ಉಡುಪಿ( ಜ,3): ಉಡುಪಿ ತಾಲೂಕು ಶಿರಿಬೀಡು ಪಂಚಾಯತ್ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ದಾಸ ಸೇರಿಗಾರ್ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಅಭಿಯಾನದ ಅಡಿಯಲ್ಲಿ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಜನವರಿ .01 ರಂದು ಜರುಗಿತು. ” ಸ್ವರಾಜ್ಯ 75″ ಸಂಘಟನೆಯ 22ನೇ ಮನೆ ಯಲ್ಲಿ ರಾಷ್ಟ್ರೀಯ ಚಿಂತನೆಯ ಲೇಖಕರು ಪ್ರಖರ ವಾಗ್ಮಿಯಾಗಿರುವ ಶ್ರೀ ಪ್ರಕಾಶ್ ಮಲ್ಪೆಯವರೊಂದಿಗೆ ದಾಸ್ ಸೇರಿಗಾರ್ ಒಡನಾಟ ಹೊಂದಿರುವ ಸಂಜೀವ ಸೇರಿಗಾರ್ ಇವರು ನಾಮ ಫಲಕ ಅನಾವರಣ ನೆರವೇರಿಸಿ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ನಿರ್ಮಲ ನಗರ ಅಭಿಯಾನ
ಕುಂದಾಪುರ:(ಜ,02): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ‘ನಿರ್ಮಲ ನಗರ ಅಭಿಯಾನ’ ಜನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಉಪ್ಪುಂದದ ಶಾಲೆಬಾಗಿಲಿನಿಂದ ಬಿಜೂರಿನ ಗ್ರಾಮ ಪಂಚಾಯತ್ ವರೆಗೆ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ನಗರವನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸುವ ಕುರಿತು ಘೋಷವಾಕ್ಯಗಳನ್ನು ಹೇಳುವುದರ ಜೊತೆಗೆ ಎನ್.ಎಸ್.ಎಸ್. ಸ್ವಯಂ ಸೇವಕರು ಸ್ವಚ್ಛತೆಯಲ್ಲಿ ತೊಡಗಿದರು. ಲಯನ್ಸ್ ಕ್ಲಬ್ ನಾವುಂದದ ಕಾರ್ಯದರ್ಶಿ […]
ಗಂಗೊಳ್ಳಿ: ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಗಂಗೊಳ್ಳಿ (ಜ.02): ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಸಾಹಿತ್ಯ ತಂಗುದಾಣ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ಪದವಿಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ನಮ್ಮ ಅರಿವು’ ಎನ್ನುವ ವಿಷಯದ ಕುರಿತಂತೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪವಿತ್ರ ಎನ್ ಮೊಗೇರಿ ಮತ್ತು ನಿಶಾ ಬಿ ಪೂಜಾರಿ […]
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ ಜಾಗ್ರತಿ ಕಾರ್ಯಕ್ರಮ
ಕಾರ್ಕಳ( ಜ,02): ಯುವಕರು ಮಾದಕ ವ್ಯಸನಗಳಿಗೆ ದಾಸರಾಗಬಾರದು,ಸಮಾಜದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಬೇಕು ಮತ್ತು ವ್ಯಸನ ಮುಕ್ತ ಜನಾಂಗ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಜಾಗ್ರತರಾಗಿರಬೇಕು. ಗಾಂಜಾ, ಅಫೀಮಿನಂತಹ ಮಾದಕ ದ್ರವ್ಯಗಳು ಭವಿಷ್ಯವನ್ನೇ ನಾಶಪಡಿಸುತ್ತದೆ .ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳೇ ಈ ದಂಧೆಯಲ್ಲಿರುವವರ ಗುರಿಯಾಗಿದ್ದಾರೆ. ಸುಲಭವಾಗಿ ಹಣ ಗಳಿಸುವ ಕಾರ್ಯಕ್ಕೆ ಮನಸ್ಸು ಮಾಡಿ ಸಿಕ್ಕಿ ಬಿದ್ದರೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ. ಯುವಕರು ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಕಾರ್ಕಳ ಎಂದು ಕಾರ್ಕಳ ನಗರ […]
ಆರ್. ಎನ್. ಶೆಟ್ಟಿ ಪಿ ಯು ಕಾಲೇಜು: ಭರತನಾಟ್ಯದಲ್ಲಿ ರಾಜ್ಯಮಟ್ಟದ ಸಾಧನೆ
ಕುಂದಾಪುರ( ಜ,01): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿಕಾ ರಾಜ್ಯಮಟ್ಟದ ಕಲೋತ್ಸವ 2022 ಸ್ಪರ್ಧೆಯ ಭರತನಾಟ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನಗಳಿಸಿರುತ್ತಾಳೆ. ಪೂರ್ವಿಕಾಳ ಈ ಕಲಾಸಾಧನೆಗೆ ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ ಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿದ್ದಾರೆ.
