ಕುಂದಾಪುರ (ಜು, 22) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ಕನ್ನಡ ವಿಭಾಗ ಹಾಗೂ ಕುಂದವಾಹಿನಿ ಅಂತರ್ಜಾಲ ಸುದ್ದಿತಾಣದ ಜಂಟಿ ಆಯೋಜನೆಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ‘ಕುಂದಾಪ್ರ ಕನ್ನಡದಲ್ಲಿ “ಕುಂದಗನ್ನಡ ಭಾಷಿ ಮತ್ತು ಬದ್ಕ್” ಎನ್ನುವ ವಿಷಯದ ಕುರಿತು ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಮೂರು […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಉಪ್ಪುಂದ : ಸಂಸ್ಥೆಯ ಸಿಬ್ಬಂದಿಗಳಿಗೆ 1 ಲಕ್ಷ ಮೌಲ್ಯದ ಹೆಲ್ತ್ ಕಾರ್ಡ್ ವಿತರಿಸಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿ
ಉಪ್ಪುಂದ (ಜು,22):ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ವರಲಕ್ಷ್ಮೀ ಕೋ -ಆಪರೇಟಿವ್ ಸೊಸೈಟಿಯ ನೌಕರರಿಗೆ, ನಿರ್ದೇಶಕರಿಗೆ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಿಗೆ ತನ್ನ ಸ್ವಂತ ಹಣದಲ್ಲಿ ಸುಮಾರು 1 ಲಕ್ಷ ರೂ, ಮೌಲ್ಯದ ಹೆಲ್ತ್ ಕಾರ್ಡ್ ನ್ನು ವಿತರಿಸಿದರು. ತಮ್ಮ ಸಂಸ್ಥೆಯಲ್ಲಿ ದುಡಿಯುವ ಸಿಬ್ಬಂದಿಗಳಿಗೆ ಆರೋಗ್ಯ ತುರ್ತು ಸಂದರ್ಭದಲ್ಲಿ ಈ ಹೆಲ್ತ್ ಕಾರ್ಡ್ ಬಳಸಿ […]
ಆನಗಳ್ಳಿ ಶ್ರೀದತ್ತಾಶ್ರಮ : ಜು, 24 ರಂದು ಗುರು ಪೂರ್ಣಿಮೆ ಪ್ರಯುಕ್ತ ವಿಶೇಷ ಕಾರ್ಯಕ್ರಮ
ಕುಂದಾಪುರ (ಜು, 21): ಕುಂದಾಪುರದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಆನಗಳ್ಳಿಯ ಶ್ರೀ ದತ್ತಾಶ್ರಮದಲ್ಲಿ ಜುಲೈ, 24 ರಂದು ಗುರು ಪೂರ್ಣಿಮೆಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ತುಳಸಿ ಅರ್ಚನೆ, ಮಹಾಮಂಗಳಾರತಿ ಹಾಗೂ ಸಂಜೆ ದತ್ತ ಹೋಮ, ಭಜನಾ ಕೀರ್ತನೆ, ಸಾಧು-ಸಂತರಿಗೆ ಕಾಣಿಕೆ ಸಮರ್ಪಣೆ , ವಸ್ತ್ರ ವಿತರಣೆ , ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಲಿದ್ದು ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತರು ಆಗಮಿಸಬೇಕೆಂದು ಆನಗಳ್ಳಿ ಶ್ರೀ […]
ನಿರುಪಯುಕ್ತ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಸಿ ಸುಂದರ ಕೈದೋಟ ನಿರ್ಮಿಸಿದ ಯತೀಶ್ ಕಿದಿಯೂರು ಮನೆಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಭೇಟಿ
