ಕುಂದಾಪುರ(ಡಿ .02): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕ್ ಘಟಕ ಸಭಾಪತಿ ಜಯಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯ ಕಾರ್ಯವೈಖರಿಯನ್ನು , ಅದರ ಮಹತ್ವವನ್ನು ವಿವರಿಸುತ್ತ ಇಂದಿನ ಯುವ ಪೀಳಿಗೆ ಸಮಾಜಮುಖಿ ಕೆಲಸಗಳಲ್ಲಿ ಸಾದ್ಯವಾದಷ್ಟು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಭಾವಗೀತೆ ಸ್ಪರ್ಧೆ:ಅಕ್ಷತಾ ವಿನಯ್ ಪ್ರಥಮ ಸ್ಥಾನ
ಗಂಗೊಳ್ಳಿ (ಡಿ,2): ಇತ್ತೀಚೆಗೆ ಬಾಳೆಹೊನ್ನೂರಿನಲ್ಲಿ ನಡೆದ ರೋಟರಿ 3182ನ ಜಿಲ್ಲಾ ರೋಟರಿ ಸಾಂಸ್ಕೃತಿಕ ಸ್ಪರ್ಧೆ 2021-22ರ ಏಕವ್ಯಕ್ತಿ ಭಾವಗೀತೆ ಸ್ಪರ್ಧೆಯಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ನ ಸದಸ್ಯೆ ಅಕ್ಷತಾ ವಿನಯ್ ಪ್ರಥಮ ಸ್ಥಾನ ಗಳಿಸಿದ್ದಾರೆ.
ಡಿ.10 ರಂದು ಉತ್ತಮದಿಂದ ಅತ್ಯುತ್ತಮ ಶಿಕ್ಷಕರಾಗುವತ್ತ ವಿಶೇಷ ಶೈಕ್ಷಣಿಕ ಉಪನ್ಯಾಸ ಕಾರ್ಯಕ್ರಮ
ಉಡುಪಿ (ಡಿ,2): ಶಿಕ್ಷಕ ವೃತ್ತಿಯನ್ನು ಸಮಾಜದ ಶ್ರೇಷ್ಠ ವೃತ್ತಿಗಳಲ್ಲೊಂದು ಎಂದು ಪರಿಗಣಿಸಲಾಗಿದೆ. ದೇಶದ ಭವಿಷ್ಯದ ಪ್ರಜೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಅವರ ತಪ್ಪುಗಳನ್ನು ತಿದ್ದಿ ಸರಿದಾರಿಯಲ್ಲಿ ಕೊಂಡೊಯ್ಯುವುದು ಶಿಕ್ಷಕರ ಮಹತ್ತರ ಜವಾಬ್ದಾರಿಯಾಗಿದೆ. ಪರಿಣಾಮಕಾರಿ ಬೋಧನಾಕಲೆಯೂ ಶಿಕ್ಷಕ ವೃತ್ತಿಯ ಅಗತ್ಯತೆಗಳಲ್ಲೊಂದು. ಶಿಕ್ಷಕರು ಇನ್ನೂ ಒಳ್ಳೆಯ ರೀತಿಯಲ್ಲಿ ವಿದ್ಯಾರ್ಥಿಗಳ ಮನಮುಟ್ಟುವಂತೆ ಬೋಧನೆ ಮಾಡುವುದರ ಕುರಿತು ಒಂದು ವಿಶೇಷ ಶೈಕ್ಷಣಿಕ ಉಪನ್ಯಾಸ ಕಾರ್ಯಕ್ರಮವನ್ನು ಕುತ್ಯಾರಿನ ಸೂರ್ಯ ಚೈತನ್ಯ ವಿದ್ಯಾಸಂಸ್ಥೆ ಡಿ,10 ರ ಶುಕ್ರವಾರದಂದು ಹಮ್ಮಿಕೊಂಡಿದ್ದು […]
ಯುವ ಜನಾಂಗ ದಾರಿ ತಪ್ಪಬಾರದು : ಶ್ರೀಮತಿ ನಳಿನಾಕ್ಷಿ
ಕುಂದಾಪುರ (ಡಿ ,2): ಇಂದಿನ ಯುವ ಜನಾಂಗ ಮೊಬೈಲ್ ಅವಲಂಬಿತ ಜಗತ್ತಿನಲ್ಲಿದೆ. ಎಲ್ಲವೂ ಅಂಗೈನಲ್ಲಿಯೇ ಹಿಡಿದಿಟ್ಟುಕೊಳ್ಳುವ ಮನೋಭಾವದ ವಯಸ್ಸಿನ ಹದಿ ಹರೆಯದವರು ತಂತ್ರಜ್ಞಾನಗಳ ಪ್ರಭಾವಕ್ಕೆ ಒಳಗಾಗಿ ಹಾದಿ ತಪ್ಪಬಾರದು. ಜೀವನದ ನಿರ್ಣಾಯಕ ಘಟ್ಟದಲ್ಲಿ ಲೈಂಗಿಕ ಆಸಕ್ತಿಗಳು ಬದುಕನ್ನು ಪ್ರಪಾತಕ್ಕೆ ತಳ್ಳುವಂತಾಬಾರದು ಎಂದು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ಕೌನ್ಸಿಲರ್ ಶ್ರೀಮತಿ ನಳಿನಾಕ್ಷಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನಾಚರಣೆಯಂದು ಆಯೋಜಿಸಿದ ಏಡ್ಸ್ ಜಾಗೃತಿ […]
