ಕುಂದಾಪುರ ಎಜುಕೇಶನ್ ಸೊಸೈಟಿ(ರಿ) ಪ್ರವರ್ತಿತ ಡಾl ಬಿ.ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಕುಂದಾಪುರ ವಲಯ ಮಟ್ಟದ ಮಹಿಳಾ ವಿಭಾಗದ ತ್ರೋಬಾಲ್ ಪಂದ್ಯಾಕೂಟ ಇದೇ ಫೆಬ್ರವರಿ 24ರಂದು ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ನಡೆಯಲಿದೆ.
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಪದುವಾ ಕಾಲೇಜು : ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ, ರಾಜ್ಯ ಎನ್ನೆಸ್ಸೆಸ್ ಘಟಕ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮಂಗಳೂರಿನ ಪದುವಾ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಫೆಬ್ರವರಿ 23 ರಿಂದ ಮಾರ್ಚ್ 1ರ ತನಕ ನಡೆಯಲಿದೆ.
ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರಿಗೆ ಬಸ್ ಡಿಕ್ಕಿ : ಅಪಾಯದಿಂದ ಪಾರು
ಬಿಡದಿ ಬಳಿಯಿರುವ ಕದಂಬ ಹೋಟೆಲ್ ಮುಂಭಾಗದಲ್ಲಿ ರಸ್ತೆ ಕ್ರಾಸ್ ಮಾಡುವಾಗ ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ಕಾರು ಅಪಘಾತಕ್ಕೆ ಈಡಾಗಿದೆ.
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸಭೆ
ಭಾರತೀಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರ ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ಪ್ರಥಮ ಕಾರ್ಯಕಾರಣಿ ಸಭೆ ಫೆಬ್ರವರಿ 18ರಂದು ಭಾಜಪ ಕಾರ್ಯಾಲಯ ಕುಂದಾಪುರದಲ್ಲಿ ನಡೆಯಿತು.
ಮರವಂತೆ ಕಡಲ ತೀರದಲ್ಲಿ ವಿದ್ಯುತ್ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ
ಸುಶಿ ಗ್ಲೋಬಲ್ ರಿಸರ್ಚ್ ಸೆಂಟರ್ ವತಿಯಿಂದ ಮರವಂತೆಯ ಕಡಲ ಕಿನಾರೆಯಲ್ಲಿ ಸಮುದ್ರದ ಅಲೆಗಳ ಮೂಲಕ ವಿದ್ಯುತ್ ಉತ್ಪಾದನೆಯ ಬಹುದೊಡ್ಡ ಮಹತ್ವಾಕಾಂಕ್ಷೆಯ ಯೋಜನೆಗೆ ಗುದ್ದಲಿ ಪೂಜೆಯ ಕಾರ್ಯಕ್ರಮ ನೆರವೇರಿತು.
ಪ.ಜಾ ., ಪ.ಪಂಗಡ ದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ
ಕುಂದಾಪುರ ಹಾಗೂ ಬೈಂದೂರು ತಾಲೂಕಿನ 2020-21 ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿ ವೇತನಕ್ಕೆ (State Scholarship Portal) ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಶ್ರೀ ಗುರು ಜ್ಯೋತಿ ಸ್ಫೋರ್ಟ್ಸ್ ಕ್ಲಬ್ ಗಂಗೊಳ್ಳಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ
ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ವತಿಯಿಂದ 2021ನೇ ಸಾಲಿನಲ್ಲಿ ವಿತರಿಸಲಾಗುವ ಗುರುಜ್ಯೋತಿ ಶಿಕ್ಷಣ ನಿಧಿ ಯೋಜನೆ ಯ ವಿದ್ಯಾರ್ಥಿವೇತನಕ್ಕೆ ಅರ್ಹ ಶಿಕ್ಷಣಾರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ನವೀಕೃತ ಶಾಖೆ ಉದ್ಘಾಟಿಸಿದ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಕುಂದಾಪುರ ಇದರ ಹವಾನಿಯಂತ್ರಿತ ನವೀಕೃತ ಶಾಖೆಯನ್ನು ಬೈಂದೂರಿನ ಶಾಸಕ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು. ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಗ್ರಾಹಕರ ವಿಶ್ವಾಸ ಗಳಿಸಿ ಯಶಸ್ಸಿನತ್ತ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ಹೊಂದಿ ಸೊಸೈಟಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಅವರು ಹೇಳಿದರು.
ಯಕ್ಷಗಾನದ ಅನರ್ಘ್ಯ ರತ್ನ ಡಾ. ಶ್ರೀಧರ್ ಭಂಡಾರಿ ನಿಧನ
ಉಡುಪಿ( ಫೆ:19) ತೆಂಕುತಿಟ್ಟು ಯಕ್ಷಗಾನದ ಖ್ಯಾತ ಕಲಾವಿದ ಡಾ.ಶ್ರೀಧರ್ ಭಂಡಾರಿ(73 ) ಯವರು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಇವರು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಪ್ರಸಂಗದ ಗಣಮಣಿ ಪಾತ್ರಕ್ಕೆ ಹೊಸ ಆಯಾಮ ನೀಡಿರುತ್ತಾರೆ.ಅಭಿಮನ್ಯು,ಸುಧನ್ವ ,ಕ್ರಷ್ಣ ಮುಂತಾದ ಪುಂಡುವೇಷಗಳಿಗೆ ಹೆಸರುವಾಸಿಯಾಗಿದ್ದ ಇವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬನ್ನೂರು ನಿವಾಸಿಯಾಗಿದ್ದು, 2019ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಧರ್ಮಸ್ಥಳ ಮೇಳದ […]
ಟೋಲ್ ಪ್ಲಾಜಾಗಳಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ಸ್ಥಗಿತ ವಿರೋಧಿಸಿ ಪ್ರತಿಭಟನೆಗೆ ಸಜ್ಜು
ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಸ್ಥಳೀಯರಿಗೆ ನೀಡಲಾಗುತ್ತಿರುವ ಶುಲ್ಕ ವಿನಾಯಿತಿ ಸ್ಥಗಿತ ವಿರೋಧಿಸಿ ಸಾಸ್ತಾನ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಫೆ. 22ರಂದು ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಂದ್ಗೆ ಕರೆ ನೀಡಿದ್ದು, ನಾಗರೀಕರು ಹಾಗೂ ಸ್ಥಳೀಯ ಹಲವಾರು ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ.