ಉಡುಪಿ (ಸೆ,7): ಹಸಿದವರ ಬಾಳಿನ ಆಶಾಕಿರಣವಾಗಿರುವ ಉಡುಪಿ ಹೆಲ್ಪ್ ಲೈನ್ (ರಿ) ಇದರ 4ನೇಯ ವರ್ಷದ ಸಂಭ್ರಮದ ಕಾರ್ಯಕ್ರಮ ಆಗಸ್ಟ್,28 ರಂದು ಅನಾಥ ಮಕ್ಕಳ ಬಾಳಿನ ಆಶಾ ಕಿರಣವಾದ ಸಂತೆಕಟ್ಟೆಯ ಕೃಷ್ಣಾನುಗ್ರಹ ಅನಾಥಾಶ್ರಮದಲ್ಲಿ ಆಚರಿಸಲಾಯಿತು. ಆ ಪ್ರಯುಕ್ತ ಆಶ್ರಮದ ಮಕ್ಕಳಿಗೆ ಊಟ,ಉಪಹಾರ ಹಾಗೂ ಹಣ್ಣು ಹಂಪಲು ಗಳನ್ನು ವಿತರಿಸಲಾಯಿತು. ಹಾಗೆಯೇ ಕೆ.ಜಿ ರೋಡ್ ಸಮೀಪ ಸುಬ್ರಹ್ಮಣ್ಯ ಆಚಾರ್ಯರವರ ತಾಯಿಗೆ ಆಹಾರ ಸಾಮಗ್ರಿಗಳ ಕಿಟ್ ನೀಡಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕ […]
Category: ಜಿಲ್ಲಾ ಸುದ್ದಿ
ಸುದ್ದಿ ಸಮಾಚಾರ — > ಜಿಲ್ಲಾ ಸುದ್ದಿ
ಶಿಕ್ಷಕರ ದಿನಾಚರಣೆ: ಶಿಕ್ಷಕ ಶೇಖರ್ ಶೆಟ್ಟಿ ಮಟಪಾಡಿಯವರಿಗೆ ಸನ್ಮಾನಿಸಿದ ಶಿಷ್ಯೆ ಶೈನಾ ಕಲ್ಯಾಣಪುರ
ಕಲ್ಯಾಣಪುರ(ಸೆ,07): ಗುರು ಮಾಡಿದ ಪಾಠವು ವರವಾಗಿ ನನ್ನ ಸಾಧನೆಗೆ ಮೆಟ್ಟಿಲಾಗಿ ನಿಂತ ಕ್ಷಣವನ್ನು ನೆನಪಿಸಿ ಶಿಕ್ಷಕರ ದಿನಾಚರಣೆಯೆಂದು ತವರು ಮನೆ ಟ್ರಸ್ಟ್ ನ ಸಂಸ್ಥಾಪಕಿ ಶೈನಾ ಕಲ್ಯಾಣಪುರ ತನ್ನ ಶಿಕ್ಷಕ ಶೇಖರ್ ಶೆಟ್ಟಿ ಮಟಪಾಡಿಯವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು. 6 ನೇ ತರಗತಿಯಲ್ಲಿ ತಾನು ಕಲಿತ ಪಾಠದ ವಿಷಯಗಳಾದ ಸತಿ ಪದ್ಧತಿ, ಹೆಣ್ಣು ಮಕ್ಕಳ ಶೋಷಣೆ, ಭ್ರೂಣ ಹತ್ಯೆ, ಲೈಂಗಿಕ ಶೋಷಣೆ ಇದರ ಬಗ್ಗೆ ಸಮಾಜ ವಿಜ್ಞಾನದ ಶಿಕ್ಷಕರಾದ ಶೇಖರ್ ಶೆಟ್ಟಿ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಶಿಕ್ಷಕರ ದಿನಾಚರಣೆ
ಕುಂದಾಪುರ(ಸೆ,5): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕುಂದಾಪುರ ತಾಲೂಕಿನ ಹೊಂಬಾಡಿಯ ನಿವೃತ್ತ ಶಿಕ್ಷಕರಾದ ಶ್ರೀ ಸಚ್ಚಿದಾನಂದ ಹೆಗ್ಡೆ ದಂಪತಿಯವರನ್ನು ಕ್ಲಬ್ ನ ಅಧ್ಯಕ್ಷರಾದ ಲ. ಜಯಶೀಲ ಶೆಟ್ಟಿ ಕಂದಾವರ ಇವರಿಗೆ ಸನ್ಮಾನಿಸುವ ಮೂಲಕ ಆಚರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು. ಪ್ರತಿಯೊಬ್ಬ ಶಿಕ್ಷಕರು ತಮ್ಮ ವೃತ್ತಿಯ ಬಗ್ಗೆ ಅಪಾರ ಗೌರವ ಹಾಗೂ ಅಭಿಮಾನ ಹೊಂದಿರುತ್ತಾರೆ. ಅಲ್ಲದೆ ಸಂಘ […]
ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ: 41ನೇ ತುರ್ತು ಚಿಕಿತ್ಸಾ ನೆರವು ಯೋಜನೆ-ಸಹಾಯಧನ ಹಸ್ತಾಂತರ
