ಉಡುಪಿ ( ಆ,18): ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ಬೆಂಗಳೂರಿನ ಬಸವನ ಗುಡಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಈಜು ಸ್ಪರ್ಧೆಯಲ್ಲಿ 400 ಮೀ ಇಂಡ್ ಮಿಡ್ಲೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿಧ್ಯಾರ್ಥಿನಿಯಾದ ಕುಮಾರಿ ಭೂಮಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳದ ಶ್ರೀ ಕೆ. ವಿ ಪ್ರವೀಣ್ ಹಾಗೂ ಶ್ರೀಮತಿ ದೀಪ್ತಿ ಪ್ರಭು […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಡಾ. ಬಿ ಬಿ ಹೆಗ್ಡೆ ಕಾಲೇಜು : ರತನ್ ಟಾಟಾರವರಿಗೆ ನುಡಿ ನಮನ
ಕುಂದಾಪುರ ( ಆ ,18): ಇಲ್ಲಿನ ಡಾ . ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಇನ್ನೋವೇಶನ್ ಮತ್ತು ಎಂಟ್ರಪ್ರಿನಿಯರ್ಶಿಪ್ ಡೆವಲಪ್ಮೆಂಟ್ ಸೆಲ್ ಆಶ್ರಯದಲ್ಲಿ, ಭಾರತ ಕಂಡ ಶ್ರೇಷ್ಠ ಉದ್ಯಮಿ ಶ್ರೀ ರತನ್ ಟಾಟಾರವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಹಿನ್ನೆಲೆಯಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪ್ರಥಮ ಬಿ.ಕಾಂ. ವಿದ್ಯಾರ್ಥಿ ಕೃಷ್ಣ ಅವರು ರಚಿಸಿದ ಟಾಟರವರ ಭಾವಚಿತ್ರಕ್ಕೆ ವಿದ್ಯಾರ್ಥಿಗಳೇ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದ […]
ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ಕ್ರೀಡಾ ಚಟುವಟಿಕೆ ಉದ್ಘಾಟನೆ
ಕುಂದಾಪುರ( ಆ,18): ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಘಟಕದ ವತಿಯಿಂದ ವಾರ್ಷಿಕ ಕ್ರೀಡಾ ಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಾಮನ್ ವೆಲ್ತ್ ನ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಶ್ರೀ ಸತೀಶ್ ಖಾರ್ವಿರವರು ಆಗಮಿಸಿ ‘ಪ್ರತಿಯೊಬ್ಬ ವಿದ್ಯಾರ್ಥಿಯು ಮೊಬೈಲ್ ಬಳಕೆಯಿಂದ ದೂರ ಸರಿದು ಹೆಚ್ಚು ಸಮಯವನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರಧ್ವಜವನ್ನು ರಾಷ್ಟ್ರಗೀತೆಯೊಂದಿಗೆ ತನ್ನ ಹೆಗಲಿನ ಮೇಲೆ ಹೊದಿಸಿಕೊಂಡು ವಿಜಯ ವೇದಿಕೆ ಏರಬೇಕು’ […]
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ
ಹೆಮ್ಮಾಡಿ( ಆ,18): ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬೆಳಗಾವಿ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿಪೂರ್ವ ವಿಭಾಗ) ಬೆಳಗಾವಿ,ಶಾಂತಿನಿಕೇತನ ಪದವಿಪೂರ್ವ ಕಾಲೇಜು ಖಾನಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ,ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಕ್ಕೆ ಆಯ್ಕೆಯಾದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಒಟ್ಟು 7 ವಿದ್ಯಾರ್ಥಿಗಳು ಪದಕಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿದ್ದಾರೆ. ಬಾಲಕಿಯರ 70ಕೆ.ಜಿ.ವಿಭಾಗದಲ್ಲಿ ವಿದ್ಯಾರ್ಥಿನಿ […]
ಅ. 19 ರಂದು ಕಲಾಕ್ಷೇತ್ರದಲ್ಲಿ ಕಲ್ಯಾಣೋತ್ಸವ- ಯಕ್ಷಗಾನ ವೈಭವ
ಬೆಂಗಳೂರು (ಆ,18): ಕಲಾಕ್ಷೇತ್ರ ಯಕ್ಷಮಿತ್ರ ಬಳಗ ಬೆಂಗಳೂರು ಇವರ ಪ್ರಸ್ತುತಿಯಲ್ಲಿ ಸಾವಿತ್ರಿ ವೈಜಯಂತಿ ಗಿರಿಜಾ ಈ ಅಪರೂಪದ ಪೌರಾಣಿಕ ಯಕ್ಷಗಾನ ಪ್ರದರ್ಶನ ಬೆಂಗಳೂರಿನ ಯಕ್ಷ ಕೈಲಾಸವೆಂದು ಪ್ರಖ್ಯಾತಿ ಪಡೆದ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷ ನಕ್ಷತ್ರ ಟ್ರಸ್ಟ್ ಕಿರಾಡಿ (ರಿ) ಇವರ ಸಂಯೋಜನೆಯಲ್ಲಿ ಸುಪ್ರಸಿದ್ಧ ಕಲಾವಿದರು ಮತ್ತು ಅತಿಥಿ ಕಲಾವಿದರ ಸಂಗಮದಲ್ಲಿ ಅಕ್ಟೋಬರ್ 19 ರ ರಾತ್ರಿ 9:30ಕ್ಕೆ ನಡೆಯಲಿದೆ. ಯಕ್ಷಗಾನ ಕಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಈ […]
ಸೋಮಶೇಖರ್ ಖಾರ್ವಿಯವರಿಗೆ ಬೆಸ್ಟ್ ಪೋಸರ್ ಪ್ರಶಸ್ತಿ
ಕುಂದಾಪುರ (ಅ. 15): ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಬಾಡಿಬಿಲ್ಡಿಂಗ್ ಸ್ಪರ್ಧೆಯ 60 ಕೆಜಿ ವಿಭಾಗದಲ್ಲಿ ಭಾಗವಹಿಸಿದ ಸೋಮಶೇಖರ್ ಖಾರ್ವಿ ಕಂಚುಗೋಡುರವರು ಬೆಸ್ಟ್ ಪೊಸರ್ ಪ್ರಶಸ್ತಿ ಪಡೆದಿದ್ದಾರೆ. ಈಗಾಗಲೇ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಸೋಮಶೇಖರ ಖಾರ್ವಿ ಯವರು ಮಿಸ್ಟರ್ ಇಂಡಿಯಾ ಆಗುವ ಕನಸನ್ನು ಹೊಂದಿದ್ದಾರೆ.
ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಪಂದ್ಯಾವಳಿ: ಮಾಸ್ಟರ್ ಶ್ರೀಶ ಗುಡ್ರಿ ಹಾಗೂ ಸಂಭ್ರಮ್ ಎಸ್ ಗುಡ್ರಿ ಉತ್ತಮ ಸಾಧನೆ
ಕುಂದಾಪುರ (ಅ,13): ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (R) ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 11 ರಿಂದ 12 ತನಕ ಬೆಂಗಳೂರಿನ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ, ಡಾ.ಪುನೀತ್ ರಾಜ್ಕುಮಾರ್ ಮೈದಾನ, ವೆಂಕಟೇಶ್ವರಪ್ಪ ಲೇಔಟ್ ಇಲ್ಲಿ ನಡೆದ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಗುರುತಿಸಲ್ಪಟ್ಟ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿಯಿಂದ ಆಯೋಜಿಸಲಾದ 7 ನೇ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ […]
ಭಾಮಾ ಅಸೋಸಿಯೇಟ್ಸ್ ಸಂಸ್ಥೆಯ ವೈಬ್ ಸೈಟ್ ಅನಾವರಣ
ಕುಂದಾಪುರ( ಆ,13): ಭಾಮಾ ಅಸೋಸಿಯೇಟ್ಸ್ ಸಂಸ್ಥೆಯ ವೈಬ್ ಸೈಟ್ ಅನಾವರಣ ಕಾರ್ಯಕ್ರಮ ಕುಂದಾಪುರದ ಸಾಯಿ ಸೆಂಟರ್ ಬಿಲ್ಡಿಂಗ್ ನಲ್ಲಿ ಅಕ್ಟೋಬರ್, 11 ರಂದು ಅನಾವರಣಗೊಂಡಿತು. ಈ ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರು ಇದರ ಆಡಳಿತ ಮೊಕ್ತೇಸರರು ಹಾಗೂ ಮಾಜಿ ಶಾಸಕರಾದ ಶ್ರೀ ಬಿ.ಅಪ್ಪಣ್ಣ ಹೆಗ್ಡೆ ವಹಿಸಿದ್ದರು. ಉಡುಪಿ ಜಿಲ್ಲೆಯ ಪರಿಸರ ಇದೊಂದು ವಿನೂತನ ಪ್ರಯೋಗ ಈಗಿನ ಕಾಲಕ್ಕೆ ತಕ್ಕಂತೆ ಹೊಸ ಆಲೋಚನೆಗಳ ಮೂಲಕ ಭಾಮಾ […]
ಎಚ್ ಎಮ್ ಎಮ್ & ವಿ ಕೆ . ಅರ್ ಆಂಗ್ಲ ಮಾಧ್ಯಮ ಶಾಲೆಯ ಶ್ರಾವ್ಯಾ ಚೆಸ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಆ,11): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯಾ, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ 4ನೇ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ರವರ ಮಾರ್ಗದರ್ಶನ ಮತ್ತು […]
ಹಾರ್ಡ್ ಬಾಲ್ ಕ್ರಿಕೆಟ್ : ವಿ. ಕೆ. ಆರ್. ಆಂಗ್ಲ ಪ್ರೌಢ ಶಾಲೆಯ ವಿದ್ಯಾರ್ಥಿ ಆದಿತ್ಯ ರಾಜ್ಯ ಮಟ್ಟಕ್ಕೆ
ಕುಂದಾಪುರ:( ಆ,11): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಆದಿತ್ಯ ಅಜಯ್, ಮೈಸೂರು ವಿಭಾಗೀಯ ಮಟ್ಟದ 17ರ ವಯೋಮಾನದ ಬಾಲಕರ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ, ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಸಂಸ್ಥೆಯ ಪ್ರಾಂಶುಪಾಲೆ ಡಾ. […]