ವಕ್ವಾಡಿ(ಜ.24): ವಕ್ವಾಡಿಯಲ್ಲಿ ನಡೆಯುತ್ತಿರುವ ವಾರಾಹಿ ಕಾಲುವೆ ಯೋಜನೆ, ಆರಂಭದಿಂದಲೂ ಒಂದಿಲ್ಲೊಂದು ಸಮಸ್ಯೆ ತಂದೊಡ್ಡುತ್ತಲೇ ಇದೆ. ಈ ಎಲ್ಲ ಸಮಸ್ಯೆಗಳನ ಕುರಿತು, ಸ್ಥಳಿಯರು, ಗ್ರಾಮ ಪಂಚಾಯತ್ ನೊಂದಿಗೆ ಸೇರಿ ಅನೇಕ ಬಾರಿ ಕಂಪೆನಿ ಯೊಂದಿಗೆ ಸಭೆ ನಡೆಸಿ, ಸಮಸ್ಯೆ ಗಳ ಶೀಘ್ರ ಪರಿಹಾರ ಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರೂ ಯಾವುದೇ ಪ್ರಯೋಜನ ಆಗಲಿಲ್ಲ. ಇದೀಗ ಈ ಕಾಮಗಾರಿ ನಡೆಸುತ್ತಿರುವ ಕಂಪೆನಿ ಯ ಔದಾಸಿನ್ಯಕ್ಕೆ ಹಿಡಿದು ಕೈಗನ್ನಡಿಯಂತೆ, ಬೇಕು ಬೇಕಾದಲ್ಲಿ ಹೊಂಡ ತೆರೆದು, […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ನಾಡ(ಜ.12): ಶ್ರೀ ಕ್ಷೇತ್ರ ಹಾಡಿಗರಡಿ ದೈವಸ್ಥಾನ ನಾಡ ಇದರ ಪರಿವಾರ ದೈವಗಳ ವಾರ್ಷಿಕ ಹಾಲುಹಬ್ಬ, ಗೆಂಡಸೇವೆ, ಮಹಾಪೂಜೆ, ದೈವದರ್ಶನ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಇದೇ ಜ.14 ಮತ್ತು 15 ರಂದು ನಡೆಯಲಿದೆ. ಜ.14 ರ ಶುಕ್ರವಾರ ಸಂಜೆ 6 ಗಂಟೆಗೆ ದೈವದರ್ಶನ ಹಾಗೂ ಗೆಂಡಸೇವೆ, 7 ಗಂಟೆಗೆ ಮಹಾ ಅನ್ನಸಂತರ್ಪಣೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿವೇತನ ವಿತರಣೆಇನ್ನಿತರ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ ಜ.15ರ ಶನಿವಾರಬೆಳಿಗ್ಗೆ ಗಂಟೆ 10-00ಕ್ಕೆ […]
ಕೊಡೇರಿ: ಕಡಲಾಮೆ ರಕ್ಷಣೆ
ಉಪ್ಪುಂದ(ಡಿ,22) : ಇಲ್ಲಿನ ಕೋಡೇರಿ ಸಮುದ್ರ ತೀರದಲ್ಲಿ ಮೊಟ್ಟೆ ಇಡಲು ಬಂದ ಕಡಲಾಮೆಯೊಂದನ್ನು ಸ್ಥಳೀಯರು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದರು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಮೆಗೆ ಸಣ್ಣ ಪುಟ್ಟ ಗಾಯಗಳಾಗಿರುವುದರಿಂದ ಆಮೆಯ ಚಿಕಿತ್ಸೆಗೆ ಕುಂದಾಪುರದ ಕೋಡಿ ಕಡಲಾಮೆ ಸಂರಕ್ಷಣಾ (FSL) ಘಟಕಕ್ಕೆ ರವಾನಿಸಿದ್ದಾರೆ. ವರದಿ : ಈಶ್ವರ್ ಸಿ ನಾವುoದ
ಶ್ರೀ ಶೇಜೇಶ್ವರವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಡಿ,1): ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ,ಶಿವಪ್ಪನಾಯಕ ಅರಮನೆ ಶಿವಮೊಗ್ಗ ಇದರ ಸಹಾಯಕ ನಿರ್ದೇಶಕರು ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಧಾರವಾಡ ಇದರ ಉಪನಿರ್ದೇಶಕ(ಪ್ರಭಾರ)ರಾಗಿರುವ ಶ್ರೀ ಶೇಜೇಶ್ವರವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಡಾ.ಹನುಮನಾಯಕ ಇವರ ಮಾರ್ಗದರ್ಶನದಲ್ಲಿ “ಚಿತ್ರದುರ್ಗ ಜಿಲ್ಲೆಯ ಚಾರಿತ್ರಿಕ ಮತ್ತು ಸಾಂಸ್ಕೃತಿಕ ಭೂಗೋಳ ; ಒಂದು ಅಧ್ಯಯನ(ಪೂರ್ವ ಇತಿಹಾಸದ ಕಾಲದಿಂದ ಕ್ರಿ.ಶ 18ನೇ ಶತಮಾನದವರೆಗೆ)” ಎಂಬ ವಿಷಯದ ಕುರಿತು ಸಾದರಪಡಿಸಿದ […]