ಕ್ರಿಯೇಟಿವ್ ಪಿ.ಯು. ಕಾಲೇಜು ವಾರ್ಷಿಕೋತ್ಸವ ಆವಿರ್ಭವ್ – 2022
ಕಾರ್ಕಳ (ಡಿ. 26); ಕ್ರಿಯೇಟಿವ್ನಂತಹ ವಿದ್ಯಾಸಂಸ್ಥೆಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅವಕಾಶ ಕಲ್ಪಿಸುವುದರ ಜೊತೆಗೆ ಪ್ರತಿಭೆಗಳಿಗೆ ಪೂರಕವಾದ ಕಲಿಕಾ ವಾತಾವರಣವನ್ನು ಕಲ್ಪಿಸುವುದು ನಿಜಕ್ಕೂ ಶ್ಲಾಘನೀಯ ಎಂದು ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ನಡೆದ ಕ್ರಿಯೇಟಿವ್ ಆವಿರ್ಭವ್ -2022 ರ ವಾರ್ಷಿಕೋತ್ಸವದಲ್ಲಿ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳ ಉಚಿತ ಶಿಕ್ಷಣ ವ್ಯವಸ್ಥೆ ʼಕ್ರಿಯೇಟಿವ್ ಹೊಂಗಿರಣʼ […]
ಜ.22 ರಂದು ಕುಂದಾಪುರದ ಮೊಗವೀರ ಭವನ ಉದ್ಘಾಟನೆ
ಕುಂದಾಪುರ (ಡಿ.26): ಮೊಗವೀರ ಮಹಾಜನ ಸೇವಾ ಸಂಘ(ರಿ),ಬಗ್ವಾಡಿ ಹೋಬಳಿ ,ಮುಂಬೈ ಕುಂದಾಪುರ ಶಾಖೆಯ ಆಡಳಿತಕ್ಕೆ ಒಳಪಟ್ಟ ಕುಂದಾಪುರದ ಚಿಕನ್ ಸಾಲ್ ರಸ್ತೆಯ ಬಳಿ ಇರುವ ಮೊಗವೀರ ಭವನದ ಉದ್ಘಾಟನೆ ಜನವರಿ 22 ರ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ. ಮದುವೆ, ಶುಭ ಸಮಾರಂಭಗಳಿಗೆ ಅನುಕೂಲಕರವಾದ ಹವಾ ನಿಯಂತ್ರಿತ ಹಾಗೂ ನಾನ್ ಎ.ಸಿ ಸಭಾ ಭವನಗಳು,ಮಿನಿ ಹಾಲ್ ಗಳು ಹಾಗೂ ವಿಶಾಲ ಪಾರ್ಕಿಂಗ್ ಸೌಲಭ್ಯ ಲಭ್ಯವಿದ್ದು ಬುಕ್ಕಿಂಗ್ ಹಾಗೂ ಹೆಚ್ಚಿನ ಮಾಹಿತಿಗಾಗಿ […]
ಬೆಂಗಳೂರು : ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರದರ್ಶನ
ಬೆಂಗಳೂರು( ಡಿ,24): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದಿಂದ ಸಿರಿಕಲಾ ಮೇಳದ ಕಲಾವಿದರಿಂದ ಬೆಂಗಳೂರಿನ ಚಾಮರಾಜ ಪೇಟೆಯ ಉದಯಭಾನು ಕಲಾಸಂಘದಲ್ಲಿ “ಮೋಕ್ಷ ಸಂಗ್ರಾಮ” ಎಂಬ ಯಕ್ಷಗಾನ ಇತ್ತೀಚೆಗೆ ಪ್ರದರ್ಶನಗೊಂಡಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್ ಚಂದ್ರಶೇಖರ್,ಉದ್ಯಮಿಗಳಾದ ಚಂದ್ರಶೇಖರ್ ಹೆಬ್ಬಾರ್ , ರಾಘವೇಂದ್ರ ಹತ್ವಾರ್ ಮತ್ತು ಕರುಣಾಳು ಟ್ರಸ್ಟ್ ನ ಆನಗಳ್ಳಿ ಕರುಣಾಕರ ಹೆಗಡೆ ಭಾಗವಹಿಸಿ ಯಕ್ಷಗಾನಕ್ಕೆ ಶುಭ ಹಾರೈಸಿದರು. […]
ಡಾ|ಬಿ. ಬಿ. ಹೆಗ್ಡೆ ಕಾಲೇಜು: ರೋವರ್ಸ ಮತ್ತು ರೇಂಜರ್ಸ್ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ(ಡಿ,23): ರೋವರ್ಸ ಮತ್ತು ರೇಂಜರ್ಸ್ ಎನ್ನುವುದು ಹೊರಾಂಗಣ ಕೌಶಲ್ಯ ಆಧಾರಿತ ಮತ್ತು ಸಾಹಸ ಚಟುವಟಿಕೆಗಳ ಆಧಾರಿತ ಘಟಕವಾಗಿದ್ದು, ಕಾನೂನು ಪಾಲಿಸುವ ನಾಗರೀಕರಾಗಲು, ಪ್ರಕೃತಿಯ ರಕ್ಷಣೆ, ಮಾನವೀಯತೆಯ ಸೇವೆ ಮೈಗೂಡಿಸಿಕೊಳ್ಳಲು ರೋವರ್ಸ ಮತ್ತು ರೇಂಜರ್ಸ್ ಘಟಕದಿಂದ ಸಾದ್ಯವಿದೆ ಎಂದು ಉಡುಪಿ ಪೂರ್ಣ ಪ್ರಜ್ಞಾ ಕಾಲೇಜಿನ ಸಹಾಯಕ ಪ್ರಾದ್ಯಾಪಕಿ ಶ್ರೀಮತಿ ಜ್ಯೋತಿ ಆಚಾರ್ಯ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ರೋವರ್ಸ […]
ಹೆಮ್ಮಾಡಿ ಜನತಾ ಸ್ವತಂತ್ರ ಪಿ ಯು ಕಾಲೇಜಿನ ವರ್ಷಾ ರವಿಶಂಕರ್ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಡಿ,24); ಜಿಲ್ಲಾ ಸಹಕಾರ ಮಹಾಮಂಡಲ ಜಿಲ್ಲೆಯ ಪದವಿ ಪೂರ್ವ ಕಾಲೇಜುವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಸಮೃದ್ದ ಭಾರತ ನಿರ್ಮಾಣದಲ್ಲಿ ಸಹಕಾರ ಚಳುವಳಿ ಮಾತ್ರವೇ ಪ್ರಧಾನ ಪಾತ್ರವನ್ನು ವಹಿಸಬಲ್ಲುದು’ ಎಂಬ ವಿಷಯದ ಕುರಿತು ನಡೆದ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪಥಮ ಪಿ.ಯು.ಸಿ ವಿದ್ಯಾರ್ಥಿನಿ ವರ್ಷಾ ರವಿಶಂಕರ್ ಪ್ರಥಮ ಸ್ಥಾನ ಪಡೆದು ಕರ್ನಾಟಕ ಸಹಕಾರ ಮಹಾಮಂಡಲ ನಡೆಸುವ ರಾಜ್ಯಮಟ್ಟದ ಚರ್ಚಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ […]