ಉಡುಪಿ (ಜು, 20) : ನಿರುಪಯುಕ್ತ ಪ್ಲಾಸ್ಟಿಕ್ ಬಾಟಲಿಗಳನ್ನು ಹಾಗೂ ಹಾಲಿನ ಪ್ಯಾಕೆಟ್ ಗಳನ್ನು ಬಳಸಿ ಮನೆಯ ಸುತ್ತಮುತ್ತಲೂ ಸುಂದರ ಕೈದೋಟ ನಿರ್ಮಿಸಿ ಸಾರ್ವಜನಿಕರ ಗಮನ ಸೆಳೆದ ಉಡುಪಿಯ ಯತೀಶ್ ಕಿದಿಯೂರು ಮನೆಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಕುಟಂಬದೊಂದಿಗೆ ಭೇಟಿ ನೀಡಿದರು. ಸಹೋದ್ಯೋಗಿ ಯತೀಶ್ ಕಿದಿಯೂರು ರವರ ಪರಿಸರ ಪ್ರೇಮ ಮತ್ತು ಸ್ರಜನಶಿಲತೆಗೆ ಜಿಲ್ಲಾಧಿಕಾರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಉಡುಪಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಯತೀಶ್ ಕಿದಿಯೂರು ಬಿಡುವಿನ ಸಮಯದಲ್ಲಿ […]
ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಗಂಗೊಳ್ಳಿ ಮೂಲದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಸ್ವಾಮಿ ದೈವೈಕ್ಯ
ಕುಂದಾಪುರ (ಜು, 19): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ಪೀಠವಾದ ಪರ್ತಗಾಳಿ ಜೀವೋತ್ತಮ ಮಠದ ಸ್ವಾಮಿಗಳಾದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಮಹಾಸ್ವಾಮಿಗಳು(76) ಜುಲೈ 19 ರಂದು ಹೃದಯಾಘಾತದಿಂದ ದೈವೈಕ್ಯರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸೇನಾಪುರ ಆಚಾರ್ಯ ಮನೆತನದವರಾದ ಅವರು ಗಂಗೊಳ್ಳಿಯ ವೆಂಕಟರಮಣ ದೇವಾಲಯದ ಅರ್ಚಕ ಮನೆತನದವರು.ದ್ವಾರಕಾನಾಥ ತೀರ್ಥ ಸ್ವಾಮೀಜಿ ಅವರಿಂದ 1967ರ ಫೆಬ್ರುವರಿ 26ರಂದು ಸನ್ಯಾಸ ದೀಕ್ಷೆ ಸ್ವೀಕರಿಸಿ, 1973ರ […]
ಹಟ್ಟಿಯಂಗಡಿ ಪಂಚಾಯತ್ ವ್ಯಾಪ್ತಿಯ ಚೀನಿಬೆಟ್ಟು ರಸ್ತೆ ಕೆಸರುಮಯ – ಸಾರ್ವಜನಿಕ ಸಂಚಾರಕ್ಕೆ ಅಡಚಣೆ
ತಲ್ಲೂರು (ಜು, 19): ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ಪಂಚಾಯತ್ ವ್ಯಾಪ್ತಿಯ ಚೀನಿಬೆಟ್ಟು ರಸ್ತೆ ಅತಿಯಾಗಿ ಸುರಿದ ಮಳೆಯ ಕಾರಣದಿಂದಾಗಿ ಕೆಸರುಮಯವಾಗಿದ್ದು ಸಾರ್ವಜನಿಕರಿಗೆ ಓಡಾಡಲು ಕಷ್ಟಕರವಾಗಿದೆ. ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದು ,ಸ್ವಲ್ಪ ಹೆಚ್ಚು ಕಡಿಮೆಯಾದರೆ ಕೈ ಕಾಲು ಮುರಿದುಕೊಳ್ಳವ ಭೀತಿಯಲ್ಲಿದ್ದಾರೆ. ಗ್ರಾಮ ಪಂಚಾಯತ್ ಈ ಕುರಿತು ಗಮನ ಹರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೂಡ ಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ.
