ಅಂಪಾರು(ಆ,09): ಇಲ್ಲಿನ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಅರಿವು ಕೇಂದ್ರದ ನಾಮ ಫಲಕವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಯುತ ಕೆ. ಗೋಪಾಲಕೃಷ್ಣ ಕಿಣಿ ಇವರು ಅನಾವರಣಗೈದರು. ಈ ಸಂದರ್ಭದಲ್ಲಿ ಪಂಚಾಯತ್ ಸದ್ಯಸರಾದ ನವೀನ ಶೆಟ್ಟಿ ಮತ್ತು ಭಾರತಿ ಶೇಟ್ ,.ಅಭಿವೃದ್ದಿ ಅಧಿಕಾರಿ ಮಧುಸೂಧನ್ ಪ್ರಸಾದ್ ಹಾಗೂ ಪಂಚಾಯತ್ ಸಿಬ್ಬಂದಿಯವರು ಹಾಜರಿದ್ದರು.
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ನಿವೃತ್ತ ಉಪನ್ಯಾಸಕಿ ನಳಿನಾದೇವಿ ಎಂ.ಆರ್ ಅವರಿಗೆ ಸನ್ಮಾನ
ಕುಂದಾಪುರ (ಆ.09): ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ ಉಪನ್ಯಾಸಕ ವ್ರತ್ತಿಯಿಂದ ನಿವೃತ್ತಿ ಹೊಂದಿದ ನಳಿನಾದೇವಿ ಎಂ.ಆರ್ ಅವರಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಇತ್ತೀಚೆಗೆ ನಡೆದ ಕನ್ನಡ ಕಾರ್ಯಗಾರದಲ್ಲಿ ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ವಹಿಸಿದ್ದರು. ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ಕಛೇರಿ ಉಡುಪಿ ಇಲ್ಲಿನ ಸಹಾಯಕ ಮಹಾ […]
ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ: ವಿವಿಧ ಸಂಘಟನೆಗಳ ಉದ್ಘಾಟನೆ
ಹೊಸಂಗಡಿ(ಆ,09): ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ ಇಲ್ಲಿನ ಎನ್ಎಸ್ಎಸ್, ರೇಂಜರ್ಸ್ ಮತ್ತು ರೋವರ್ಸ್, ಚುನಾವಣಾ ಸಾಕ್ಷರತಾ ಸಮಿತಿ, ಭಾರತೀಯ ಸೇವಾದಳ, ಸಾಂಸ್ಕ್ರತಿಕ ಹಾಗೂ ಕ್ರೀಡಾ ಸಂಘ, ಇಕೋ ಕ್ಲಬ್, ರೆಡ್ ರಿಬ್ಬನ್ ಕ್ಲಬ್ ವಿಜ್ಞಾನ ಸಂಘ ಹಾಗೂ ಇತರ ಸಂಘಟನೆಗಳ ಉದ್ಘಾಟನೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವಂತ ಶ್ರೀಮತಿ ಶಾರದಗೊಲ್ಲ ಇವರು ವಹಿಸಿಕೊಂಡು ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಉತ್ತಮ […]
ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ: ಅಧ್ಯಕ್ಷರಾಗಿ ಶಾನಾಡಿ ಸತೀಶ್ ಹೆಗ್ಡೆ, ಕಾರ್ಯದರ್ಶಿಯಾಗಿ ಸುಕೇಶ ಶೆಟ್ಟಿ ಹೊಸಮಠ ಆಯ್ಕೆ
ಉಡುಪಿ (ಆ,09): ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ 2024-2026 ನೇ ಸಾಲಿನ ಅಧ್ಯಕ್ಷರಾಗಿ ಎಂ ಜಿ ಎಂ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಶಾನಾಡಿ ಸತೀಶ್ ಹೆಗ್ಡೆ ಹಾಗೂ ಕಾರ್ಯದರ್ಶಿಯಾಗಿ ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ ರವರು ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಜೀವನ ಕುಮಾರ ಶೆಟ್ಟಿ ಹರ್ಕೂರ್ ಹಾಗೂ ಕಾರ್ಯದರ್ಶಿ ಮಂಜುನಾಥ ಜೋಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಜ್ಯೂನಿಯರ್ ರೆಡ್ ಕ್ರಾಸ್ ಘಟಕ ಉದ್ಘಾಟನೆ
ಕುಂದಾಪುರ(ಆ,09): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಅಂಗ ಸಂಸ್ಥೆಯಾದ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇತ್ತೀಚೆಗೆ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರು ಜ್ಯೂನಿಯರ್ ರೆಡ್ ಕ್ರಾಸ್ ಸಂಸ್ಥೆ ಸಂಚಾಲಕರಾದ ಶ್ರೀ ಸತ್ಯನಾರಾಯಣ ಪುರಾಣಿಕರು ಸಂಘದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. […]