ಕೋಟ( ಸೆ.06) : ನೊಂದವರಿಗೆ ನೆರವಿನ ದಾರಿ ದೀಪ ವಾಗಿರುವ ಕುಂದಾಪುರದ ಜೈ ಕುಂದಾಪ್ರ ಸೇವಾ ಟ್ರಸ್ಟ್ ಬಹುಬಗೆಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿವುದರ ಜೊತೆಗೆ ನೊಂದವರಿಗೆ ಸಹಾಯ ಹಸ್ತ ಚಾಚಲು ಅರ್ಥಪೂರ್ಣ ಯೋಜನೆಗಳನ್ನು ಹಾಕಿಕೊಂಡಿದೆ. ಆ ನಿಟ್ಟಿನಲ್ಲಿ ಟ್ರಸ್ಟ್ ನ 41ನೇ ತುರ್ತು ಚಿಕಿತ್ಸಾ ನೆರವು ಯೋಜನೆ-ಸಹಾಯ ಧನ ಹಸ್ತಾಂತರ ಕಾರ್ಯಕ್ರಮ ಸಪ್ಟೆಂಬರ್, 5 ರಂದು ನೆರವೇರಿತು. ಗುರುಪ್ರಸಾದ್ ಎನ್ನುವ ವ್ಯಕ್ತಿ ಟಿಪ್ಪರ್ ಲಿಫ್ಟ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಟಿಪ್ಪರ್ […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ: ಸ್ವಚ್ಛ ಸರ್ವೇಕ್ಷಣ ಜನಾಂದೋಲನ -2021
ಶಿರ್ವ(ಸೆ.4): ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ‘ಸ್ವಚ್ಛ ಸರ್ವೆಕ್ಷಣ ಗ್ರಾಮೀಣ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛತೆ, ಸುಚಿತ್ವ ಮತ್ತು ನೈರ್ಮಲ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಷ್ಟ್ರ ವ್ಯಾಪಿ ಚಾಲನೆಯಲ್ಲಿರುವ ಈ ಯೋಜನೆಯನ್ನು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಎನ್.ಸಿ.ಸಿ, ಎನ್.ಎಸ್.ಎಸ್, ಹಾಗು ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ವಚ್ಚತೆ […]
ಹ್ರದಯವಂತ, ವಿಭಿನ್ನ ವೇಷಧಾರಿ, ಸಮಾಜ ಸೇವಕ ರವಿ ಜಿ. ಕಟಪಾಡಿ
ಸಹಾಯ ಮತ್ತು ಸಮಾಜ ಸೇವೆಯನ್ನು ಹೀಗೂ ಮಾಡಬಹುದೆಂಬ ಇವರ ವಿಶಿಷ್ಟ ಪರಿಕಲ್ಪನೆಗೆ ಮೊದಲು ನಾವು ಅಭಿನಂದನೆ ಸಲ್ಲಿಸಬೇಕು. ಸಹಾಯವೆಂಬ ಶಬ್ದ ಬಂದಾಗ ಮೊದಲಿಗೆ ನಮಗೆ ಹೊಳೆಯುವುದೇ ಧನಸಹಾಯ. ಯಾರಿಗಾದರೂ ಧನ ಸಹಾಯ ಮಾಡುವುದಾದರೆ ನಮ್ಮಲ್ಲಿ ಹಣವನ್ನು ಕ್ರೋಢಿಕರಿಸಲು ಬೇಕಾದ ಮಾರ್ಗವನ್ನು ಹುಡುಕಬೇಕಾಗುತ್ತದೆ. ನಮ್ಮಲ್ಲಿ ಹಣ ಇಲ್ಲದೆ ಬೇರೆಯವರಿಗೆ ನಾವು ಧನಸಹಾಯ ಮಾಡುವುದಾದರೂ ಹೇಗೆ? ಈ ಪ್ರಶ್ನೆ ಹಲವು ಸಮಾಜ ಸೇವಕರನ್ನು ಕಾಡುತ್ತಿರುತ್ತದೆ. ಜೊತೆಗೆ ಅವರ ಪ್ರಯತ್ನ ನಿರಂತರವಾಗಿರುತ್ತದೆ. ಆ ನಿಟ್ಟಿನಲ್ಲಿ ಧನಸಹಾಯ […]
ಎಕ್ಸಲೆಂಟ್ ಕಾಲೇಜು ಕುಂದಾಪುರ :ಮೊಬೈಲ್ ಆ್ಯಪ್ ಲೋಕಾರ್ಪಣೆ
