ಕುಂದಾಪುರ (ಮಾ.4): ಕುಂದಾಪುರ ತಾಲೂಕಿನ ಪುರಾಣಪ್ರಸಿದ್ಧ ಹಾಗೂ ಕಾರಣೀಕ ಶಕ್ತಿ ಕೇಂದ್ರಗಳಲ್ಲಿ ಒಂದಾದ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗೀತಾನಂದ ಫೌಂಡೇಷನ್ ಇದರ ಪ್ರವರ್ತಕರಾದ ಉದ್ಯಮಿ ಆನಂದ. ಸಿ. ಕುಂದರ್ ಹಾಗೂ ಕಾವ್ರಾಡಿ ಕಲ್ಲೋಳಿಮನೆ ಕೆ. ವಿ. ಬಾಲಚಂದ್ರ ಶೆಟ್ಟಿಯವರು ಕೊಡುಗೆ ರೂಪದಲ್ಲಿ ನಿರ್ಮಿಸಿಕೊಟ್ಟ ಸ್ವಾಗತ ಗೋಪುರದ ಲೋಕಾರ್ಪಣಾ ಕಾರ್ಯಕ್ರಮ ಮಾರ್ಚ್ 3 ರಂದು ನಡೆಯಿತು. ಈ ಕಾರ್ಯಕ್ರಮಕ್ಕೆ ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ಶ್ರೀಪಾದರು ಆಗಮಿಸಿ ಸ್ವಾಗತ ಗೋಪುರವನ್ನು ಲೋಕಾರ್ಪಣೆಗೊಳಿಸಿದರು. […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಕೆರಾಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ
ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ ನೇರವೆರಿಸುವುದರೊಂದಿಗೆ ಕಾಮಗಾರಿಗೆ ಚಾಲನೆ ನೀಡಿದರು.
ಕರುನಾಡ ರತ್ನ ರಾಜ್ಯ ಪ್ರಶಸ್ತಿ ಪಡೆದ ಗಣೇಶ್ ಗಂಗೊಳ್ಳಿ
ಕುಂದಾಪುರ (ಮಾ.1) ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ನೀಡುವ ಕರುನಾಡ ಸೇವ ರತ್ನ ವಾರ್ಷಿಕ ರಾಜ್ಯ ಪ್ರಶಸ್ತಿಯನ್ನು ಖ್ಯಾತ ಜಾನಪದ ಹಾಡುಗಾರ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷ ಶ್ರೀ ಗಣೇಶ್ ಗಂಗೊಳ್ಳಿ ಇವರಿಗೆ ಮೈಸೂರಿನ ಪ್ರಸಿದ್ದ ಸಾಹಿತಿಗಳಾದ ಶ್ರೀ ಜಯಪ್ಪ ಹೊನ್ನಾಳಿಯವರು ದಿನಾಂಕ 28/02/2021 ರಂದು ಮೈಸೂರು ಕಲಾ ಮಂದಿರದ ಮನೆಯಂಗಳ ಸಭಾಭವನದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ಹಿರಿಯ […]
ಪ್ರಸಿದ್ದ ಶಿಲ್ಪಿ ಕಳಿ ಚಂದ್ರಯ್ಯ ಆಚಾರ್ಯ ರಿಗೆ ಸನ್ಮಾನ
ವಂಡ್ಸೆ (ಮಾ. 1): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೆಸರಾಂತ ಶಿಲ್ಪಿ , ಕರ್ನಾಟಕದ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಬೆಂಗಳೂರು ಇದರ ನಿರ್ದೇಶಕರಾದ ಕಳಿ ಚಂದ್ರಯ್ಯ ಆಚಾರ್ಯ ಇವರನ್ನು ಉಪ್ರಳ್ಳಿ ಶ್ರೀಕಾಳಿಕಾಂಬ ದೇವಸ್ಥಾನದ ವೇದಿಕೆಯಲ್ಲಿ ಬೈಂದೂರಿನ ಶಾಸಕ ಬಿಎಂ ಸುಕುಮಾರ್ ಶೆಟ್ಟಿ ಸನ್ಮಾನಿಸಿದರು. ಉಪ್ರಳ್ಳಿ ಮೂಡು ಮಠ ಶ್ರೀ ಕಾಳಿಕಾಂಬ ದೇವಸ್ಥಾನದ ಮುಕ್ತೇಶರರಾಗಿ ಸೇವೆ ಸಲ್ಲಿಸುತ್ತಿರುವ ಇವರು ವಿಶ್ವಕರ್ಮ ಸಮುದಾಯದ ಮುಖಂಡರಾಗಿದ್ದು ವಿವಿಧ ದೇವಾಲಯ ಅಡಳಿತ […]
ಪವರ್ ಲಿಪ್ಟರ್ ಸತೀಶ್ ಖಾರ್ವಿಗೆ ಚಿನ್ನದ ಪದಕ
ಇಂದು ಸಾಲಿಗ್ರಾಮ ದಲ್ಲಿ ನಡೆದ ರಾಜ್ಯಮಟ್ಟದ ಪುರುಷರ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕುಂದಾಪುರ ಹರ್ಕ್ಯುಲೆಸ್ ಜಿಮ್ ನ ವ್ಯವಸ್ಥಾಪಕ ಸತೀಶ್ ಖಾರ್ವಿ ಒಟ್ಟು 540 ಕೆ.ಜಿ. ಭಾರವನ್ನು ಎತ್ತಿ ಚಿನ್ನದ ಪದಕ ಪಡೆದಿದ್ದಾರೆ.
