ಕುಂದಾಪುರ (ಅ,30): ಪ್ರತಿಯೊಂದು ಭಾಷೆಗೆ ಅದರದ್ದೆ ಆದ ಅಸ್ತಿತ್ವ ಹಾಗೂ ಐತಿಹಾಸಿಕ ಹಿನ್ನೆಲೆ ಇರುತ್ತದೆ. ಆ ನೆಲೆಯಲ್ಲಿ ಕನ್ನಡ ಭಾಷಿಕರಾದ ನಾವು ಪುಣ್ಯವಂತರು. ಶ್ರೀಮಂತ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿರುವ ಕನ್ನಡ ಭಾಷೆಯನ್ನು ನಾವು ಉಳಿಸಿ ಬೆಳೆಸಬೇಕು.ಜೊತೆಗೆ ದೇಶಾಭಿಮಾನ, ದೇಶ ಭಕ್ತಿ ,ಸೈನ್ಯದ ಕುರಿತಾದ ಅಭಿಮಾನವನ್ನು ನಾವು ಬೆಳೆಸಿಕೊಳ್ಳಬೇಕು ಎಂದು ನಿವ್ರತ್ತ ಯೋಧ ಹಾಗೂ ಸಾಹಿತಿಗಳಾದ ಶ್ರೀ ಚಂದ್ರಶೇಖರ ನಾವಡ ಹೇಳಿದರು. ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಕುಂದಾಪುರ ತಾಲೂಕು ಕಚೇರಿಯಲ್ಲಿ ಕನ್ನಡ ಗೀತೆ ಗಾಯನ : ಗಾಯಕ ಡಾ. ಗಣೇಶ್ ಗಂಗೊಳ್ಳಿಯವರ ನೇತ್ರತ್ವದಲ್ಲಿ ಕನ್ನಡ ಗೀತೆ ಪ್ರಸ್ತುತಿ
ಕುಂದಾಪುರ (ಅ. 29) : ಇಲ್ಲಿನ ತಾಲೂಕು ಕಚೇರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶದಂತೆ ಅ,28 ರಂದು ಕನ್ನಡ ಗೀತೆ ಗಾಯನ ಕಾರ್ಯಕ್ರಮ ಜರುಗಿತು. ಸಹಾಯಕ ಕಮಿಷನರ್ ರಾಜು ಕೆ., ತಹಶೀಲ್ದಾರ್ ಶ್ರೀ ಕಿರಣ್ ಗೋರಯ್ಯ ಹಾಗೂ ತಾಲೂಕು ಕಚೇರಿಯ ಸಿಬ್ಬಂದಿ ಭಾಗವಹಿಸಿದ್ದರು. ಗಾಯಕ ಡಾ. ಗಣೇಶ್ ಗಂಗೊಳ್ಳಿ ಕನ್ನಡ ಗೀತೆ ಪ್ರಸ್ತುತಪಡಿಸಿದರು.
ಬಂಟಕಲ್ ಇಂಜಿನಿಯರಿಂಗ್ ಕಾಲೇಜು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಗೀತಗಾಯನ ಕಾರ್ಯಕ್ರಮ
ಬಂಟಕಲ್ (ಅ,29): ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಡಳಿತದ ಸೂಚನೆಯಂತೆ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆವರಣದಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮವು ಅ, 28 ರಂದು ಜರುಗಿತು. ಕನ್ನಡದ ಶ್ರೇಷ್ಠತೆಯನ್ನು ಸಾರುವ ಗೀತೆಗಳನ್ನು ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಡಿದರು. ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಕುಂದಾಪುರ:ವಿಶೇಷ ಚೇತನ ಮಕ್ಕಳಿಗೆ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಮಾಹಿತಿ ಕಾರ್ಯಕ್ರಮ
ಕುಂದಾಪುರ (ಅ,29): ಕುಂದಾಪುರದ ತಲ್ಲೂರಿನ ನಾರಾಯಣ ಶಾಲೆಯ ವಿಶೇಷ ವಚೇತನ ಮಕ್ಕಳಿಗಾಗಿ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಡೆಂಟಲ್ ಹೆಲ್ತ್ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಅ,27 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿ ರೋಟೆರಿಯನ್ ಡಾ| ರಾಜರಾಮ್ ಶೆಟ್ಟಿಯವರು ಹಲ್ಲಿನ ಆರೋಗ್ಯದ ಕುರಿತು ಮಕ್ಕಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು.ಶಾಲೆಯ ಮ್ಯಾನೆಂಜಿಂಗ್ ಟ್ರಸ್ಟಿ ಶ್ರೀ ಸುರೇಶ್, ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಶಶಿಧರ ಹೆಗ್ಡೆ, ಕಾರ್ಯದರ್ಶಿ ರೋಟೆರಿಯನ್ ಕೆ. ಎಸ್ […]