ಕುಂದಾಪುರ(ಸೆ.02): ಸುಜ್ಞಾನ ಎಜುಕೇಶನ್ ಟ್ರಸ್ಟ್ ಮೂಡುಬಿದಿರೆ ಇದರ ನೂತನ ಆಡಳಿತದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಕ್ಸಲೆಂಟ್ ಇಂಡಿಯನ್ ಸ್ಕೂಲ್ ಮತ್ತು ಪಿ.ಯು ಕಾಲೇಜು ವಿದ್ಯಾರ್ಥಿಗಳು ಮತ್ತು ಪೋಷಕರ ಅನುಕೂಲಕ್ಕಾಗಿ ಎಕ್ಸಲೆಂಟ್ ಆ್ಯಪ್ ಅನ್ನು ಹೊರತಂದಿದ್ದು ವಿಧಾನ ಪರಿಷತ್ನ ಸದಸ್ಯರಾಗಿರುವ ಶ್ರೀ ಎಸ್ ಎಲ್ ಭೋಜೆಗೌಡರವರು ಆಗಸ್ಟ್ 29 ರಂದು ನಡೆದ ಸರಳ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಆ್ಯಪ್ ಲೋಕಾರ್ಪಣೆಗೊಳಿಸಿ ಮಾತನಾಡಿದ ಭೋಜೆಗೌಡರು ಅಪಾರ ಅನುಭವವುಳ್ಳ ಡಾ. ರಮೇಶ ಶೆಟ್ಟಿ ತಂಡಕ್ಕೆ ಶುಭವಾಗಲಿ ಮತ್ತು ತಂಡದ ಪ್ರಯತ್ನಕ್ಕೆ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಶ್ರೀಕೃಷ್ಣಜನ್ಮಾಷ್ಟಮಿ ಸಂಭ್ರಮ
ವಂಡ್ಸೆ (ಆ, 30) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ಇದರ ಕೊಲ್ಲೂರು ವಲಯ ಹೊಸೂರು ಕಾರ್ಯಕ್ಷೇತ್ರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಸಂಭ್ರಮದಿಂದ ಹೊರ್ಲಾಡಿ ಕೆರೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಚರಿಸಲಾಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಲಯ ಒಕ್ಕೂಟಗಳ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು ಹಾಗೂ ಬೈಂದೂರು ತಾಲೂಕು ಯೋಜನಾಧಿಕಾರಿ ಶ್ರೀಮತಿ ಶಶಿರೇಖಾ ಪಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಶ್ರೀಕೃಷ್ಣಜನ್ಮಾಷ್ಟಮಿಯ ಮಹತ್ವವನ್ನು ತಿಳಿಸಿದರು. ಜೊತೆಗೆ ಇಡೂರು […]
ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್ ನೇಮಕ
ಉಡುಪಿ (ಆ, 30) : ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮರಾವ್ ರವರನ್ನು ನೇಮಕ ಮಾಡಲಾಗಿದೆ.ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ಅವರನ್ನು ವರ್ಗಾವಣೆಗೊಳಿಸಿದ ರಾಜ್ಯ ಸರಕಾರ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ
ಗಂಗೊಳ್ಳಿ (ಆ, 27) : ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ವತಿಯಿಂದ ಎಸ್ ಎಂ ಗೋಪಾಲಕೃಷ್ಣ ಬೆಳ್ಳಾರೆ ಪ್ರಾಯೋಜಕತ್ವದಲ್ಲಿ, ಪೈ ಟೆಕ್ಸ್ ಟೈಲ್ಸ್ ಮತ್ತು ಪೈ ಗಾರ್ಮೆಂಟ್ಸ್ ಗಂಗೊಳ್ಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ. 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಕಲಿಯುತ್ತಿರುವ ಉಡುಪಿ ಜಿಲ್ಲಾ ವ್ಯಾಪ್ತಿಯ ಕಾಲೇಜಿನ ವಿದ್ಯಾರ್ಥಿಗಳು ಮಾತ್ರ […]