ವಿದ್ಯಾರ್ಥಿಗಳನ್ನು ಸದಾ ಕ್ರಿಯಾಶೀಲರನ್ನಾಗಿ ರೂಪಿಸಲು ಶ್ರಮಿಸುತ್ತಿರುವ ರಾಜ್ಯ ಪ್ರಶಸ್ತಿ ಪುರಸ್ಕೃತ ಹೆಸ್ಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜೆ.ಸಿ.ಐ ಕುಂದಾಪುರ ಜೊತೆಗೂಡಿ ಶಾಲೆಯ ವಿದ್ಯಾರ್ಥಿಗಳಿಗಾಗಿ ಪ್ರಾಮಾಣಿಕತಾ ಮಳಿಗೆ”.(HONESTY SHOP) ಪ್ರಾರಂಭಿಸಿದೆ.
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಫೆಬ್ರವರಿ 12 ರಿಂದ 14 ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಾತ್ರಾ ಮಹೋತ್ಸವ
ಕುಂದಾಪುರ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ ಇದೇ ಫೆಬ್ರವರಿ 12 ರಿಂದ 14 ರ ವರೆಗೆ ನಡೆಯಲಿದೆ.
ಈಜು ಪಟು ನಾಗರಾಜ ಖಾರ್ವಿ ಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಮಾಣ ಪತ್ರ
ರಾಷ್ಟ್ರೀಯ ದಾಖಲೆಯ ಸಾಧನೆಗೈದ ಈಜು ಪಟು ನಾಗರಾಜ ಖಾರ್ವಿಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆ ಪ್ರಮಾಣ ಪತ್ರ ನೀಡಿದೆ.
ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾರ್ಡ ವಿತರಣೆ
ಸಮಾಜದ ಎಲ್ಲಾ ವರ್ಗದವರಿಗೂ ಜಾತಿ, ಮತ, ಧರ್ಮ ಭೇಧಭಾವವಿಲ್ಲದೆ ಆರೋಗ್ಯ ಭದ್ರತೆ ನೀಡುವ ಸಲುವಾಗಿ ಪ್ರಾರಂಭಿಸಿದ ಡಾ. ಜಿ. ಶಂಕರ್ ರವರ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿ. ಶಂಕರ್ ಆರೋಗ್ಯ ಸುರಕ್ಷಾ ವಿಮಾ ಯೋಜನೆಯ ಕಾರ್ಡುಗಳನ್ನು ಮೊಗವೀರ ಯುವ ಸಂಘಟನೆಯ ಪ್ರಧಾನ ಕಛೇರಿ ಮಾಧವ ಮಂಗಲ ಸಮುದಾಯ ಭವನ ಅಂಬಲಪಾಡಿ – ಉಡುಪಿ ಹಾಗೂ ಮೊಗವೀರ ಯುವ ಸಂಘಟನೆಗಳ ವಿವಿಧ ಘಟಕಗಳ ಕಛೇರಿ ಯಲ್ಲಿ ಫೆಬ್ರವರಿ 01 ನೇ ತಾರೀಕಿನಿಂದಲೇ ವಿತರಣೆ ಪ್ರಾರಂಭಿಸಿದ್ದು, […]
ಗಂಗೊಳ್ಳಿ ಮಾರಿಜಾತ್ರೆ : ಚಾಯ್ ಪೇ ಜಾತ್ರಾ ಕಾರ್ಯಕ್ರಮ
ಗಂಗೊಳ್ಳಿ: ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮದ ಪ್ರಸಿದ್ದ ಮಹಾಂಕಾಳಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿಜಾತ್ರೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಗಂಗೊಳ್ಳಿ ವತಿಯಿಂದ “ಚಾಯ್ ಪೇ ಜಾತ್ರಾ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಾರಿಜಾತ್ರೆಗೆ ಆಗಮಿಸಿದ ಸಾವಿರಾರು ಭಕ್ತಾಧಿಗಳಿಗೆ ಉಚಿತ ಚಹಾ ಹಾಗೂ ಲಘುಉಪಹಾರ ವ್ಯವಸ್ಥೆ ಮಾಡಲಾಗಿತ್ತು.ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಭಕ್ತಾಧಿಗಳಿಗೆ ಚಹಾ ನೀಡುವ ಮೂಲಕ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಬಿಜೆಪಿ ಮೀನುಗಾರರ ಪ್ರಕೋಷ್ಠ ರಾಜ್ಯ ಸಂಚಾಲಕರಾದ ಶ್ರೀ ಯಶ್ […]
ಗಂಗೊಳ್ಳಿ ಜನೌಷಧ ಕೇಂದ್ರ ಉದ್ಘಾಟನೆ
ಗಂಗೊಳ್ಳಿಯ ಮುಖ್ಯರಸ್ತೆಯ ಮಹಿಳಾ ಕೋ ಆಪರೇಟಿವ್ ಸೊಸೈಟಿ ಕಟ್ಟಡದ ಉನ್ನತಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರವನ್ನು ಜನವರಿ 30 ರಂದು ಬೈಂದೂರಿನ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿಯವರು ಉದ್ಘಾಟಿಸಿದರು.
