ಕುಂದಾಪುರ(ಮೇ ,22): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾಯಿಸ್ಪರ್ಶ ಕೆ. 2024-2025 ರ ಸಾಲಿನ ಎಸ್. ಎಸ್. ಎಲ್. ಸಿ. ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಈಕೆ ಕುಂದಾಪುರದ ದೇವದಾಸ ಕೆ. ಮತ್ತು ಶಶಿಕಲಾ ಎಸ್. ದಂಪತಿಯ ಪುತ್ರಿ. ಸಂಸ್ಥೆಯ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಡಾ. ಬಿ.ಬಿ. ಹೆಗ್ಡೆ ಕಾಲೇಜು : ರಕ್ಷಕ -ಶಿಕ್ಷಕರ ಸಭೆ
ಕುಂದಾಪುರ (ಮೇ 17): ಇಲ್ಲಿನ ಡಾ. ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎರಡನೇ ಅವಧಿಗೆ ರಕ್ಷಕ- ಶಿಕ್ಷಕ ಸಭೆಯನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ, ವರ್ತಮಾನದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳು ವಿದ್ಯಾರ್ಥಿಗಳ ಮೇಲೆ ಬಹಳ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ. ರಕ್ಷಕರು, ಪೋಷಕರು ಈ ಕುರಿತು ಗಮನಕೊಡಬೇಕು . ವಿದ್ಯಾರ್ಥಿಗಳ ಬದುಕನ್ನು ರೂಪಿಸುವಲ್ಲಿ ಹೆತ್ತವರ ಪಾತ್ರ […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಕುಂದಗನ್ನಡ ಸಂಘದ ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ (ಮೇ.19): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಮೂಡುಗಿಳಿಯಾರಿನ ಶ್ರೀ ಸ್ವಾಮಿ ನಂದೀಕೇಶ್ವರ ದೈವಸ್ಥಾನದ ಕೋಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು. ಈ ಸಂದರ್ಭ ದೈವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರರಾದ ಸುಭಾಷ್ ಚಂದ್ರ ಶೆಟ್ಟಿ, ಸೇವಾಕರ್ತರಾದ ರತ್ನಾಕರ್ ಶೆಟ್ಟಿ, ಚಂದ್ರ ಪಾಣಾ, ಕಾಲೇಜಿನ ಕುಂದಗನ್ನಡ ಸಂಘದ ಸಂಯೋಜಕಿ ರೇಷ್ಮಾ ಶೆಟ್ಟಿ, ಪ್ರವೀಣ ಪೂಜಾರಿ ಉಪಸ್ಥಿತರಿದ್ದರು.
ಗಂಗೊಳ್ಳಿ : ಸುಶ್ಮಿತಾ ಎಸ್. ಗಾಣಿಗರಿಗೆ ಸನ್ಮಾನ
ಗಂಗೊಳ್ಳಿ(ಮೇ ,22): ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ, ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ಮತ್ತು ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿಯ ವತಿಯಿಂದ 2025ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್ ಗಾಣಿಗ ಅವರನ್ನು ಗಂಗೊಳ್ಳಿಯ ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಆವರಣದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ […]
ಉಡುಪಿ ಜಿಲ್ಲಾ ಮಟ್ಟದ ಅತ್ಲೇಟಿಕ್ಸ್ ಕ್ರೀಡಾಕೂಟ 2025: ಕುಂದಾಪುರ ಟ್ರ್ಯಾಕ್ & ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
ಕುಂದಾಪುರ ( ಮೇ ,17): ಉಡುಪಿ ಜಿಲ್ಲಾ ಅಮೆಚುರ್ ಅತ್ಲೇಟಿಕ್ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ, ಉಡುಪಿ ಜಿಲ್ಲಾ ಮಟ್ಟದ ಕಿರಿಯರ ಅತ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿ 6 ಚಿನ್ನ, 2 ಬೆಳ್ಳಿ, 4 ಕಂಚಿನ ಪದಕದೊಂದಿಗೆ ಒಟ್ಟು 12 ಪದಕಗಳನ್ನು ಪಡೆದು ಉತ್ತಮ ಸಾಧನೆ ತೋರಿದ್ದಾರೆ. 8 ವರ್ಷ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಭವಿಷ್ಯ – ಬಾಲ್ ಥ್ರೋ ನಲ್ಲಿ ಚಿನ್ನದ ಪದಕ, ಪ್ರಾರ್ಥನಾ […]
