ಬೈಂದೂರು( ನ.19): ಬೈಂದೂರು ಉತ್ಸವ- 2024 ರಲ್ಲಿ ಕೊಂಚಾಡಿ ರಾಧಾಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇಲ್ಲಿಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಇವರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಯಿತು. ತವಿಲ್ ನಲ್ಲಿ ನಿತ್ಯಾನಂದ ದೇವಾಡಿಗ, ತಾಳದಲ್ಲಿ ಮಾಧವ ದೇವಾಡಿಗ, ಗೆಜ್ಜೆಯಲ್ಲಿ ಹರ್ಷವರ್ಧನ ಖಾರ್ವಿ ಸಹಕರಿಸಿದರು.
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಹೆಮ್ಮಾಡಿ : ಜನತಾ ಪಿ ಯು ಕಾಲೇಜಿನಲ್ಲಿ ವಾರ್ಷಿಕ ಸಂಭ್ರಮ – ಜನತಾ ಪರ್ವ 2K24
ಹೆಮ್ಮಾಡಿ ( ನ .19): ಜನತಾ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಭ್ರಮ ನವೆಂಬರ್ 14 ರಂದು ಅದ್ದೂರಿಯಾಗಿ ನೆರವೇರಿತು.ಕಾರ್ಯಕ್ರಮ ಉದ್ಘಾಟಿಸಿದರು. ಗಂಗೊಳ್ಳಿಯ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಅಧ್ಯಕ್ಷರಾದ ಶ್ರೀ ಜಿ. ವೆಂಕಟೇಶ ಶೆಣೈ ಕಾರ್ಯಕ್ರಮವನ್ನು ಉದ್ಘಾಟಿಸಿ ‘ಜನತಾ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಸಾಧನೆ ಮಹತ್ತರವಾದದ್ದು,ವಿದ್ಯಾರ್ಥಿಗಳ ಪ್ರತಿಭೆಯ ವಿಕಾಸಕ್ಕೆ ಜನತಾ ಸಂಸ್ಥೆಯ ಕಾರ್ಯಚಟುವಟಿಕೆಗಳು ಪ್ರಶಂಸನೀಯ’ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ […]
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಳದ ಪಿ ಯು ಕಾಲೇಜಿನಲ್ಲಿ ನ.22, 23 ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ನಟ್ ಬಾಲ್ ಪಂದ್ಯಾಟ
ಕೊಲ್ಲೂರು( ನ .16) : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 22 ಹಾಗೂ 23 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳ ಬಾಲಕ – ಬಾಲಕಿಯರ ರಾಜ್ಯ ಮಟ್ಟದ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟ 2024-25 ನಡೆಯಲಿದೆ. ನವೆಂಬರ್ 22 ರ ಮಧ್ಯಾಹ್ನ 03ಗಂಟಗೆ ಕೊಲ್ಲೂರಿನ ಲಲಿತಾಂಬಿಕಾ ಅತಿಥಿ ಗೃಹದಿಂದ ಪುರ […]
ಬಿ. ಬಿ. ಹೆಗ್ಡೆ ಕಾಲೇಜು : ಕಾನೂನಿನ ಅರಿವಿನ ವಿನೂತನ ಪ್ರಯೋಗ ‘ವಿಧಿಕ್ತ-2024’ ಸಂಪನ್ನ
ಕುಂದಾಪುರ (ನ.12): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ ‘ವಿಧಿಕ್ತ 2024’ ಕಾನೂನು ಅರಿವಿನ ಅಂತರ್ ತರಗತಿ ಸ್ಪರ್ಧೆ ಯಶಸ್ವಿಯಾಗಿ ಸಂಪನ್ನಗೊoಡಿತು. ವಿದ್ಯಾರ್ಥಿಗಳಿಗೆ ಕಾನೂನಿನ ಪ್ರಾಯೋಗಿಕ ಅಂಶಗಳನ್ನು ಅರ್ಥ ಮಾಡಿಸುವ ಹಾಗೂ ಕಾನೂನಿನ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಸಹಕರಿಸುವ ಉದ್ದೇಶದಿಂದ ಆಯೋಜಿಸಿದ್ದ ಈ ಸ್ಪರ್ಧೆಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಬಾರ್ ಅಸೋಸಿಯೇಷನ್ ಇದರ ಮಾಜಿ ಅಧ್ಯಕ್ಷರು ಹಾಗೂ ಹೆಸರಾಂತ […]
ಬಿ. ಬಿ. ಹೆಗ್ಡೆ ಕಾಲೇಜು : ‘ಉಗಮ-2024’ -ಸಮಾರೋಪ
ಕುಂದಾಪುರ (ನ.15): ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ದೊರೆತಾಗ ಮಾತ್ರ ಸಮತೋಲನವಾದ ಕಲಿಕೆ ಸಾಧ್ಯ. ಆ ಮೂಲಕ ಅಂಕಕ್ಕಿoತ ಮುಖ್ಯವಾದ ಬದುಕಿಗೆ ಅಗತ್ಯವಾದ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆಯುವಂತಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು. ಇವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಾಹಿತ್ಯಿಕ & ಸಾಂಸ್ಕೃತಿಕ ಸ್ಪರ್ಧೆ ‘ಉಗಮ-2024’ರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ […]