ಭ್ರಷ್ಟಾಚಾರ ನಿರ್ಮೂಲನೆಗೆ ಯುವಕರು ಕೈಜೋಡಿಸಬೇಕು -ಡಾ| ಹೆರಾಲ್ಡ್ ಐವನ್ ಮೋನಿಸ್ (ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಜಾಗೃತಿ ಸಪ್ತಾಹ -2021)
ಶಿರ್ವ(ಅ,29): ಇಂದು ದೇಶದಲ್ಲಿ ಕಾಡುತ್ತಿರುವ ದೊಡ್ಡ ಸಮಸ್ಯೆಯೆಂದರೆ ಭ್ರಷ್ಟಾಚಾರ.ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರವನ್ನು ತೊಲಗಿಸಿ, ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ರೂಪಿಸಿ ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಇಂದಿನ ವ್ಯವಸ್ಥೆಯನ್ನು ಸುಧಾರಿಸುವ ಸಲುವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ‘ ಜಾಗೃತಿ ಅರಿವು ಸಪ್ತಾಹ-2021’ಏರ್ಪಡಿಸಲಾಯಿತು. ಪ್ರತಿಯೊಬ್ಬ ಪ್ರಜೆಯೂ ಯಾವುದೇ ಭ್ರಷ್ಟಾಚಾರಕ್ಕೆ ಒಳಪಡದೆ, ಭ್ರಷ್ಟಾಚಾರಿಗಳವಿರುದ್ಧ ಹೋರಾಡಲು ಸೂಕ್ತ ಅಧಿಕಾರಿಗಳಿಗೆ ಮಾಹಿತಿ ನೀಡಿ ಕಾನೂನು ರಕ್ಷಣೆ – […]
ರೋಟರಿ ಕ್ಲಬ್ ಕುಂದಾಪುರ:ವಿಶೇಷ ಚೇತನ ಮಕ್ಕಳಿಗಾಗಿ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಮಾಹಿತಿ ಕಾರ್ಯಕ್ರಮ
ಕುಂದಾಪುರ (ಅ,29): ಕುಂದಾಪುರದ ತಲ್ಲೂರಿನ ನಾರಾಯಣ ಶಾಲೆಯ ವಿಶೇಷ ಚೇತನ ಮಕ್ಕಳಿಗಾಗಿ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಡೆಂಟಲ್ ಹೆಲ್ತ್ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಅ,27 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿ ರೋಟೆರಿಯನ್ ಡಾ| ರಾಜರಾಮ್ ಶೆಟ್ಟಿಯವರು ಹಲ್ಲಿನ ಆರೋಗ್ಯದ ಕುರಿತು ಮಕ್ಕಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು.ಶಾಲೆಯ ಮ್ಯಾನೆಂಜಿಂಗ್ ಟ್ರಸ್ಟಿ ಶ್ರೀ ಸುರೇಶ್, ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಶಶಿಧರ ಹೆಗ್ಡೆ, ಕಾರ್ಯದರ್ಶಿ ರೋಟೆರಿಯನ್ ಕೆ. ಎಸ್ […]
ಬದುಕಿನಲ್ಲಿ ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಿ- ಪ್ರೊ. ಕೆ.ಉಮೇಶ್ ಶೆಟ್ಟಿ (ಬಿ.ಬಿ ಹೆಗ್ಡೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಕಾರ್ಯಕ್ರಮ)
ಕುಂದಾಪುರ(ಅ,28): ವಿದ್ಯಾರ್ಥಿಗಳು ಬದುಕಿನಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು, ಆ ಮೂಲಕ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಾಧ್ಯ ಎಂದು ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ ಉಮೇಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬಿಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಕೆನರಾ ಬ್ಯಾಂಕ್ ವಡೇರಹೊಬಳಿ ಶಾಖೆಯ ಮುಖ್ಯ ಪ್ರಬಂಧಕರಾದ ಶ್ರೀ ಜಗದೀಶ್ ಪೂಜಾರಿ ವಿದ್ಯಾರ್ಥಿಗಳಿಗೆ ಸ್ಪೂರ್ತಿಯುತ ಮಾತುಗಳನ್ನಾಡಿದರು. ಕಾಲೇಜಿನ ಉಪಪ್ರಾಂಶುಪಾಲರಾದ […]
ಪುರಿ ಜಗನ್ನಾಥ….