ಶ್ರೀ ಶೇಜೇಶ್ವರವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಡಿ,1): ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ,ಶಿವಪ್ಪನಾಯಕ ಅರಮನೆ ಶಿವಮೊಗ್ಗ ಇದರ ಸಹಾಯಕ ನಿರ್ದೇಶಕರು ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಧಾರವಾಡ ಇದರ ಉಪನಿರ್ದೇಶಕ(ಪ್ರಭಾರ)ರಾಗಿರುವ ಶ್ರೀ ಶೇಜೇಶ್ವರವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಡಾ.ಹನುಮನಾಯಕ ಇವರ ಮಾರ್ಗದರ್ಶನದಲ್ಲಿ “ಚಿತ್ರದುರ್ಗ ಜಿಲ್ಲೆಯ ಚಾರಿತ್ರಿಕ ಮತ್ತು ಸಾಂಸ್ಕೃತಿಕ ಭೂಗೋಳ ; ಒಂದು ಅಧ್ಯಯನ(ಪೂರ್ವ ಇತಿಹಾಸದ ಕಾಲದಿಂದ ಕ್ರಿ.ಶ 18ನೇ ಶತಮಾನದವರೆಗೆ)” ಎಂಬ ವಿಷಯದ ಕುರಿತು ಸಾದರಪಡಿಸಿದ […]
ಶ್ರೇಷ್ಠ ಆರ್ ಶೇಟ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ(ನ ,30) : ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ನಡೆಸಲ್ಪಡುವ ಶ್ರೀ ಭಗವದ್ಗೀತಾ ಅಭಿಯಾನದ ಅಂಗವಾಗಿ ಇತ್ತೀಚೆಗೆ ಬೈಂದೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿನ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಷ್ಠ ಆರ್ ಶೇಟ್ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಚೆಫ್ ಟಾಕ್ ಪ್ರೈವೇಟ್ ಲಿಮಿಟೆಡ್ : ಕೋಲಾರದ ಶಾಖೆ ಉದ್ಘಾಟನೆ
ಕುಂದಾಪುರ (ನ,30): ಗುಣಮಟ್ಟದ ಆಹಾರ ಮತ್ತು ಆತಿಥ್ಯದಲ್ಲಿ ದೇಶದಾದ್ಯಂತ ಹೆಸರುವಾಸಿಯಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿಯವರ ಸಾರಥ್ಯದ ಚೆಫ್ ಟಾಕ್ ಪ್ರೈವೇಟ್ ಲಿಮಿಟೆಡ್ ನ ಕೋಲಾರ ಶಾಖೆ ಇತ್ತೀಚೆಗೆ ಉದ್ಘಾಟನೆಗೊಂಡಿತು. ಕೋಲಾರದ ನರಸಾಪುರದಲ್ಲಿನ ಶಾಖೆಯ ಉದ್ಘಾಟನೆಯಲ್ಲಿ ಮಾಜಿ ಶಾಸಕರಾದ ಶ್ರೀ ವರ್ತೂರ್ ಪ್ರಕಾಶ್ ,ಹಾಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಗೋವಿಂದರಾಜು ಹಾಗೂ ಶ್ರೀ ಜೈನ ಯಕ್ಷೇಶ್ವರಿ ಮತ್ತು ಶ್ರೀ ಶನೇಶ್ವರ ಪಾತ್ರಿಗಳಾದ ವಿಜಯ್ ಪೂಜಾರಿ ಉಪ್ಪುಂದ ರವರು ಉಪಸ್ಥಿತರಿದ್ದು […]