ಯಕ್ಷಗಾನ ಕಲೆಯನ್ನು ಗೌರವಿಸಿ ಬೆಳೆಸಬೇಕು: ಡಾ. ಜಿ. ಶಂಕರ್
ಯಕ್ಷಗಾನ ಕರಾವಳಿ ಭಾಗದ ಸಾಂಸ್ಕೃತಿಕ ಶ್ರೀಮಂತಿಕೆ ಪ್ರತೀಕವಾಗಿದ್ದು, ಯಕ್ಷಗಾನ ಕಲೆ ಹಾಗೂ ಕಲಾವಿದರುಗಳನ್ನು ಗುರುತಿಸಿ ಗೌರವಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಉಡುಪಿ ಇದರ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು.
ಮಹಿಳೆಯರು ಬದುಕಿನ ಸೂಕ್ಷ್ಮತೆಯನ್ನು ಅರಿಯುವುದು ಅಗತ್ಯ : ಶ್ರೀಮತಿ ಸೌಜನ್ಯ ಶೆಟ್ಟಿ
ಮಹಿಳೆಯರು ತಮ್ಮ ಬದುಕಿನ ಸೂಕ್ಷ್ಮತೆಗಳನ್ನು ಅರಿತು ಇತರರೊಂದಿಗೆ ವ್ಯವರಿಸಬೇಕು. ಶೋಷಣೆ, ಕಿರುಕುಳಕ್ಕೊಳಗಾದಾಗ ಸೂಕ್ತ ಕಾನೂನಿನ ಸಲಹೆ ಪಡೆದುಕೊಂಡು ಶೋಷಣೆಯಿಂದ ಮುಕ್ತರಾಗಬೇಕು ಎಂದು ಡಾ. ಎ.ವಿ. ಬಾಳಿಗಾ ಸಮೂಹ ಸಂಸ್ಥೆ ಉಡುಪಿ ಇದರ ಆಡಳಿತಾಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿ ಹೇಳಿದರು.
ವರಸಿದ್ದಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ : ರಾಷ್ಟ್ರೀಯ ಮತದಾರರ ದಿನಾಚರಣೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಸಕ್ರಿಯವಾಗಿ ಭಾಗವಹಿಸುವುದು ಅತ್ಯವಶ್ಯಕ. ಆ ನಿಟ್ಟಿನಲ್ಲಿ ಕಡ್ಡಾಯ ಮತದಾನದ ಕುರಿತು ಜನತೆಗೆ ಅರಿವು ಮೂಡಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ರವರು ಹೇಳಿದರು ಅವರು ಕಾಲೇಜಿನಲ್ಲಿ ಜನವರಿ 25 ರಂದು ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ಕಾಲೇಜಿನ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕ ರಾಗಿರುವ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಜೇಶ್ವರಿಯವರು ಮತದಾರರ ಪ್ರತಿಜ್ಞಾ […]
ಇ. ಸಿ. ಆರ್. ಟ್ರಸ್ಟ್ – ಸಾಮಾಜಿಕ ಜಾಗೃತಿ : ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2021
ಇ . ಸಿ. ಆರ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಮಧುವನ ಇದರ ಎನ್. ಎಸ್. ಎಸ್. ಘಟಕ, ಮಹಿಳಾ ದೌರ್ಜನ್ಯ ತಡೆ ಘಟಕ ಮತ್ತು ಐ.ಕ್ಯೂ.ಎ.ಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ಜನವರಿ 29 ರಂದು ಸಾಮಾಜಿಕ ಜಾಗೃತಿ ಕಾರ್ಯಕ್ರಮವಾದ “ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ” ವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಆಕಾಶ್ ಸವಳಸಂಗ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಶ್ರೀ ಸಂತೋಷ್ ಬಿ .ಪಿ, ಸಬ್ ಇನ್ಸ್ಪೆಕ್ಟರ್ ಆಫ್ ಪೋಲಿಸ್ […]