ನೈಕಂಬ್ಳಿ: ಸಂಭ್ರಮದ ಕಾರ್ತಿಕ ದೀಪೋತ್ಸವ
ಮಾರಣಕಟ್ಟೆ (ನ,30): ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿಯಲ್ಲಿ ಸಂಭ್ರಮದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನ,29ರಂದು ಜರುಗಿತು. ದೀಪೋತ್ಸವ ಪ್ರಯುಕ್ತ ರಾಘವೇಂದ್ರ ಭಜನಾ ಮಂಡಳಿಯವರಿಂದ ಭಜನೆ , ಮಹಾ ಮಂಗಳಾರತಿ ಹಾಗೂ ಅನ್ನಪ್ರಸಾದ ಸೇವೆ ನೆರವೇರಿತು. ಜೀರ್ಣೋದ್ಧಾರ ಸಮಿತಿ ಪ್ರಮುಖರು, ಪ್ರೇರಣಾ ಯುವ ವೇದಿಕೆ ಸದಸ್ಯರು, ಊರ ಗಣ್ಯರು ಉಪಸ್ಥಿತರಿದ್ದರು.
ಹೆಮ್ಮಾಡಿ:ಮನೆ ಮನೆ ಭಜನೆ ಕಾರ್ಯಕ್ರಮ
ಹೆಮ್ಮಾಡಿ(ನ,28): ಕುಂದಾಪುರ ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಕುಂದಾಪುರ, ವಂಡ್ಸೆ ವಲಯ ಭಜನಾ ಒಕ್ಕೂಟ ಹಾಗೂ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂಡಳಿ ಹೆಮ್ಮಾಡಿ ಸಹಯೋಗದಲ್ಲಿ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂಡಳಿ ಹೆಮ್ಮಾಡಿ ಯವರ 20 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಮನೆ ಮನೆ ಭಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮನೆ ಮನೆ ಭಜನೆ ಶ್ರೀ ರಾಮನಾಮ ಹರಿ ಸ್ಮರಣೆ, 108 ಮನೆಯಂಗಳದಲ್ಲಿ ಭಜನಾ ಕಾರ್ಯಕ್ರಮ ಮತ್ತು ಭಜನಾ ತಾಳ […]
ಗ್ರಾಮ ವಿಕಾಸ ಸಮಿತಿ ಪಡು ಗೋಪಾಡಿ : ಮನೆ ಮನೆ ಭಜನೆ ಕಾರ್ಯಕ್ರಮ
ಗೋಪಾಡಿ(ನ,25): ಗ್ರಾಮ ವಿಕಾಸ ಸಮಿತಿ ಪಡು ಗೋಪಾಡಿ ಆಯೋಜನೆಯಲ್ಲಿ ಮನೆ ಮನೆ ಭಜನೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕುಟುಂಬ ಪ್ರಬೋಧನ ಪ್ರಮುಖ್ ಗುರುರಾಜ್ ರಾವ್. ಕೋಟೇಶ್ವರ ರವರು ಇತ್ತೀಚೆಗೆ ಚಾಲನೆ ನೀಡಿದ್ದು, ಭಜನೆಯ ಮೂಲಕ ಜನರಲ್ಲಿ ಭಕ್ತಿ ಮತ್ತು ಧಾರ್ಮಿಕ ಶ್ರದ್ಧೆಯನ್ನು ಉದ್ದೀಪನಗೊಳಿಸುವ ನೆಲೆಯಲ್ಲಿ ಗೋಪಾಡಿ ಪಡು ಗ್ರಾಮ ವಿಕಾಸ ಸಮಿತಿಯ ಸಂಚಾಲಕ ಸುರೇಂದ್ರ ಸಂಗಮ್ ರವರ ನೇತೃತ್ವದಲ್ಲಿ ಮನೆ ಮನೆ ಭಜನೆ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದೆ. ಯಾವುದೇ ರೀತಿಯ ಹಣ […]
ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಸಮವಸ್ತ್ರ ವಿತರಣೆ
ಗಂಗೊಳ್ಳಿ(ನ ,20): ಇಲ್ಲಿನ ಸರಸ್ವತಿ ವಿದ್ಯಾಲಯ ಪ್ರೌಢಶಾಲಾ ಕನ್ನಡ ಮಾಧ್ಯಮ ವಿಭಾಗದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲ್ಲಿನ ಅಧ್ಯಾಪಕರ ಆರ್ಥಿಕ ಸಹಾಯದೊಂದಿಗೆ ಪ್ರತಿವರ್ಷದಂತೆ ಈ ಬಾರಿ ಕೂಡ ಉಚಿತವಾಗಿ ಸಮವಸ್ತ್ರಗಳನ್ನು ನೀಡಲಾಯಿತು. ಜಿ. ಎಸ್. ವಿ ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ಉಪಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಮತ್ತು ಅಧ್ಯಾಪಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲಾ ಆರಂಭದ ದಿನಗಳಲ್ಲಿ ಇಲ್ಲಿನ […]
ಕಾಳಾವರ ಷಷ್ಠಿ ಪ್ರಯುಕ್ತ ಪೂರ್ವಭಾವಿ ಸಭೆ
ಕಾಳಾವರ(ನ,20): ಕಾಳಾವರ ಶ್ರೀ ಮಹಾಲಿಂಗೇಶ್ವರ ಹಾಗೂ ಕಾಳಿಂಗ (ಸುಬ್ರಹ್ಮಣ್ಯ) ದೇವಸ್ಥಾನದ ವರ್ಷಂಪ್ರತಿ ನಡೆಯುವ ಷಷ್ಠಿ ಪ್ರಯುಕ್ತ ಪೂರ್ವಭಾವಿ ಸಭೆ ದೇವಸ್ಥಾನದ ವಠಾರದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಹೆಗ್ಡೆ ಶಾನಾಡಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಷಷ್ಠಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದ ಸಮಿತಿಯ 9 ಸದಸ್ಯರು ಅನಾವರಣಗೊಳಿಸಿದರು. ಶ್ರೀ ಚಂದ್ರಶೇಖರ ಹೆಗ್ಡೆ ಯವರು ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿ ಉತ್ಸವಕ್ಕೆ ಗ್ರಾಮಸ್ಥರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಪೊಲೀಸ್ […]
ಕೋಟಿಲಿಂಗೇಶ್ವರ ಕಲಾಬಳಗ (ರಿ.) ಕೋಟೇಶ್ವರ : ಕೊಡಿ ಹಬ್ಬದ ಪ್ರಯುಕ್ತ ಯಕ್ಷಗಾನ – ಕೌಸಲ್ಯಾ ವಿವಾಹ
ಕೋಟೇಶ್ವರ (ನ, 17) : ಕುಂದಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಕೋಟೇಶ್ವರದ ಕೋಟಿಲಿಂಗೇಶ್ವರ ದೇವಳದ ವಾರ್ಷಿಕ ರಥೋತ್ಸವ – ಕೊಡಿ ಹಬ್ಬದ ಅಂಗವಾಗಿ ನ,20 ರ ರಾತ್ರಿ 8 ಗಂಟೆಗೆ ಕೋಟಿಲಿಗೇಶ್ವರ ದೇವಸ್ಥಾನದ ಸದಾನಂದ ರಂಗಮಂಟಪದಲ್ಲಿ ಕೋಟಿಲಿಂಗೇಶ್ವರ ಕಲಾಬಳಗ (ರಿ.) ಇವರಿಂದ ಯಕ್ಷಗಾನ ದಿವಂಗತ ಎಮ್. ಜಿ ಬರವಣಿ ವಿರಚಿತ ಯಕ್ಷಗಾನ ಗುರುಗಳಾದ ಕಡ್ಲೆ ಗಣಪತಿ ಹೆಗ್ಡೆ ನಿರ್ದೇಶನದಲ್ಲಿ –“ಕೌಸಲ್ಯಾ ವಿವಾಹ” ಪ್ರಸಂಗ ಪ್ರದರ್ಶನ ಗೊಳ್ಳಲಿದೆ. ಹಿಮ್ಮೇಳದ ಭಾಗವತಿಕೆಯಲ್ಲಿ ಹೆಸರಾಂತ […]










