ಕುಂದಾಪುರ (ಸೆ.08): ವಿದ್ಯಾರ್ಥಿ ಬದುಕಿನಲ್ಲಿ ಕನಸು ಕಾಣುವುದರ ಜೊತೆಗೆ ಅವಿರತ ಪ್ರಯತ್ನ ಇದ್ದಲ್ಲಿ ಮಾತ್ರ ಬದುಕು ರೂಪಿಸಿಕೊಳ್ಳಲು ಸಾಧ್ಯ. ಈ ಹಂತದಲ್ಲಿ ಕಾಣುವ ಕನಸೇ ನಿಮ್ಮಲ್ಲಿನ ಪ್ರತಿಭೆ ಹಾಗೂ ಸೃಜನಶೀಲತೆಗೆ ಉತ್ತೇಜನ ನೀಡುವುದು ಹೀಗಾಗಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕ್ರಿಯಾಶೀಲ ವಿದ್ಯಾರ್ಥಿಗಳ ಬೆಳವಣಿಗೆಗೆ ಸೇತುವೆಯಾಗಲಿ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ವೈದ್ಯರು ಹಾಗೂ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಡಾ| ಅಸೋಡು ಅನಂತರಾಮ ಶೆಟ್ಟಿಯವರು ಹೇಳಿದರು. ಅವರು ಇಲ್ಲಿನ ಡಾ| ಬಿ. […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಎನ್.ಎಸ್.ಎಸ್. ಘಟಕದ ವತಿಯಿಂದ ನಿರ್ಮಲ ನಗರ ಅಭಿಯಾನ
ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಪುರಸಭೆಯ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಪಖ್ವಾಡಾ ಕಾರ್ಯಕ್ರಮದಡಿಯಲ್ಲಿ ನಿರ್ಮಲ ನಗರ ಅಭಿಯಾನ ನಡೆಯಿತು. ಕುಂದಾಪುರ ಸಿಟಿ ಜೆಸಿಐನ ಸ್ಥಾಪಕಾಧ್ಯಕ್ಷ ಶ್ರೀ ಹುಸೇನ್ ಹೈಕಾಡಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪನ್ಯಾಸಕರಾದ ಶ್ರೀ ರಂಜಿತ್ ಟಿ.ಎನ್., ಪ್ರವೀಣ್ ಮೊಗವೀರ ಗಂಗೊಳ್ಳಿ, […]
ಡಾ|ಬಿ.ಬಿ.ಹೆಗ್ಡೆ ಕಾಲೇಜು : ಪರಿಸರ -‘ನಮಗೊಂದಿಷ್ಟು ಉಳಿಸಿ’ – ಬೀದಿ ನಾಟಕ ಪ್ರದರ್ಶನ
ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಪುರಸಭೆಯ ಜಂಟಿ ಆಶ್ರಯದಲ್ಲಿ ನಗರದ ತಾಲೂಕ್ ಪಂಚಾಯತ್ ಮುಂಭಾಗ ಮತ್ತು ಕುಂದಾಪುರದ ಸಂತೆ ಮಾರುಕಟ್ಟೆಯಲ್ಲಿ ಪರಿಸರ – ‘ನಮಗೊಂದಿಷ್ಟು ಉಳಿಸಿ’ ಬೀದಿ ನಾಟಕ ಪ್ರದರ್ಶನ ನಡೆಯಿತು. ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆ ಕುರಿತ ಈ ಬೀದಿ ನಾಟಕವನ್ನು ಅಂತಿಮ ಬಿ.ಸಿ.ಎ. ವಿದ್ಯಾರ್ಥಿ ದೇವಿಪ್ರಸಾದ್ ಶೆಟ್ಟಿ ರಚಿಸಿ, ಅಂತಿಮ ಬಿ.ಎಸ್ಸಿ. […]
ರಾಷ್ಟ್ರಮಟ್ಟದ ಕರಾಟೆಯಲ್ಲಿ ಎಚ್. ಎಮ್.ಎಮ್ ಶಾಲೆಯ ವಿದ್ಯಾರ್ಥಿಗಳು
