ಕುಂದಾಪುರ (ಜು, 02): ದ್ವಿತೀಯ ಪಿ.ಯು.ಸಿ ವ್ಯಾಸಂಗ ಮುಗಿಸಿದ ನಂತರ 2021-2022 ನೇ ಸಾಲಿನಲ್ಲಿ ವೃತ್ತಿಪರ ಶಿಕ್ಷಣ (ನರ್ಸಿಂಗ್, ಪ್ಯಾರಾ ಮೆಡಿಕಲ್, ಫುಡ್ ಟೆಕ್ನಿಷಿಯನ್, ಹೋಟೆಲ್ ಮ್ಯಾನೇಜ್ಮೆಂಟ್ ಇತ್ಯಾದಿ) ಕೋರ್ಸ್ ನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರದ ವತಿಯಿಂದ “ವಿದ್ಯಾರ್ಥಿವೇತನ” ಹಾಗೂ ಸಹಾಯಧನವನ್ನು ನೀಡುವ ಕಲಿಕೆಗೆ ಆಸರೆ ಎನ್ನುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದು ಕೊಳ್ಳ ಬೇಕೆಂದು […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಬೈಕ್ ಅಪಘಾತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿಕ್ಷಕ ಜಿ. ಎಸ್. ಶಿವಕುಮಾರ್ ರವರ ಚಿಕಿತ್ಸೆಯ ನೆರವಿಗೆ ಮನವಿ
ಮಂಗಳೂರು (ಜು, 03) : ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ಸುರುಳಿಕುಮೇರಿ ನಿವಾಸಿ, ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಜಿ.ಎಸ್. ಶಿವಕುಮಾರ್ ಅವರು ಕಳೆದ ಜೂನ್, 25 ರಂದು ಪುತ್ತೂರಿನ ಸಂಪ್ಯ ಬಳಿ ಬೈಕ್ ಅಪಘಾತದಿಂದಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ಅವರ ಮಕ್ಕಳು ಇನ್ನೂ ಚಿಕ್ಕವರಾಗಿದ್ದು, ಪತ್ನಿ ಗೃಹಿಣಿಯಾಗಿದ್ದಾರೆ. ಅವರ ಚಿಕಿತ್ಸೆಗೆ ಬಹುದೊಡ್ಡ ಮೊತ್ತದ ಅವಶ್ಯಕತೆಯಿದ್ದು. ದಿನಕ್ಕೆ 40-50 ಸಾವಿರ ರೂ […]
ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿಯವರ ಚಿಕಿತ್ಸೆಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವತಿಯಿಂದ ನೆರವು
ಹೆಮ್ಮಾಡಿ (ಜು, 3): ಬೈಕ್ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಚಿಕಿತ್ಸೆಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವತಿಯಿಂದ ಹತ್ತು ಸಾವಿರ ರೂಪಾಯಿಯ ಸಹಾಯ ಧನವನ್ನು ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಅಧ್ಯಕ್ಷರಾದ ಕೆ. ಕೆ. ಕಾಂಚನ್ ರವರು ಅವರ ಸಂಬಂಧಿಕರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸಂಘದ ಕಾರ್ಯದರ್ಶಿ ಸುರೇಶ್ ವಿಠಲವಾಡಿ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಗಂಗೊಳ್ಳಿ : ರಾಷ್ಟ್ರೀಯ ವೈದ್ಯರ ದಿನಾಚರಣೆ
ಗಂಗೊಳ್ಳಿ (ಜು, 01): ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ರೋಟರಿ ಕ್ಲಬ್ ಗಂಗೊಳ್ಳಿ ಇದರ ಆಶ್ರಯದಲ್ಲಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ರವರನ್ನು ವೈದ್ಯರ ದಿನಾಚರಣೆ ಪ್ರಯುಕ್ತ ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಗಂಗೊಳ್ಳಿ ಇದರ ಅಧ್ಯಕ್ಷ ರಾಜೇಶ್ ಶೇರೆಗಾರ್ ವಹಿಸಿದ್ದರು. ನಾರಾಯಣ ನಾಯ್ಕ, ರಮನಾಥ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಗಂಗೊಳ್ಳಿ ಇದರ ಪದಾಧಿಕಾರಿಗಳು, ಗ್ರಾಮ ಪಂಚಾಯತ್ […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ : 10 ಸಾವಿರ ಮಾಸ್ಕ್ ವಿತರಣಾ ಅಭಿಯಾನ
ಶಿರ್ವ (ಜು, 02): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಸ್ನಾತಕೋತ್ತರ ಅಧ್ಯಯನ ಕೇಂದ್ರ ,ಎಂಎಸ್ ಡಬ್ಲ್ಯೂ ,ಎಂಕಾಂ,ಎನ್ ಸಿಸಿ,ಎನ್ ಎಸ್ ಎಸ್ , ರೋವರ್ಸ-ರೇಂಜರ್ಸ್ ಹಾಗೂ ರಿಲಯನ್ಸ್ ಫೌಂಡೇಶನ್ ಜಂಟಿಯಾಗಿ 10 ಸಾವಿರ ಮಾಸ್ಕ್ ಗಳ ವಿತರಣೆ ಅಭಿಯಾನವನ್ನು ಆಯೋಜಿಸಲಾಗಿತ್ತು. ಶಿರ್ವ ಆರೋಗ್ಯ ಸಮುದಾಯ ಕೇಂದ್ರ, ಪೋಸ್ಟ್ ಆಫೀಸ್, ಆರಕ್ಷಕರ ಠಾಣೆ, ಆಶಾ ಓಲ್ಡ್ ಏಜ್ ಹೋಂ,ವಿವಿಧ ಧಾರ್ಮಿಕ ಕೇಂದ್ರಗಳು, ಶಿರ್ವ ಗ್ರಾಮ ಪೇಟೆ, ಕಾಲೇಜಿನ ಸಂತ […]
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಕ್ಕೆ : ಶಾಲಾ ಪ್ರಾರಂಭೋತ್ಸವ