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ಶ್ರದ್ದಾ ಎಸ್ ಮೊಗವೀರ ದ್ವಿತೀಯ ಪಿ.ಯು.ಸಿ.ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ್ಯಾಂಕ್
ಹೆಮ್ಮಾಡಿ (ಮೇ ,15): ಪದವಿಪೂರ್ವ ಶಿಕ್ಷಣ ಮಂಡಳಿಯವರು ಆಯೋಜಿಸಿದ 2ನೇ ಹಂತದ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಎಸ್ ಮೊಗವೀರ 595 /600 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ 5ನೇ ರ್ಯಾಂಕ್ ಪಡೆದು ಶೈಕ್ಷಣಿಕ ಸಾಧನೆ ಮೆರೆದಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಸಿ ಎಸ್ ಇ ಇ ಟಿ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಹೆಮ್ಮಾಡಿ(ಮೇ ,15): ಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರಿಸ್ ಇನ್ ಇಂಡಿಯಾದವರು ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಭರವಸೆಯ ವಿದ್ಯಾರ್ಥಿಗಳಾದ ಸನ್ವಿತಾ,ವಂಶಿ,ಕೆ.ವಿ.ಶರಣ್ಯ,ಪ್ರೇಕ್ಷಾ ಪೂಜಾರಿ,ನಾಗೇಂದ್ರ ಇವರು ಉತ್ತಮ ಅಂಕ ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ […]
CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್ನ ವಿದ್ಯಾರ್ಥಿಗಳು
ಕಾರ್ಕಳ ( ಮೇ ,15): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ(CSEET) ರವರು 03 ಮೇ, 2025 ರಲ್ಲಿ ನಡೆಸಿದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮಿಥುನಶ್ರೀ 164 ಮತ್ತು ಸುವರ್ಣ ಹರ್ಷಲ್ ವೈ 162 ಅಂಕಗಳೊಂದಿಗೆ ವಿಶಿಷ್ಟ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಹಾರಿಕ ಗೌಡ ಆರ್. ಬಿ.(153), ಇಯಾನ್ ಪೌಲ್(147), ಬಸವ ಪ್ರಸಾದ್ ಕಾಜಿ(142), ಪೂರ್ಣ ಭಟ್ ಕೆ.ಎಲ್(141), ಸೃಜನ್ ಎಸ್.ಭಟ್(140), ಲಿಖಿತ್ […]
ವಿ. ಕೆ. ಆರ್. ಶಾಲೆ ಕುಂದಾಪುರ : ಎಸ್. ಎಸ್. ಎಲ್. ಸಿ ಸಾಧಕರಿಗೆ ಸನ್ಮಾನ
ಕುಂದಾಪುರ,(ಮೇ,10) : ಕುಂದಾಪುರ ಎಜುಕೇಶನ್ ಸೊಸೈಟಿ( ರಿ) ಎಚ್. ಎಂ. ಎಂ. ಮತ್ತು ವಿ. ಕೆ. ಆರ್. ಶಾಲೆಗಳಲ್ಲಿ 2024- 25 ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 8 ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ರ್ಯಾಂಕ್ ಗಳಿಕೆಗೆ ಪ್ರೋತ್ಸಾಹಿಸಿದ ಆಡಳಿತ ಮಂಡಳಿ ಮತ್ತು ಶಿಕ್ಷಕರ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಹತ್ತನೇ ತರಗತಿ […]
ಗಂಗೊಳ್ಳಿ : ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಸನ್ಮಾನ
ಗಂಗೊಳ್ಳಿ(ಮೇ, 12) : ಗಂಗೊಳ್ಳಿಯ ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 32ನೇ ವಾರ್ಷಿಕೋತ್ಸವದ ಅಂಗವಾಗಿ ಖ್ಯಾತ ಸಮಾಜ ಸೇವಕ ಈಶ್ವರ್ ಮಲ್ಪೆ ಅವರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್ ಜಿ, ಅಧ್ಯಕ್ಷ […]