ಪ್ರತಿಯೊಬ್ಬರ ಹೃದಯದಲ್ಲಿ ಒಂದೇ ವೇದ, ಮಂತ್ರ,ಭಕ್ತಿ. ಜಗನ್ನಾಥ ನಮ್ಮನ್ನು ರಕ್ಷಿಸು…ಕುಂದವಾಹಿನಿ ಓದುಗರಿಗೆ ನನ್ನ ಯಾತ್ರೆಯ ಮೊದಲ ತೀರ್ಥಸ್ಥಳವಾದ ಒಡಿಶಾ ರಾಜ್ಯದ ಪುರಿ ಜಗನ್ನಾಥ ದರ್ಶನದ ನನ್ನ ಅನುಭವ ನಿಮಗೆ ಕಟ್ಟಿ ಕೊಡುವ ಸಣ್ಣ ಪ್ರಯತ್ನ. ಶ್ರೀ ಕೃಷ್ಣ ಪರಮಾತ್ಮ ಬದರಿನಾಥದಲ್ಲಿ ಸ್ನಾನ, ಜ್ನಾನ ಪುರಿಯಲ್ಲಿ ಭೋಜನ, ದ್ವಾರಕಾದಲ್ಲಿ ಅಲಂಕಾರ,ಶಯನಹೀಗೆ ತನ್ನ ಹಲವಾರು ಆಯಾ ಕ್ಷೇತ್ರದಲ್ಲಿ ನಮಗೆ ದರ್ಶನ ನೀಡುವ ದೇವ..ಪುರಿಯಲ್ಲಿ ಜಗನ್ನಾಥನಿಗೆ ನಿತ್ಯ ಒಂಬತ್ತು ಸಮಯದಲ್ಲಿ ಅನ್ನದ ಖಿಚಿಡಿ ಸೇರಿದಂತೆ […]
ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ:”ಮಾತಾಡ್ ಮಾತಾಡ್ ಕನ್ನಡ- ಕನ್ನಡಕ್ಕಾಗಿ ನಾವು ಅಭಿಯಾನ”
ವಂಡ್ಸೆ(ಅ,27): 66 ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಾತಾಡ್ ಮಾತಾಡ್ ಕನ್ನಡ ಕನ್ನಡಕ್ಕಾಗಿ ನಾವು ಅಭಿಯಾನ ಕೆರಾಡಿಯ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ಅ,28 ರಂದು ನಡೆಯಿತು. ಕನ್ನಡ ವಿಭಾಗದ ಮುಖ್ಯಸ್ಥರಾದ ಅರುಣ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲಭಾಷ ಉಪನ್ಯಾಸಕ ನಾಗರಾಜ್ ಹೆಮ್ಮಾಡಿ ಪ್ರಾಸ್ತವಿಕ ಮಾತನಾಡಿದರು. ಉಪನ್ಯಾಸಕ ಸುಕೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕ ಅಭಿಜಿತ್ ಹೆಮ್ಮಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು […]
ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್: ವಿವಿಧ ಘಟಕಗಳ ಪದಪ್ರದಾನ ಸಮಾರಂಭ
ಬಂಟಕಲ್(ಅ,27): ಇಲ್ಲಿನ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶೈಕ್ಷಣಿಕ ವರ್ಷ 2021-2 2ರ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವರೆಡ್ ಕ್ರಾಸ್ ಘಟಕ ಹಾಗೂ ರೋಟರಾಕ್ಟ್ ಘಟಕದ ಪದಪ್ರದಾನ ಸಮಾರಂಭವು ಅಕ್ಟೋಬರ್ 21ರಂದು ಕಾಲೇಜಿನಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ನಿಕೇತನ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಇವರು ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ […]