ಜಡ್ಕಲ್ (ಜು, 01): ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಕ್ಕೆ ಇದರ ಶಾಲಾ ಪ್ರಾರಂಭೋತ್ಸವ ಜುಲೈ,01 ರಂದು ನಡೆಯಿತು. ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಯುತ ನಾಗೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀಮತಿ ರಾಧಾರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಿಕ್ಷಣಾಭಿಮಾನಿ ರಾಮ ಶೆಟ್ಟಿ ಅತ್ತಿಕಾರ್, ಮುಖ್ಯ ಶಿಕ್ಷಕಿ ಶ್ರೀಮತಿ ದೇವಕಿ, ಸಹಶಿಕ್ಷಕಿ ಶ್ರೀಮತಿ ನೇತ್ರ ಹಾಗೂ ಶಾಲಾ ಮಕ್ಕಳ ಪೋಷಕರು […]
ಗುಜ್ಜಾಡಿ : ಅಪಘಾತದಲ್ಲಿ ಕೊನೆಯುಸಿರೇಳೆದ ಗೋವಿಗೆ ಹಿಂ.ಜಾ.ವೇ ವತಿಯಿಂದ ಧಾರ್ಮಿಕ ವಿಧಿ ವಿಧಾನದೊಂದಿಗೆ ಅಂತ್ಯ ಸಂಸ್ಕಾರ
ಗಂಗೊಳ್ಳಿ (ಜೂ, 29) : ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಮುಖ್ಯರಸ್ತೆಯ ಸಮೀಪದಲ್ಲಿ ರಸ್ತೆ ಅಪಘಾತದಿಂದಾಗಿ ಕೊನೆಯುಸಿರೇಳೆದ ಗೋವಿಗೆ ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಯ ಕಾರ್ಯಕರ್ತರು ಸ್ಥಳೀಯರ ಸಹಕಾರದಿಂದ ಜೂನ್ 29 ರಂದು ಗುಜ್ಜಾಡಿಯಲ್ಲಿ ಧಾರ್ಮಿಕ ವಿಧಿ ವಿಧಾನದೊಂದಿಗೆ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು. ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ಈ ಕಾರ್ಯಕ್ಕೆ ಸ್ಥಳೀಯರು ಶ್ಲಾಘಿಸಿದ್ದಾರೆ.
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರೋನಾ ಲಸಿಕಾ ಅಭಿಯಾನ
ಕುಂದಾಪುರ(ಜೂ,30): ಕಾಲೇಜು ಆರಂಭಕ್ಕೆ ಪೂರ್ವವಾಗಿ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇಲ್ಲಿ ಪದವಿ ವಿದ್ಯಾರ್ಥಿಗಳಿಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ 19 ಲಸಿಕೆ ಅಭಿಯಾನವನ್ನು ಆಯೋಜಿಸಲಾಗಿತ್ತು. ಜೂನ್, 28 ರಂದು 200 ಡೋಸ್ ಲಸಿಕೆ ನೀಡಲಾಗಿದ್ದು, ಇಂದು 600 ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಗಿದೆ. ಈ ಅಭಿಯಾನ ನಾಳೆಯು ಮುಂದುವರಿಯಲಿದ್ದು, 500 ವಿದ್ಯಾರ್ಥಿಗಳಿಗೆ ಲಸಿಕೆಗಳನ್ನು ನೀಡಲಾಗುವುದು. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯುವ ಮೂಲಕ ಕೋವಿಡ್ […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ : ಕರೋನಾ ಲಸಿಕಾ ಅಭಿಯಾನ
ಶಿರ್ವ(ಜೂ, 29) : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್ ಸಿ ಸಿ,ಎನ್ ಎಸ್ ಎಸ್ ,ಯೂತ್ ರೆಡ್ ಕ್ರಾಸ್,ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ,ಜಿಲ್ಲಾ ಸರ್ಕಾರಿ ಆಸ್ಪತ್ರೆ ,ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಕರೋನಾ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಎಲ್ಲಾ ಬೋಧಕ- ಬೋಧಕೇತರ ಸಿಬ್ಬಂದಿ ಗಳು ಹಾಗೂ ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಜೂನ್ […]
ಮುಳ್ಳಿಕಟ್ಟೆ : ಕನ್ನಡ ಜಾನಪದ ಪರಿಷತ್ ವತಿಯಿಂದ ವಲಸೆ ಕಾರ್ಮಿಕ ಕುಟುಂಬಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಣೆ
ಮುಳ್ಳಿಕಟ್ಟೆ (ಜೂ, 28) : ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಬೆಂಗಳೂರು ಮತ್ತು ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆ ಘಟಕದ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ವಾಸವಾಗಿರುವ 35 ವಲಸೆ ಕಾರ್ಮಿಕರ ಕುಟುಂಬಗಳಿಗೆ ಹಾಗೂ 3 ಮಂದಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಧಾನ್ಯಗಳ ಕಿಟ್ ನ್ನು ಜೂನ್ ,28 ರಂದು ಮುಳ್ಳಿಕಟ್ಟೆಯಲ್ಲಿ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ […]