ಆದಷ್ಟು ನಗದುರಹಿತ ವ್ಯವಹಾರ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನವನ್ನು ಪಡೆದು ದೇಶದ ಆರ್ಥಿಕ ಚೇತರಿಕೆಗೆ ಜನತೆ ಶ್ರಮಿಸ ಬೇಕು ಎಂದು ಹೆಮ್ಮಾಡಿ ಗ್ರಾಮೀಣ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ರಾವ್ ಹೇಳಿದರು.
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಬಂಟಕಲ್ ಇಂಜಿನಿಯರಿಂಗ್ ಕಾಲೇಜು : ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿಜ್ಞಾನ ವಿಭಾಗ ಹಾಗೂ ಕಾಲೇಜಿನ ಐಎಸ್ಟಿಇ ಘಟಕದ ಸಹಯೋಗದೊಂದಿಗೆ “ನ್ಯಾನೋ ತಂತ್ರಜ್ಞಾನ ಮತ್ತು ಅದರ ಅನ್ವಯಿಕೆಗಳು” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಶ್ರೇಷ್ಠ ಭಾರತೀಯ ಭೌತವಿಜ್ಞಾನಿ ಸರ್. ಸಿ. ವಿ ರಾಮನ್ ಅವರ ನೆನಪಿಗಾಗಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ”ಯ ಅಂಗವಾಗಿ 26 ಫೆಬ್ರವರಿ 2021ರಂದು ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು
ಪವರ್ ಲಿಪ್ಟರ್ ಸತೀಶ್ ಖಾರ್ವಿಗೆ ಚಿನ್ನದ ಪದಕ
ಇಂದು ಸಾಲಿಗ್ರಾಮ ದಲ್ಲಿ ನಡೆದ ರಾಜ್ಯಮಟ್ಟದ ಪುರುಷರ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕುಂದಾಪುರ ಹರ್ಕ್ಯುಲೆಸ್ ಜಿಮ್ ನ ವ್ಯವಸ್ಥಾಪಕ ಸತೀಶ್ ಖಾರ್ವಿ ಒಟ್ಟು 540 ಕೆ.ಜಿ. ಭಾರವನ್ನು ಎತ್ತಿ ಚಿನ್ನದ ಪದಕ ಪಡೆದಿದ್ದಾರೆ.
ಹೆಮ್ಮಾಡಿಯ ಹೆಮ್ಮೆಯ ಕ್ರೀಡಾಪಟು ರೈಸನ್ ಕರ್ನಾಟಕ ವಾಲಿಬಾಲ್ ತಂಡದ ನಾಯಕನಾಗಿ ಆಯ್ಕೆ
ಮಾರ್ಚ್5ರಿಂದ 11ರ ವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆಯಲಿರುವ 69ನೇ ರಾಷ್ಟ್ರೀಯ ಸೀನಿಯರ್ ವಾಲಿಬಾಲ್ ಪಂದ್ಯಾಕೂಟದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡವನ್ನು ಈ ಬಾರಿ ಕುಂದಾಪುರದ ಹೆಮ್ಮಾಡಿಯ ರೈಸನ್ ಬೆನೆಟ್ ರೆಬೆಲ್ಲೊ ನಾಯಕನಾಗಿ ಮುನ್ನಡೆಸಲಿದ್ದಾರೆ.
ಗಂಗೊಳ್ಳಿ ಮೀನುಗಾರಿಕಾ ಬಂದರು ಸಮಗ್ರ ಅಭಿವೃದ್ಧಿ – ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
ಜಿಲ್ಲೆಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾಗಿರುವ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಮೀನುಗಾರಿಕೆ ಜೆಟ್ಟಿಯ ಸುಮಾರು 12 ಕೋಟಿ ರೂ. ವೆಚ್ಚದ ಪುನರ್ ನಿರ್ಮಾಣ ಕಾಮಗಾರಿ ಮತ್ತು ಒಂದು ಕೋಟಿ ರೂ. ವೆಚ್ಚದ ಮೀನುಗಾರಿಕಾ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
ರಾಜ್ಯ ಮಟ್ಟದ ಭಾವ ಗೀತೆ ಗಾಯನ ಸ್ಪರ್ಧೆ
ಖಿದ್ಮಾ ಫೌಂಡೇಶನ್ ಕರ್ನಾಟಕ ಇವರ ಆಶ್ರಯದಲ್ಲಿ ಅಂಬಿಕಾ ತನಯದತ್ತ ನಾಮಾಂಕಿತ ದ.ರಾ. ಬೇಂದ್ರೆಯವರ ಸಾಹಿತ್ಯ ಆಧಾರಿತ ರಾಜ್ಯ ಮಟ್ಟದ ಭಾವ ಗೀತೆ ಗಾಯನ ಸ್ಪರ್ಧೆಯನ್ನು ಆಯೋಜಿಸಿದ್ದಾರೆ.
ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನದ ಪಾತ್ರ ಅತಿಮುಖ್ಯ : ಪ್ರೊ. ಕೆ. ಉಮೇಶ್ ಶೆಟ್ಟಿ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಅನೇಕ ಅವಕಾಶಗಳಿದ್ದು ವಿದ್ಯಾರ್ಥಿಗಳು ತಮಗೆ ಲಭ್ಯವಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.
ಕೊಲ್ಲೂರು : ಸಪ್ತಪದಿ ಯೋಜನೆಯಡಿ ಸಾಮೂಹಿಕ ವಿವಾಹ
ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲೊಂದಾದ ಸಪ್ತಪದಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಯೋಜನೆಯಡಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಫೆ.25ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ಜೀವನ ಮೌಲ್ಯಗಳು : ವಿಶೇಷ ಉಪನ್ಯಾಸ
ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಪ್ರಕೃತಿ ಸಹಜ ಮನುಷ್ಯರಾಗಬೇಕು ಎಂದು ಕುಂದಾಪುರದ ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲಚೇತನ್ ಶೆಟ್ಟಿ ಕೋವಾಡಿ ಹೇಳಿದರು.
ಗಂಗೊಳ್ಳಿ ಮಲ್ಯರಬೆಟ್ಟು ರಸ್ತೆ ಕಾಮಗಾರಿ – ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ
ಇನ್ನು ಕೆಲವು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಮಲ್ಯರಬೆಟ್ಟು ದೇವಸ್ಥಾನದ ರಸ್ತೆಗೆ ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಹೇಳಿದರು.