ಕುಂದಾಪುರ (ಸೆ.7) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿಗಳು ಬುಡೋಕಾನ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾದ ವತಿಯಿಂದ ಆಯೋಜಿಸಲ್ಪಟ್ಟರಾಷ್ಟ್ರಮಟ್ಟದ ಕರಾಟೆ ಓಪನ್ ಚಾಂಪಿಯನ್ ಲೀಗ್ ಬ್ಲಾಸ್ಟ್ – 2023 ರಲ್ಲಿ ಭಾಗವಹಿಸಿ, ಹಲವು ಪದಕಗಳನ್ನು ಪಡೆದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಪ್ರತೀಕ್ ಕುಮಿಟೆ ಮತ್ತು ಕಟಾದಲ್ಲಿ ಪ್ರಥಮ, ಆರ್ಯನ್ ಕೆ ಪೂಜಾರಿ ಕುಮಿಟೆಯಲ್ಲಿ ಪ್ರಥಮಮತ್ತು ಕಟಾದಲ್ಲಿ ದ್ವಿತೀಯ, ಅರ್ನೋನ್ ಕುಮಿಟೆಯಲ್ಲಿ ಪ್ರಥಮ […]
ಏಷಿಯನ್ ಜೂನಿಯರ್ ಗರ್ಲ್ಸ್ ಚೆಸ್ ಚಾಂಪಿಯನ್ಶಿಪ್: ಭಾರತವನ್ನು ಪ್ರತಿನಿಧಿಸುತ್ತಿರುವ ಡಾ| ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ
ಕುಂದಾಪುರ (ಸೆ,7): ಮಂಗಳೂರು ವಿ.ವಿಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಕುಂದಾಪುರದ ಡಾ|ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಸಿಎ ವಿದ್ಯಾರ್ಥಿನಿ ದಿವ್ಯಾರವರು ಟಾಟಾ ಸ್ಟೀಲ್ ಏಷಿಯನ್ ಜೂನಿಯರ್ ಗರ್ಲ್ಸ್ ಚೆಸ್ ಚಾಂಪಿಯನ್ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜಾರ್ಖಂಡ್ ರಾಜ್ಯದ ಜೇಮ್ ಶೆಡ್ ಪುರದಲ್ಲಿ ಸೆಪ್ಟೆಂಬರ್ 7ರಿಂದ 16ರ ತನಕ ಈ ಚಾಂಪಿಯನ್ಶಿಪ್ ನಡೆಯಲಿದೆ. ಮಂಗಳೂರು ವಿ.ವಿ ಅಕಾಡೆಮಿಕ್ ಕೌನ್ಸಿಲ್ ನ ವಿದ್ಯಾರ್ಥಿ ಪ್ರತಿನಿಧಿಯಾಗಿ ಗುರುತಿಸಿಕೊಂಡಿರುವ ಇವರು ರಾಷ್ಟ್ರಮಟ್ಟದ ಹಾಗೂ […]
ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ : ಶಿಕ್ಷಕ ವೃತ್ತಿ ಪರಮ ಪವಿತ್ರವಾದದ್ದು- ಪ್ರೊ.ಬಿ.ಪದ್ಮನಾಭಗೌಡ
ಕಾರ್ಕಳ(ಸೆ,6): ಶಿಕ್ಷಕ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ ಪ್ರಯುಕ್ತ ಆಚರಿಸಲಾದ ‘ಗುರುದೇವೋ ಭವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಇನ್ನೋರ್ವ ಅತಿಥಿ ಚೇತನಾ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಶೆಟ್ಟಿ ಮಾತನಾಡಿ ಗುರುಗಳೆಂದರೆ ಅಪಾರ […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರ ದಿನಾಚರಣೆ