ಗಂಗೊಳ್ಳಿ ಮೀನುಗಾರಿಕಾ ಬಂದರು ಸಮಗ್ರ ಅಭಿವೃದ್ಧಿ – ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
ಜಿಲ್ಲೆಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾಗಿರುವ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಮೀನುಗಾರಿಕೆ ಜೆಟ್ಟಿಯ ಸುಮಾರು 12 ಕೋಟಿ ರೂ. ವೆಚ್ಚದ ಪುನರ್ ನಿರ್ಮಾಣ ಕಾಮಗಾರಿ ಮತ್ತು ಒಂದು ಕೋಟಿ ರೂ. ವೆಚ್ಚದ ಮೀನುಗಾರಿಕಾ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
ಜೀವನ ಮೌಲ್ಯಗಳು : ವಿಶೇಷ ಉಪನ್ಯಾಸ
ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಪ್ರಕೃತಿ ಸಹಜ ಮನುಷ್ಯರಾಗಬೇಕು ಎಂದು ಕುಂದಾಪುರದ ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲಚೇತನ್ ಶೆಟ್ಟಿ ಕೋವಾಡಿ ಹೇಳಿದರು.
ಫೆಬ್ರವರಿ, 27 ರಂದು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ (ನಿ) ಅಮೃತ ಮಹೋತ್ಸವ
ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್(ನಿ) ಇದರ ಅಮೃತ ಮಹೋತ್ಸವ ಇದೇ ಫೆಬ್ರವರಿ 27 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆಯಲಿದೆ.
ಬಗಳಾಂಬಾ ತಾಯಿ ದೇವಸ್ಥಾನ : ಪ್ರತಿಷ್ಠಾ ವರ್ಧಂತಿ ಮಹೋತ್ಸವ
ಕುಂದಾಪುರ( ಫೆ.23): ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ದ ಪ್ರಯುಕ್ತ ಬ್ರಹ್ಮಕಲಶಾಭಿಷೇಕ, ಚಂಡಿಕಾಯಾಗ ಶ್ರೀ ಗುರುಪರಾಶಕ್ತಿ ಮಠ, ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ವೇದಮೂರ್ತಿ ಕೆ. ಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ – ವಿಧಾನಗಳೊಂದಿಗೆ ನೆರವೇರಿತು. ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಗಣಪತಿಯಾಗ, ಸತ್ಯನಾರಾಯಣ ಪೂಜೆ, ಗುರು ಸನ್ನಿಧಿಯಲ್ಲಿ ನವಕ ಪ್ರಧಾನ ಕಲಶಾಭಿಷೇಕ, […]
ಕ್ಲೀನ್ ಕುಂದಾಪುರ ಪ್ರಾಜೆಕ್ಟ್ – ಕೋಡಿ ಕಡಲ ತೀರ : ಸ್ವಚ್ಛತಾ ಕಾರ್ಯಕ್ರಮ
ಕುಂದಾಪುರದ ಪ್ರಸಿದ್ಧ ಪ್ರವಾಸಿ ತಾಣ ಕೋಡಿ ಕಡಲತೀರದಲ್ಲಿ ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 84ನೇ ವಾರದ ಸ್ವಚ್ಛತಾ ಕಾರ್ಯಕ್ರಮ ಫೆಬ್ರವರಿ 21ರಂದು ಜರುಗಿತು.