ಕಟ್ಟ್ ಬೆಲ್ತೂರು ಗ್ರಾಮ ಪಂಚಾಯತ್ : ಕೋವಿಡ್ ಲಸಿಕಾ ಅಭಿಯಾನ
ಹೆಮ್ಮಾಡಿ (ಜು, 19 ): ಕಟ್ಟ್ ಬೆಲ್ತೂರು ಗ್ರಾಮ ಪಂಚಾಯತ್ ವತಿಯಿಂದ ಕರೋನಾ ವಿರುದ್ದ ಲಸಿಕಾಕರಣವನ್ನು ಜುಲೈ 19 ರಂದು ಸುಳ್ಸೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಆಟೋ ರಿಕ್ಷಾ ಚಾಲಕರಿಗೆ, ಹೋಟೆಲ್ ಕಾರ್ಮಿಕರಿಗೆ, ಪರ ಊರುಗಳಲ್ಲಿ ಉದ್ಯೋಗಕ್ಕೆ ತೆರಳುವವರಿಗೆ ಆದ್ಯತೆಯ ಮೇರೆಗೆ ಹಾಗೂ 18ರಿಂದ 45 ಪ್ರಾಯದವರಿಗೆ ಲಸಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕಟ್ ಬೆಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಪುತ್ರನ್ ಮತ್ತು ಉಪಾಧ್ಯಕ್ಷೆ ಶ್ವೇತಾ ಉಪಸ್ಥಿತರಿದ್ದರು. […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ಜು, 19) : ಡಾ|ಬಸ್ರೂರು ಭುಜಂಗ ಹೆಗ್ಡೆಯವರ ನೆನಪಿನಲ್ಲಿ ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜನ್ನು ನಿರ್ಮಿಸಲು ಸ್ಥಳದಾನ ಮಾಡಿದ ಸೌಕೂರು ಸೇರ್ವೆಗಾರ್ ಮನೆತನದ ವಿಶಾಲಾಕ್ಷಿ ಬಿ.ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಪ್ರೊ.ಕೆ .ಉಮೇಶ್ ಶೆಟ್ಟಿ ಸಂಸ್ಮರಣಾ ಮಾತುಗಳನ್ನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿಯವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಇಂಗ್ಲಿಷ್ ಉಪನ್ಯಾಸಕಿ ಶ್ರೀಮತಿ ದೀಪಿಕಾ ರಾಘವೇಂದ್ರ ಮತ್ತು ಭೌತಶಾಸ್ತ್ರ […]
ಉಪ್ಪಿನ ಕುದ್ರು: ಪಂಚಗಂಗಾವಳಿ ನದಿ ತೀರದಲ್ಲಿ ಗಂಗಾವತಿಯ ಸೋನಾ ಮಸೂರಿ ಭತ್ತದ ತಳಿ ನಾಟಿ ಕಾರ್ಯಕ್ರಮ
ತಲ್ಲೂರು (ಜು, 18) : ಕುಂದಾಪುರ ಕರಾವಳಿಯ ಪಂಚಗಂಗಾವಳಿ ನದಿತೀರದಲ್ಲಿ ಗಂಗಾವತಿಯ ಸೋನಾ ಮಸೂರಿ ಭತ್ತದ ತಳಿ ನಾಟಿ ಕೃಷಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕುಂದಾಪುರ ರೋಟರಿ ಕ್ಲಬ್ ಕೃಷಿಮಿತ್ರ ಯೋಜನೆಯಡಿಯಲ್ಲಿ ಉಪ್ಪಿನಕುದ್ರು ಗ್ರಾಮದಲ್ಲಿ ಪ್ರಯೋಗಿಕವಾಗಿ 1 ಎಕರೆ ಕೃಷಿ ಭೂಮಿಯಲ್ಲಿ ಪ್ರಾಯೋಗಿಕವಾಗಿ ನಾಟಿ ಮಾಡಿದ್ದೇವೆ ಎಂದು ಕುಂದಾಪುರ ರೋಟರಿ ಕ್ಲಬ್ ನೂತನ ಅಧ್ಯಕ್ಷರಾದ ಶ್ರೀ ಶಶಿಧರ್ ಹೆಗ್ಡೆ ಹೇಳಿದರು. ಅವರು ಕುಂದಾಪುರದ ರೋಟರಿ ಕ್ಲಬ್ ಹಾಗೂ ಯುವ ಸ್ಪಂದನ […]
ಬಿಜೂರು : ಗ್ರಾಮ ಪಂಚಾಯತ್ ನೂತನ ಕಟ್ಟಡ & ಅಂಗನವಾಡಿ ಕೇಂದ್ರ ಉದ್ಘಾಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ
ಉಪ್ಪುಂದ (ಜು, 18) : ಬಿಜೂರು ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಹಾಗೂ ಹೊಳೆತೋಟ ಅಂಗನವಾಡಿ ಕಟ್ಟಡವನ್ನು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶಾಸಕರು ಸ್ಥಳೀಯಾಡಳಿತದ ಜವಾಬ್ದಾರಿಯ ಕುರಿತು ತಿಳಿಸಿದರು. ಬಿಜೂರು ಶಾಲೆ ರಸ್ತೆಗೆ ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿ ಕಾಮಗಾರಿ ನಡೆಸುವುದರ ಜೊತೆಗೆ ಬಾಕಿ ಇರುವ 94ಸಿ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು. ಬಿಜೂರು ಗ್ರಾ.ಪಂ. ಅಧ್ಯಕ್ಷ ರಮೇಶ ವಿ.ದೇವಾಡಿಗ […]