ವಿದ್ಯಾರ್ಥಿ ವೇತನ ಸಮಿತಿಯ ಸಂಚಾಲಕರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆ
ಕುಂದಾಪುರ( ಅ,05): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆಗಸ್ಟ್ 18 ರ ಭಾನುವಾರ ಯುವ ಮೆರಿಡಿಯನ್ ನಲ್ಲಿ ನಡೆಯಲಿರುವ ವಿದ್ಯಾರ್ಥಿ ವೇತನ ಸಮಿತಿಯ ಸಂಚಾಲಕರಾಗಿ ಡಾ. ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರೂ, ಸಾಹಿತ್ತಿಕ ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಪ್ರಕರ ವಾಗ್ಮಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು […]
ಆರ್. ಎನ್. ಶೆಟ್ಟಿ ಪಿ ಯು ಕಾಲೇಜು ಕುಂದಾಪುರ: ಜ್ಯೂನಿಯರ್ ರೆಡ್ ಕ್ರಾಸ್ ಘಟಕ ಉದ್ಘಾಟನೆ
ಕುಂದಾಪುರ(ಆ,03): ವಿದ್ಯಾರ್ಥಿಗಳು ರೆಡ್ ಕ್ರಾಸ್ ಘಟಕದ ತತ್ವಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳಲ್ಲಿ ಸಂತ್ರಸ್ತರಿಗೆ ಸ್ವಯಂ ಪ್ರೇರಿತರಾಗಿ ನಿಸ್ವಾರ್ಥ ನೆರವು ನೀಡಲು ಮುಂದಾಗಬೇಕು ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸುವುದರ ಮೂಲಕ ಕರೆ ನೀಡಿದರು. […]
ಸಂಖ್ಯಾಶಾಸ್ತ್ರ ರಾಷ್ಟ್ರದ ಅಭ್ಯುದಯದ ಪ್ರತೀಕ :ಶ್ರೀ ಮಾರುತಿ
ಕುಂದಾಪುರ (ಆ ,03): ವಿದ್ಯಾರ್ಥಿಗಳಿಗೆ ಗಣಿತ ಮತ್ತು ಸಂಖ್ಯಾಶಾಸ್ತ್ರ ವಿಷಯಗಳ ಅವಶ್ಯಕತೆ ತುಂಬಾ ಇದೆ. ಆದರೆ ಇವೆಲ್ಲಾ ಕಬ್ಬಿಣದ ಕಡಲೆಯಂತೆ ತಪ್ಪು ಗ್ರಹಿಕೆ ಅವರಲ್ಲಿದೆ. ಭವಿಷ್ಯದ ಪೀಳಿಗೆಗೆ ಎಲ್ಲಾ ಸಂದರ್ಭಗಳಲ್ಲಿಯೂ, ಅನೇಕ ವ್ಯವಹಾರಗಳಲ್ಲಿ ಮತ್ತು ಸಂವಹನಗಳಲ್ಲಿ ಸಂಖ್ಯಾಶಾಸ್ತ್ರ ಅವಶ್ಯಕವಾಗಿದೆ. ನಮ್ಮ ರಾಜ್ಯದ ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಂಖ್ಯಾಶಾಸ್ತ್ರ ಸಂಯೋಜನೆ ತುಂಬಾ ಅವಶ್ಯಕತೆಯಿದೆ, ಇಡೀ ಜಗತ್ತಿನ ಆರ್ಥಿಕ ಬಲವರ್ಧನೆಯ ಅಧ್ಯಯನ ಕೂಡಾ ಇದರಿಂದಲೇ ಸಾಧ್ಯ, ಹಾಗಾಗಿ ಸಂಖ್ಯಾಶಾಸ್ತ್ರ ರಾಷ್ಟ್ರದ ಅಭ್ಯುದಯದ […]
ಸಿ ಎ ಫೌಂಡೇಶನ್ ಫಲಿತಾಂಶ: ವ ಕ್ರಿಯೇಟಿವ್ ಪಿಯು ಕಾಲೇಜು ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
ಕಾರ್ಕಳ (ಆ,03): ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್ ಎಸ್ ಹೆಗ್ಡೆ, ವಿನಯ್ ಪ್ರಶಾಂತ ಹಿರೇಮಠ, ಸಾನ್ವಿ ರಾವ್ ರವರು ಕ್ರಮವಾಗಿ 273, 253, 248, 238, 223 ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ.
ಕನ್ನಡ ಕರಾವಳಿ ಭಾಗದಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಕೇಳಿ ಬಂದಾಗ ಮೊದಲು ನೆನಪಾಗುವ ಹೆಸರು ಸತೀಶ್ ಸಾಲ್ಯಾನ್ ಮಣಿಪಾಲ್
ದಾನದಲ್ಲೇ ಅತ್ಯಂತ ಶ್ರೇಷ್ಠ ದಾನ ಅದು ರಕ್ತದಾನ ಎಂದು ನಂಬಿದ ವ್ಯಕ್ತಿ ರಕ್ತದ ಆಪತ್ಪಾಂಧವ ಶ್ರೀ ಸತೀಶ್ ಸಾಲ್ಯಾನ್ ಮಣಿಪಾಲ್ . ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆಯಲ್ಲಿ ದೇವರನ್ನು ಕಾಣುವ ವ್ಯಕ್ತಿತ್ವ ಸತೀಶರದ್ದು. ಸತೀಶ್ ಸಾಲ್ಯಾನ್ ಓರ್ವ ರಕ್ತದಾನಿ, ರಕ್ತದ ಜೊತೆಗಾರ ಎನ್ನುವುದು ಎಷ್ಟು ಸತ್ಯವೋ ಅಷ್ಟೇ ಅವರೊಬ್ಬ ಅಪ್ಪಟ ಹೃದಯವಂತ, ಸಂವೇದನಶೀಲ ಮತ್ತು ಮಾನವೀಯತೆ ತುಂಬಿಕೊಂಡಿರುವ ಕರುಣಾಮಯಿ ಮತ್ತು ಮಗುವಿನಂತ ಮನಸ್ಸಿನವರು ಎಂದರೆ ಅತೀಶಯೋಕ್ತಿ ಆಗದು. ಸತೀಶ್ […]