬಳ ಹಾಗೂ ಅಂಬ್ಯುಲೆನ್ಸ್ ಸಂಚಾರಕ್ಕೆ ಅಗತ್ಯವಿರುವ ಡೀಸೆಲ್ ವೆಚ್ಚವನ್ನು ಭರಿಸಿಕೊಡುವುದರ ಮೂಲಕ ಮಾನವೀಯ ನೆಲೆಯ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು: ಯೂತ್ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ ( ಡಿ,10):ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕದ 2021-22 ನೇ ಸಾಲಿನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಕಾರ್ಯದರ್ಶಿ ವೈ. ಸೀತರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯ ಕಾರ್ಯವೈಖರಿಯನ್ನು , ಅದರ ಮಹತ್ವವನ್ನು ವಿವರಿಸುತ್ತ ಇಂದಿನ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ :ಬ್ಯಾಂಕಿಂಗ್ ಹಾಗೂ ಎಂ.ಬಿ.ಎ ಪರೀಕ್ಷೆಗೆ ನೂತನ ಬ್ಯಾಚ್ ಉದ್ಘಾಟನೆ
ಕುಂದಾಪುರ (ಡಿ,9): ದೇಶಕ್ಕೆ ಅತಿ ಹೆಚ್ಚು ಬ್ಯಾಂಕುಗಳನ್ನು ಕೊಡುಗೆಯಾಗಿ ನೀಡಿದ ಅವಳಿ ಜಿಲ್ಲೆ ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ ಬ್ಯಾಂಕಿಂಗ್ ಉದ್ಯೋಗಕ್ಕೆ ಮತ್ತು ಬ್ಯಾಂಕ್ ಪರೀಕ್ಷೆ ಎದುರಿಸಲು ಅತಿ ಹೆಚ್ಚು ವಿದ್ಯಾರ್ಥಿಗಳು ಪ್ರಯತ್ನ ಪಡಬೇಕು ಮತ್ತು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಜಾಗೃತಿಗೊಳಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ ಇದರ ಕಾರ್ಯ ಮೆಚ್ಚುವಂತದ್ದು ಎಂದು ಕೆನರಾ ಬ್ಯಾಂಕಿನ ರಿಕವರಿ ಮ್ಯಾನೇಜರ್ ಪ್ರಭಾಕರ ಶೆಟ್ಟಿಯವರು ನೂತನ ಬ್ಯಾಚ್ನ್ನು […]