ಬ್ಯಾರೀಸ್ ಪದವಿ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಭೆ
ಕೋಡಿ( ನ,16): ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ, ಇಲ್ಲಿ 2024-25 ನೇ ಸಾಲಿನ ರಕ್ಷಕ-ಶಿಕ್ಷಕ ಸಭೆ ನವೆಂಬರ್ ,16 ರಂದು ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇದರ ಪ್ರಾಂಶುಪಾಲರಾದ ಪ್ರೊ. ಪ್ರಕಾಶ್ಚಂದ್ರ ಶೆಟ್ಟಿ ಇವರು ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿ ಪೋಷಕರನ್ನುದ್ದೇಶಿಸಿ “ಮಾನವ ಜನ್ಮ ಶ್ರೇಷ್ಠತಮವಾದುದು ವಿಜ್ಞಾನವನ್ನು ವರವಾಗಿ ಬಳಸಿ ದೇಶದ ಆಸ್ತಿಯಾಗಬೇಕು. ಪೋಷಕರು ತಮ್ಮ ಮಕ್ಕಳಿಗೆ […]
ಸರಸ್ವತಿ ವಿದ್ಯಾಲಯದಲ್ಲಿ ಆಡುಂಬೊಲ ಕಾರ್ಯಕ್ರಮ
ಗಂಗೊಳ್ಳಿ(ನ,16) : ಗ್ರಾಮೀಣ ಕ್ರೀಡೆಗಳು ಮಕ್ಕಳಲ್ಲಿ ಆರೋಗ್ಯವನ್ನು ಮತ್ತು ಸೃಜನಶೀಲತೆಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತವೆ. ಇಂತಹ ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚು ಹೆಚ್ಚು ತಮ್ಮನ್ನು ತೊಡಗಿಸಿಕೊಳ್ಳುವಂತೆ ಅವಕಾಶಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಇಸಿಓ ರಾಜ ಖಾರ್ವಿ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಜಿಎಸ್ವಿಎಸ್ ಅಸೋಸಿಯೇಷನ್ ಆಶ್ರಯದಲ್ಲಿ ಇತ್ತೀಚಿಗೆ ನಡೆದ ಗ್ರಾಮೀಣ ಆಟಗಳ ಕ್ರೀಡಾಕೂಟ ಆಡುಂಬೊಲವನ್ನು ಉದ್ಘಾಟಿಸಿ ಮಾತನಾಡಿದರು. ಸರಸ್ವತಿ […]
ಎಚ್ ಎಮ್ ಎಮ್ ಶಾಲೆಯಲ್ಲಿ “ನನ್ನ ಸುರಕ್ಷತೆ ನನ್ನ ಧ್ವನಿ” ಕಾರ್ಯಾಗಾರ
ಕುಂದಾಪುರ (ನ. 11) : ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 7ರಂದು ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಅವರ ಸುರಕ್ಷತೆಯ ಬಗ್ಗೆ ಎರವೆಯಲ್ಲಿಯೇ ಅರಿವು ಇರಬೇಕೆಂಬ ಕಾಳಜಿಯಿಂದ ನನ್ನ ಸುರಕ್ಷತೆ ನನ್ನ ಧ್ವನಿ ಎನ್ನುವ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮಾಜಿ ಶಿಕ್ಷಕಿ ಹಾಗೂ ಯೂಟ್ಯೂಬರ್ ಆಗಿರುವ ಶ್ರೀಮತಿ ಭಾರತಿ ಎನ್ ರವರು ವಿದ್ಯಾರ್ಥಿಗಳಿಗೆ ಗುಡ್ ಟಚ್ ಬ್ಯಾಡ್ ಟಚ್ ಕುರಿತಾದ ಪರಿಪೂರ್ಣ ಮಾಹಿತಿಯನ್ನು […]
ಡಾ|ಬಿ.ಬಿ.ಹೆಗ್ಡೆ ಸಂಸ್ಮರಣೆ
ಕುಂದಾಪುರ (ನ.11): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ ಹೇಳಿದರು. ಇವರು […]
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ : ವಾರ್ಷಿಕ ಕ್ರೀಡಾಕೂಟ
ಕೋಡಿ (ನ.14): ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟ ಇತ್ತೀಚೆಗೆ ನೆರವೇರಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕರ್ನಾಟಕ ಸರಕಾರದ ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತರಾಷ್ಟ್ರೀಯ ಗೋಲ್ಡ್ ಮೆಡಲಿಸ್ಟ್ ವೇಟ್ ಲಿಫ್ಟರ್ ಶ್ರೀ. ಗುರುರಾಜ್ ಪೂಜಾರಿ ಚಿತ್ತೂರು ಇವರು ಕ್ರೀಡಾಕೂಟವನ್ನುದ್ದೇಶಿಸಿ “ಮಗುವಿಗೆ ಕೇವಲ ನಾಲ್ಕು ಗೋಡೆಗಳ ನಡುವಿನ ಶಿಕ್ಷಣ ದೊರೆತರೆ ಸಾಲದು, ವ್ಯಕ್ತಿಯು ಬೌದ್ಧಿಕ, ಮಾನಸಿಕ ದೈಹಿಕವಾಗಿ, ಸದೃಢವಾಗಲು ಕ್ರೀಡೆ ಅತೀ ಅವಶ್ಯ. ಆ ನೆಲೆಯಲ್ಲಿ ಬ್ಯಾರೀಸ್ ಸಮೂಹ […]