ನೈಕಂಬ್ಳಿ: ಸಂಭ್ರಮದ ಕಾರ್ತಿಕ ದೀಪೋತ್ಸವ
ಮಾರಣಕಟ್ಟೆ (ನ,30): ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿಯಲ್ಲಿ ಸಂಭ್ರಮದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನ,29ರಂದು ಜರುಗಿತು. ದೀಪೋತ್ಸವ ಪ್ರಯುಕ್ತ ರಾಘವೇಂದ್ರ ಭಜನಾ ಮಂಡಳಿಯವರಿಂದ ಭಜನೆ , ಮಹಾ ಮಂಗಳಾರತಿ ಹಾಗೂ ಅನ್ನಪ್ರಸಾದ ಸೇವೆ ನೆರವೇರಿತು. ಜೀರ್ಣೋದ್ಧಾರ ಸಮಿತಿ ಪ್ರಮುಖರು, ಪ್ರೇರಣಾ ಯುವ ವೇದಿಕೆ ಸದಸ್ಯರು, ಊರ ಗಣ್ಯರು ಉಪಸ್ಥಿತರಿದ್ದರು.
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ತರಬೇತಿ ಶಿಬಿರ
ಶಿರ್ವ(ನ,30):ಯೋಗದಿಂದ ದೇಹ ಮತ್ತು ಮನಸ್ಸನ್ನು ನಿಯಂತ್ರಿಸಲು ಸಾಧ್ಯ, ಜೊತೆಗೆ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದೆಂದು ಶಿರ್ವ ವಲಯ ಪತಂಜಲಿ ಯೋಗ ಸಮಿತಿಯ ಯೋಗ ಗುರುಗಳಾದ ಶ್ರೀ ರಂಜಿತ್ ಪುನರ್ ರವರು ಹೇಳಿದರು. ಅವರು ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ಮತ್ತು ಫಿಟ್ನೆಸ್ ಸೆಲ್ ಹಾಗೂ ಎನ್.ಸಿ.ಸಿ ಸಂಯುಕ್ತವಾಗಿ ಏರ್ಪಡಿಸಿದ ಯೋಗ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಘಾಟಿಸಿ ಮಾತನಾಡಿದರು. ಇಂದು ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು ತಮ್ಮ ದೈನಂದಿನ ಜೀವನದಲ್ಲಿ ದೈಹಿಕ […]
ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಢತೆ ಅಗತ್ಯ : ಸುಬ್ರಮಣ್ಯ ಭಟ್ ಟಿ. ಎಸ್.
ಪುತ್ತೂರು (ನ, 30) : ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಡತೆ ಅಗತ್ಯವಾಗಿದ್ದು, ವಾಲಿಬಾಲ್ನಂತಹ ದೈಹಿಕ ಪರಿಶ್ರಮವನ್ನು ಬಯಸುವ ಆಟಗಳಿಂದ ನಾವಿದನ್ನು ಪಡೆಯಲು ಸಾಧ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಸಂಚಾಲಕ ಸುಬ್ರಮಣ್ಯ ಭಟ್ ಟಿ. ಎಸ್. ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವನ್ನು […]