ಕುಂದಾಪುರ (ಸೆ,06) : ಶ್ರೀ ಬಿ.ಎಂ.ಸುಕುಮಾರ್ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರಿಗೆ ಪುಷ್ಪಾರ್ಚನೆಗೈದು ಆರತಿ ಬೆಳಗಿ ವಂದಿಸಿದರು. ಮಕ್ಕಳ ನೃತ್ಯ ಮತ್ತು ಅಭಿನಯ ಕಾರ್ಯಕ್ರಮದ ಮೆರುಗನ್ನು ಇಮ್ಮಡಿಗೊಳಿಸಿತು. ನಂತರ ಬೋಧಕೇತರ ಸಿಬ್ಬಂದಿಗಳಿಂದ ಶಿಕ್ಷಕರಿಗಾಗಿ ಅನೇಕ ಕ್ರೀಡೆಗಳೂ ಕೂಡ ಏರ್ಪಟ್ಟವು. ಹಾಗೆಯೇ ಜಿಲ್ಲಾ ಮಟ್ಟದ ಗೀತಗಾಯನ […]
ಚೆಸ್ – ಎಚ್.ಎಮ್.ಎಮ್.ವಿ.ಕೆ.ಆರ್ ನ ಶ್ರೀನಿತ್ ಶೇಟ್ ಪ್ರಥಮ
ಕುಂದಾಪುರ (02.09.2023): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್, ಶ್ರೀ ನಾರಾಯಣ ಗುರು ಚೆಸ್ ಸ್ಕೂಲ್, ಉಡುಪಿ ಯಲ್ಲಿ ಆಯೋಜಿಸಲ್ಪಟ್ಟ ಏಳರ ವಯೋಮಿತಿಯ ರಾಪಿಡ್ ಚೆಸ್ ಟೂರ್ನಮೆಂಟ್ 2023 ರಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ವಿಜೇತನಾಗಿರುತ್ತಾನೆ. ಈತ ಕುಂದಾಪುರದ ಗ್ರಾಫಿಕ್ ಡಿಸೈನರ್ ಆಗಿರುವ ಶ್ರೀಕಾಂತ್ ಶೇಟ್ ಮತ್ತು ಸ್ವಪ್ನ ಪ್ರಿಯ ದಂಪತಿಯ ಪುತ್ರ. ವಿಜೇತ ಶ್ರೀನಿತ್ […]
ಡಾ.ಗಣೇಶ್ ಗಂಗೊಳ್ಳಿ ಯವರಿಗೆ ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿ
ಕುಂದಾಪುರ (ಸೆ,06): ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ .09 ರಂದು ಧಾರವಾಡ ನುಡಿ ಸಡಗರ ಕಾರ್ಯಕ್ರಮದಲ್ಲಿ ನಾಡಿನ ಪ್ರಸಿದ್ಧ ಗಾಯಕ ಹಾಗೂ ಸಂಘಟಕ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ . ಈ ಕುರಿತು ಕಾರ್ಯಕ್ರಮದ ಸಂಯೋಜಕರಾದ ಶ್ರೀ ಚಂದ್ರಶೇಖರ್ ಮಾದಲಾಗೆರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಯುವ ಬಂಟರ ಸಂಘದ ವತಿಯಿಂದ ಗುರುವಂದನಾ ಕಾರ್ಯಕ್ರಮ
ಕುಂದಾಪುರ(ಸೆ, 5): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಂಜಯ ಗಾಂಧಿ ಪ್ರೌಢಶಾಲೆಯ ನಿವೃತ್ತ ಸಹ ಶಿಕ್ಷಕರಾದ ಶ್ರೀ ಎಚ್. ಲಕ್ಷ್ಮೀನಾರಾಯಣ ಶೆಟ್ಟಿಯವರನ್ನು ಕಾಳಾವರದ ಸ್ವಗ್ರಹದಲ್ಲಿ ಯುವ ಬಂಟರ ಸಂಘದ ದತ್ತಿನಿಧಿ ಪೋಷಕರಾದ ಶ್ರೀ ಹುಂತ್ರಿಕೆ ಸುಧಾಕರ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಡಾ. ಬಿ .ಬಿ ಹೆಗ್ಡೆ ಕಾಲೇಜಿನ ಕನ್ನಡ […]










